Homeಅಂತರಾಷ್ಟ್ರೀಯಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ 'ಸುಮುದ್ ಫ್ಲೋಟಿಲ್ಲಾ'

ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

- Advertisement -
- Advertisement -

ಇಸ್ರೇಲ್ ದಿಗ್ಬಂಧನ ಮುರಿದು ಗಾಝಾದ ಜನತೆಗೆ ಮಾನವೀಯ ನೆರವು ತಲುಪಿಸಲು ಹೊರಟಿರುವ ಸುಮಾರು 50 ಹಡಗುಗಳ ತಂಡ ‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ ಗಾಝಾ ತೀರದಿಂದ 150 ನಾಟಿಕಲ್ ಮೈಲುಗಳು (278 ಕಿಮೀ) ದೂರದಲ್ಲಿರುವ ‘ಅತಿ ಅಪಾಯಕಾರಿ ವಲಯ’ಕ್ಕೆ ತಲುಪಿದೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ಬುಧವಾರ (ಅ.1) ವರದಿ ಮಾಡಿದೆ.

ಯಾವುದೇ ಹಾನಿ ಮಾಡದೆ ಫ್ಲೋಟಿಲ್ಲಾ ಗಾಝಾ ತಲುಪಲು ಅನುವು ಮಾಡಿಕೊಡಬೇಕೆಂದು ವಿಶ್ವಸಂಸ್ಥೆಯ ವಿಶೇಷ ವರದಿಗಾರ ಫ್ರಾನ್ಸೆಸ್ಕಾ ಅಲ್ಬನೀಸ್ ಮತ್ತು ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಇಸ್ರೇಲ್‌ಗೆ ಒತ್ತಾಯಿಸಿದ್ದಾರೆ.

ಅಂತಾರಾಷ್ಟ್ರೀಯ ಜಲಪ್ರದೇಶದ ಮೂಲಕ ಫ್ಲೋಟಿಲ್ಲಾ ಸುರಕ್ಷಿತವಾಗಿ ಸಂಚರಿಸಲು ಸ್ಪೇನ್ ಮತ್ತು ಇಟಲಿಯ ಹಡಗುಗಳು ಕಾವಲು ನಿಂತಿವೆ. ಟರ್ಕಿ ಡ್ರೋನ್‌ಗಳ ಮೂಲಕ ಇಸ್ರೇಲ್‌ನ ಸಂಭಾವ್ಯ ದಾಳಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಅಲ್‌-ಜಝೀರಾ ವರದಿ ಹೇಳಿದೆ.

ಗಾಝಾ ಸಮೀಪಿಸುತ್ತಿದ್ದಂತೆ ಹಡಗುಗಳಲ್ಲಿರುವ ಸುರಕ್ಷತೆಯ ದೃಷ್ಟಿಯಿಂದ ಫ್ಲೋಟಿಲ್ಲಾ ತಂಡ ವಿಡಿಯೋ ನೇರ ಪ್ರಸಾರ ಮಾಡುತ್ತಿದೆ.

ಇಸ್ರೇಲ್‌ ಫ್ಲೋಟಿಲ್ಲಾ ತಂಡವನ್ನು ತಡೆಯುವುದಾಗಿ ಹೇಳಿದೆ. ಅದಕ್ಕೆ ಬೇಕಾದ ಸಿದ್ದತೆಗಳನ್ನು ಮಾಡಿಕೊಂಡಿದೆ. ಆದರೆ, ಮಾನವೀಯ ನೆರವು ತಲುಪಿಸುವ ಬಗ್ಗೆ ಏನೂ ಹೇಳಿಲ್ಲ. ಈ ವಿಚಾರದಲ್ಲಿ ಸ್ಥಾಪಿತ ಅಂತಾರಾಷ್ಟ್ರೀಯ ನಿಯಮಗಳು ಇವೆ ಎಂದು ವರದಿಗಳು ಹೇಳಿವೆ.

ನಾಲ್ಕು ಗಂಟೆಗಳ ಮೊದಲು ಇನ್‌ಸ್ಟಾಗ್ರಾಂ ಮೂಲಕ ವಿಡಿಯೋವೊಂದನ್ನು ಹಂಚಿಕೊಂಡಿರುವ ಫ್ಲೋಟಿಲ್ಲಾ ತಂಡ, “ಇಸ್ರೇಲಿ ಮಿಲಿಟರಿ ಹಡಗೊಂದು ನಮ್ಮ ದೋಣಿಗಳನ್ನು ಬೆದರಿಸಲು ಬಂದಿದೆ. ನಮ್ಮ ಸಂವಹನ ವ್ಯವಸ್ಥೆಗಳಿಗೆ ಹಾನಿ ಮಾಡಿದೆ. ನಮ್ಮ ಪ್ರಮುಖ ದೋಣಿಗಳಾದ ಅಲ್ಮಾ ಮತ್ತು ಸಿರಿಯಸ್ ಅನ್ನು ಸುತ್ತುವರೆಯುವ ಪ್ರಯತ್ನ ಮಾಡಿದೆ. ಎಲೆಕ್ಟ್ರಾನಿಕ್ ಸಾಧನಗಳ ನಷ್ಟದ ಹೊರತಾಗಿಯೂ, ನಾವು ಯಾರೂ ಗಾಯಗೊಂಡಿಲ್ಲ. ನಾವು ದಿಗ್ಬಂಧನ ಮುರಿಯುತ್ತೇವೆ. ಮಾನವೀಯ ನೆರವು ತಲುಪಿಸುತ್ತೇವೆ” ಎಂದು ಹೇಳಿದೆ.

ಟ್ರಂಪ್ ಬಜೆಟ್‌ಗೆ ಸಿಗದ ಅನುಮೋದನೆ: ಅಮೆರಿಕ ಸರ್ಕಾರದ ಕೆಲಸಗಳು ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...