Homeಅಂತರಾಷ್ಟ್ರೀಯಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

9 ತಿಂಗಳಿನಿಂದ ಬಾಹ್ಯಾಕಾಶದಲ್ಲಿ ಸಿಲುಕಿದ್ದ ಗಗನಯಾನಿಗಳು

- Advertisement -
- Advertisement -

ಕೇವಲ ಎಂಟು ದಿನಗಳ ಭೇಟಿಗೆ ತೆರಳಿ 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್ಎಸ್‌) ಸಿಲುಕಿದ್ದ ಅಮೆರಿಕದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ತಂಡ ಕೊನೆಗೂ ಸುರಕ್ಷಿತವಾಗಿ ಭೂಮಿಗೆ ಹಿಂದಿರುಗಿದೆ.

ನಿರೀಕ್ಷೆಯಂತೆ ಅಮೆರಿಕದ ಸ್ಥಳೀಯ ಕಾಲಮಾನ ಮಾರ್ಚ್ 18, 2025 ಸಂಜೆ 5.57 ಮತ್ತು ಭಾರತೀಯ ಕಾಲಮಾನ ಮಾರ್ಚ್‌ 19, 2025 ಮುಂಜಾನೆ 3.27ಕ್ಕೆ ಅಮೆರಿಕ ಕರಾವಳಿಯ ಫ್ಲೋರಿಡಾದ ತಲ್ಲಾಹಸ್ಸೀಯಲ್ಲಿ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್, ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಅವರನ್ನು ಹೊತ್ತ ಸ್ಪೇಸ್ ಎಕ್ಸ್‌ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಲ್ಯಾಂಡ್ ಆಗಿದೆ.

ಪ್ಯಾರಚೂಟ್‌ಗಳ ಸಹಾಯದಿಂದ ಡ್ರ್ಯಾಗನ್‌ ಬಾಹ್ಯಾಕಾಶ ನೌಕೆ ಸಮುದ್ರದ ಮೇಲೆ ಇಳಿಯುತ್ತಿದ್ದಂತೆ ರಕ್ಷಣಾ ಬೋಟ್‌ಗಳು ಸಮೀಪಕ್ಕೆ ಧಾವಿಸಿತು. ಬಾಹ್ಯಾಕಾಶ ನೌಕೆಯಲ್ಲಿದ್ದ ಗಗನಯಾನಿಗಳು ಬೋಟ್‌ಗೆ ಸ್ಥಳಾಂತರಗೊಂಡರು. ನಂತರ ಅವರನ್ನು ದಡಕ್ಕೆ ಕರೆ ತರಲಾಯಿತು.

ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ಗಗನಯಾನಿಗಳು ಹೂಸ್ಟನ್‌ನಲ್ಲಿರುವ ನಾಸಾದ ಜಾನ್ಸನ್ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ ಎಂದು ನಾಸಾ ತಿಳಿಸಿದೆ.

ನಿನ್ನೆ (ಮಾ.18) ಬೆಳಿಗ್ಗೆ 10:35ಕ್ಕೆ (ಭಾರತೀಯ ಕಾಲಮಾನ) ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಐಎಸ್‌ಎಸ್‌ನಿಂದ ಹೊರಟಿತ್ತು. ಡ್ರ್ಯಾಗನ್ ಐಎಸ್‌ಎಸ್‌ನಿಂದ ಬೇರ್ಪಡುವ ವಿಡಿಯೋವನ್ನು ಹಂಚಿಕೊಂಡಿದ್ದ ನಾಸಾ, ಮುಂದಿನ 17 ಗಂಟೆಗಳಲ್ಲಿ ಅದು ಭೂಮಿಗೆ ತಲುಪಲಿದೆ ಎಂದಿತ್ತು. ಅದರಂತೆ ಸರಿಯಾದ ಸಮಯಕ್ಕೆ ತಲುಪಿದೆ.

ಬಾಹ್ಯಾಕಾಶ ನೌಕೆಯಿಂದ ಹೊರ ಬಂದ ಬಳಿಕ ಸುನಿತಾ ಮತ್ತು ಬುಚ್‌ ಕೈ ಬೀಸುತ್ತಾ, ನಗುತ್ತಾ ತೆರಳಿದ್ದಾರೆ. ಬಾಹ್ಯಾಕಾಶ ಮತ್ತು ಭೂಮಿಯ ವಾತಾವರಣ ವ್ಯತಿರಿಕ್ತವಾಗಿ ಇರುವುದರಿಂದ ಅವರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಹಾಗಾಗಿ, ನಾಸಾ ಅವರ ಆರೋಗ್ಯದ ಮೇಲೆ ನಿಗಾ ಇಡಲಿದೆ ಎನ್ನಲಾಗಿದೆ.

ಸುನಿತಾ ವಿಲಿಯಮ್ಸ್ ಹಾಗೂ ಬುಚ್‌ ವಿಲ್ಮೋರ್‌ ಕಳೆದ ವರ್ಷ (2024) ಜೂನ್‌ 5ರಂದು, ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದರು.

ಹಿಂದಿರುಗುವ ಸಮಸ್ಯೆ ಉಂಟಾದ ನಡುವೆಯೂ, ಸುನಿತಾ ಮತ್ತು ಬುಚ್ ಅವರನ್ನು ನಾಸಾ ಸ್ಪೇಸ್‌ಎಕ್ಸ್‌ನ ಕ್ರೂ-9 ಕಾರ್ಯಾಚರಣೆಗೆ ಮರು ನಿಯೋಜಿಸಿತ್ತು. ಇವರಿಬ್ಬರಿಗೆ ಸ್ಥಳಾವಕಾಶ ಕಲ್ಪಿಸುವ ಸಲುವಾಗಿ ನಾಲ್ವರ ಬದಲಿಗೆ ಇಬ್ಬರು ಸಿಬ್ಬಂದಿಯೊಂದಿಗೆ ಸೆಪ್ಟೆಂಬರ್‌ನಲ್ಲಿ ಸ್ಪೇಸ್‌ಎಕ್ಸ್‌ನ ಕ್ರೂ-9 ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ನಾಸಾ ಐಎಸ್‌ಎಸ್‌ಗೆ ಕಳುಹಿಸಿತ್ತು.

ಸುನಿತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್ ತೆರಳಿದ 9 ತಿಂಗಳ ನಂತರ ಕಳೆದ ಭಾನುವಾರ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್ (SpaceX’s Crew-10) ಐಎಸ್‌ಎಸ್‌ ತಲುಪಿತ್ತು. ಆ ಬಳಿಕ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್, ಸ್ಪೇಸ್‌ಎಕ್ಸ್‌ನ ಕ್ರೂ-9ನಲ್ಲಿ ತೆರಳಿದ್ದ ನಾಸಾದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಭೂಮಿಗೆ ಮರಳಿದ್ದಾರೆ.

ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್‌ನಲ್ಲಿ ತೆರಳಿದ ನಾಲ್ವರು ಗಗಯಾನಿಗಳಾದ ನಾಸಾದ ಆ್ಯನ್‌ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್‌, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಅವರು ಕೆಲ ದಿನಗಳ ಕಾಲ ಐಎಸ್‌ಎಸ್‌ನಲ್ಲಿ ಉಳಿಯಲಿದ್ದಾರೆ.

ನಾಪತ್ತೆಯಾದ ಮಗಳು| ಸಾವನ್ನಪ್ಪಿದ್ದಾಳೆಂದು ಘೋಷಿಸಲು ಕೋರಿದ ಪೋಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...