Homeಅಂತರಾಷ್ಟ್ರೀಯಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ಹಿಂದಿರುಗುವ ಸಮಯ ಸನ್ನಿಹಿತ; ದಿನಾಂಕ, ಸ್ಥಳ ಪ್ರಕಟಿಸಿದ ನಾಸಾ

ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ಹಿಂದಿರುಗುವ ಸಮಯ ಸನ್ನಿಹಿತ; ದಿನಾಂಕ, ಸ್ಥಳ ಪ್ರಕಟಿಸಿದ ನಾಸಾ

- Advertisement -
- Advertisement -

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಒಂಬತ್ತು ತಿಂಗಳಿಗೂ ಹೆಚ್ಚು ಸಮಯದಿಂದ ಸಿಲುಕಿಕೊಂಡಿರುವ ಅಮೆರಿಕದ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಮಂಗಳವಾರ (ಮಾ.18) ಸಂಜೆ ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ತಿಳಿಸಿದೆ.

ಈ ಮೊದಲು ಮಾರ್ಚ್​ 19ಕ್ಕೆ ಸುನಿತಾ ಮತ್ತು ಬುಚ್ ಭೂಮಿಗೆ ಮರಳುತ್ತಾರೆ ಎಂದು ನಾಸಾ ಹೇಳಿತ್ತು. ಭಾನುವಾರ ಸಂಜೆ ಮತ್ತೊಂದು ಅಪ್​ಡೇಟ್ಸ್ ನೀಡಿರುವ ನಾಸಾ, ಮಾರ್ಚ್​ 18ರಂದು ಭೂಮಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿಸಿದೆ. ನಾಳೆ ಸಂಜೆ 5.57ರ ಸುಮಾರಿಗೆ ಭೂಮಿಗೆ ಅಂದರೆ, ಫ್ಲೊರಿಡಾದಲ್ಲಿ ಕಡಲಿಗೆ ಲ್ಯಾಂಡ್ (Splash Down Off) ಆಗಲಿದ್ದಾರೆ ಎಂದಿದೆ.

“ಬಾಹ್ಯಾಕಾಶದ ಪರಿಸ್ಥಿತಿಗೆ ಅನುಗುಣವಾಗಿ ಗಗನಯಾನಿಗಳ ವಾಪಾಸಾತಿ ಸಮಯ ನಿಗದಿಯಾಗುತ್ತಿದೆ. ಹವಾಮಾನ ಪರಿಸ್ಥಿತಿ ಕೂಡ ಸಹಕಾರ ನೀಡಬೇಕಿದೆ” ಎಂದು ನಾಸಾ ಹೇಳಿದೆ.

ಇಬ್ಬರು ಗಗನಯಾನಿಗಳನ್ನು ಕರೆತರಲು ನಾಸಾದ ಕ್ರ್ಯೂ–10 ಮಿಷನ್‌ ಅನ್ನು ಶುಕ್ರವಾರ(ಮಾ.14) ಯಶಸ್ವಿಯಾಗಿ ಉಡಾವಣೆ ಮಾಡಲಾಗಿತ್ತು. ‘ಕ್ರ್ಯೂ ಡ್ರ್ಯಾಗನ್’ ಹೆಸರಿನ ಗಗನನೌಕೆಯನ್ನು ಹೊತ್ತು ಸ್ಪೇಸ್‌ಎಕ್ಸ್‌ನ ‘ಫಾಲ್ಕನ್‌ 9’ ರಾಕೆಟ್ ಪ್ಲೋರಿಡಾದ ಕೆನಡಿ ಸ್ಪೇಸ್ ಸೆಂಟರ್‌ನಿಂದ ಸ್ಥಳೀಯ ಕಾಲಮಾನ ಶುಕ್ರವಾರ ರಾತ್ರಿ 7.03ಕ್ಕೆ ನಭಕ್ಕೆ ಚಿಮ್ಮಿತ್ತು.

ಈ ಗಗನನೌಕೆಯಲ್ಲಿ ನಾಲ್ವರು ಗಗನಯಾನಿಗಳು ಐಎಸ್‌ಎಸ್‌ಗೆ ಪ್ರಯಾಣಿಸಿದ್ದಾರೆ. ನಾಸಾದ ಆ್ಯನ್‌ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್‌, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಅವರು ಭಾನುವಾರ (ಮಾ.16) ಐಎಸ್‌ಎಸ್‌ಗೆ ತಲುಪಿದ್ದಾರೆ.

ಗಗನನೌಕೆಯು ಮರಳುವಾಗ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್‌ ಅಲ್ಲದೆ, ಐಎಸ್‌ಎಸ್‌ನಲ್ಲಿರುವ ನಿಕ್‌ ಹೇಗ್‌ ಮತ್ತು ಅಲೆಕ್ಸಾಂಡರ್‌ ಗೊರ್ಬನೊವ್ ಅವರನ್ನೂ ಕರೆತರಲಿದೆ. ಇವರಿಬ್ಬರು ನಾಸಾದ ಕ್ರ್ಯೂ–9 ಮಿಷನ್‌ನಲ್ಲಿ ಐಎಸ್‌ಎಸ್‌ಗೆ ತೆರಳಿದ್ದರು.

ಸುನಿತಾ ವಿಲಿಯಮ್ಸ್ ಹಾಗೂ ಬುಚ್‌ ವಿಲ್ಮೋರ್‌ ಅವರು ಕಳೆದ ವರ್ಷ (2024) ಜೂನ್‌ 5ರಂದು, ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದಾರೆ.

ಹೌತಿ ಬಂಡುಕೋರರ ಮೇಲೆ ಭಾರೀ ದಾಳಿ ನಡೆಸಿದ ಅಮೆರಿಕ; 24 ಸಾವು-ಹಲವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...