Homeಮುಖಪುಟರೈತ ಹೋರಾಟಕ್ಕೆ ಬೆಂಬಲ ನೀಡಿದ ಚಿಪ್ಕೋ ಚಳುವಳಿಯ ನೇತಾರ ಸುಂದರ್‌ಲಾಲ್ ಬಹುಗುಣ

ರೈತ ಹೋರಾಟಕ್ಕೆ ಬೆಂಬಲ ನೀಡಿದ ಚಿಪ್ಕೋ ಚಳುವಳಿಯ ನೇತಾರ ಸುಂದರ್‌ಲಾಲ್ ಬಹುಗುಣ

ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರಿಗೆ ನನ್ನ ಬೆಂಬಲ ಇದೆ. ರೈತರ ಹೋರಾಟವನ್ನು ಮನ್ನಿಸಿ ಕೇಂದ್ರ ಸರ್ಕಾರ ಈ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಕಳೆದ 23 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಹೋರಾಡುತ್ತಿರುವ ರೈತರಿಗೆ ಚಿಪ್ಕೋ ಚಳುವಳಿಯ ನೇತಾರ ಸುಂದರ್‌ಲಾಲ್ ಬಹುಗುಣ ಬೆಂಬಲ ಘೋಷಿಸಿದ್ದಾರೆ.

“ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರಿಗೆ ನನ್ನ ಬೆಂಬಲ ಇದೆ. ರೈತರ ಹೋರಾಟವನ್ನು ಮನ್ನಿಸಿ ಕೇಂದ್ರ ಸರ್ಕಾರ ಈ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಗಾಂಧಿಯವರ ಅನುಯಾಯಿಯದ ಸುಂದರ್‌ಲಾಲ್ ಬಹುಗೂಣರವರು ಕಾಡಿನ ಮರಗಳನ್ನು ರಕ್ಷಿಸಲು ಉತ್ತರಪ್ರದೇಶದಲ್ಲಿ 26 ಮಾರ್ಚ್ 1974 ಚಿಪ್ಕೊ ಚಳುವಳಿಯನ್ನು ಆರಂಭಿಸಿ ದೇಶದಾದ್ಯಂತ ಪ್ರಖ್ಯಾತರಾದರು. ಅದು ನಂತರದಲ್ಲಿ ಕರ್ನಾಟದಲ್ಲಿನ ಅಪ್ಪಿಕೋ ಚಳುವಳಿಗೂ ಪ್ರೇರಣೆಯಾಗಿತ್ತು.

ರೈತರ ಹೋರಾಟಕ್ಕೆ ದೇಶ ವಿದೇಶಗಳಿಂದಲೂ ಬೆಂಬಲ ಹರಿದುಬರುತ್ತಿದೆ. ನಿನ್ನೆ ಪ್ರತಿಭಟನಾ ಸ್ಥಳಕ್ಕೆ ಬಾಲಿವುಡ್‌ನ ಖ್ಯಾತ ನಟಿ ಸ್ವರ ಭಾಸ್ಕರ್ ಭೇಟಿ ನೀಡಿ ಬೆಂಬಲ ಸೂಚಿಸಿದ್ದರು. ಇಂದು ತಮಿಳುನಾಡಿನ ಡಿಎಂಕೆ ಪಕ್ಷವು ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದೆ.

ಕೃಷಿ ಕಾನೂನಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ನಿನ್ನೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂ ಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.


ಇದನ್ನೂ ಓದಿ: ತಮಿಳುನಾಡು: ರೈತ ಹೊರಾಟವನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ಕೈಗೊಂಡ ಡಿಎಂಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಮ ಮಂದಿರ, ಸಿಖ್ಖರ ಉಲ್ಲೇಖ ನೀತಿ ಸಂಹಿತೆ ಉಲ್ಲಂಘನೆಯಾಗದು: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್...

0
ರಾಮ ಮಂದಿರ ನಿರ್ಮಾಣ, ಸಿಖ್‌ ತೀರ್ಥಯಾತ್ರೆಯ ಹಾದಿಯಾದ ಕರ್ತಾರ್‌ಪುರ್‌ ಸಾಹಿಬ್‌ ಕಾರಿಡಾರ್‌ ಅಭಿವೃದ್ಧಿ, ಸಿಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್‌ ಪ್ರತಿಗಳನ್ನು ಅಫ್ಗಾನಿಸ್ತಾನದಿಂದ ವಾಪಸ್‌ ತರಲು ಸರ್ಕಾರದ ಕ್ರಮ ಕೈಗೊಂಡಿರುವುದನ್ನು ಉಲ್ಲೇಖಿಸಿ...