Homeಮುಖಪುಟಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು ಗೋಡೆಗೆ ಸೆಗಣಿ ಬಳಿದ ಪ್ರಾಂಶುಪಾಲೆ!

ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು ಗೋಡೆಗೆ ಸೆಗಣಿ ಬಳಿದ ಪ್ರಾಂಶುಪಾಲೆ!

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯದ ಲಕ್ಷ್ಮಿಬಾಯಿ ಕಾಲೇಜಿನ ಪ್ರಾಂಶುಪಾಲರು ತರಗತಿಯ ಗೋಡೆಗಳಿಗೆ ಹಸುವಿನ ಸಗಣಿ ಬಳಿಯುತ್ತಿರುವ ವಿಡಿಯೊ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗ್ಯಕ್ಕೀಡಾಗಿದೆ. ಕೃತ್ಯವನ್ನು ಸಮರ್ಥಿಸಿಕೊಂಡಿರುವ ಪ್ರಾಂಶುಪಾಲೆ ಪ್ರತ್ಯುಷ್ ವತ್ಸಲಾ, ಇದನ್ನು ಅಧ್ಯಾಪಕರ ನೇತೃತ್ವದಲ್ಲಿ ನಡೆಯುತ್ತಿರುವ ಸಂಶೋಧನಾ ಯೋಜನೆಯ ಭಾಗವಾಗಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು

”ಭಾರತದ ಸಾಂಪ್ರದಾಯಿಕ ಜ್ಞಾನವನ್ನು ಬಳಸಿಕೊಂಡು ಶಾಖದ ಒತ್ತಡ ನಿಯಂತ್ರಣದ ಅಧ್ಯಯನ” ಎಂಬ ಶೀರ್ಷಿಕೆಯ ಅಧ್ಯಯನವು ಇನ್ನೂ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ. “ಅಧ್ಯಯನ ಇನ್ನೂ ಪ್ರಕ್ರಿಯೆಯಲ್ಲಿದೆ. ಒಂದು ವಾರದ ನಂತರ ನಾನು ಪೂರ್ಣ ಸಂಶೋಧನೆಯ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತದೆ. ಪೋರ್ಟಾ ಕ್ಯಾಬಿನ್‌ಗಳಲ್ಲಿ ಸಂಶೋಧನೆಯನ್ನು ನಡೆಸಲಾಗುತ್ತಿದೆ.” ಎಂದು ಹೇಳಿದ್ದಾಋಎ.

“ನೈಸರ್ಗಿಕ ಮಣ್ಣನ್ನು ಮುಟ್ಟುವುದರಿಂದ ಯಾವುದೇ ಹಾನಿಯಿಲ್ಲದ ಕಾರಣ ಒಂದಿಷ್ಟು ನಾನೆ ಬಳಿದಿದ್ದೇನೆ. ಕೆಲವು ಜನರು ಪೂರ್ಣ ವಿವರಗಳನ್ನು ತಿಳಿಯದೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ. ವೀಡಿಯೊದಲ್ಲಿ, ವತ್ಸಲಾ ಅವರು ತಮ್ಮ ಸಿಬ್ಬಂದಿಯ ಸಹಾಯದಿಂದ ಗೋಡೆಗಳ ಮೇಲೆ ಸಗಣಿ ಬಳಿಯುತ್ತಿರುವುದು ದಾಖಲಾಗಿದೆ.

ಸಿ ಬ್ಲಾಕ್‌ನಲ್ಲಿ ತರಗತಿ ಕೊಠಡಿಗಳನ್ನು ತಂಪಾಗಿಸಲು ಸ್ಥಳೀಯ ವಿಧಾನಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಪ್ರತಿಪಾದಿಸಿ ಕಾಲೇಜಿನ ಶಿಕ್ಷಕರ ಗುಂಪಿನಲ್ಲಿ ಅವರೇ ಈ ವೀಡಿಯೊವನ್ನು ಸ್ವತಃ ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

“ಈ ಕೊಠಡಿಗಳಲ್ಲಿ ತರಗತಿಗಳನ್ನು ಹೊಂದಿರುವವರಿಗೆ ಶೀಘ್ರದಲ್ಲೇ ಈ ಕೊಠಡಿಗಳು ಹೊಸ ರೂಪದಲ್ಲಿ ಸಿಗುತ್ತವೆ. ನಿಮ್ಮ ಬೋಧನಾ ಅನುಭವವನ್ನು ಆಹ್ಲಾದಕರವಾಗಿಸಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಅವರು ಸಂದೇಶದಲ್ಲಿ ಬರೆದಿದ್ದಾರೆ ಎಂದು ವರದಿ ಹೇಳಿದೆ.

1965 ರಲ್ಲಿ ಸ್ಥಾಪನೆಯಾದ ಮತ್ತು ಝಾನ್ಸಿಯ ರಾಣಿ ಲಕ್ಷ್ಮಿಬಾಯಿ ಅವರ ಹೆಸರನ್ನು ಇಡಲಾದ ಈ ಕಾಲೇಜು ಅಶೋಕ್ ವಿಹಾರ್‌ನಲ್ಲಿದೆ ಮತ್ತು ದೆಹಲಿ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಕಾಲೇಜು ಐದು ಬ್ಲಾಕ್‌ಗಳನ್ನು ಒಳಗೊಂಡಿದ್ದು, ಸೆಗಣಿ ಬಳಿಯುವ ಯೋಜನಯನ್ನು ಒಂದು ಬ್ಲಾಕನ್ನು ಕೇಂದ್ರಿಕರಿಸಿ ನಡೆಸಲಾಗಿದೆ ಎಂದು ವರದಿ ಹೇಳಿದೆ. ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...