Homeಮುಖಪುಟಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

ಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

- Advertisement -
- Advertisement -

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಕ್ಷೇತ್ರಗಳಲ್ಲಿ ಭರ್ಜರಿ ಜಯಗಳಿಸಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಆಡಳಿತರೂಢ ಬಿಜೆಪಿ ಹೀನಾಯ ಸೋಲಿನೊಂದಿಗೆ ಮುಖಭಂಗ ಅನುಭವಿಸಿದೆ. ಈ ರೀತಿಯ ನಿರ್ಣಾಯಕ ಫಲಿತಾಂಶಕ್ಕೆ ಕಾರಣವೇನು ಎಂಬ ಚರ್ಚೆಗಳು ಆರಂಭವಾಗಿವೆ. ಕಾಂಗ್ರೆಸ್ ಭರ್ಜರಿ ಜಯ ಕಾಣಲು ಕಾರಣವಾದ 5 ಅಂಶಗಳನ್ನು ಪಟ್ಟಿಮಾಡುವ ಪ್ರಯತ್ನ ಇಲ್ಲಿದೆ.

  1. ಕಾಂಗ್ರೆಸ್ ಘೋಷಿಸಿದ 5 ಗ್ಯಾರಂಟಿ ಯೋಜನೆಗಳು

ಕಾಂಗ್ರೆಸ್ ಪಕ್ಷವು ಪ್ರಣಾಳಿಕೆ ಬಿಡುಗಡೆಗೂ ಮುನ್ನವೇ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಮನೆಯೊಡತಿಗೆ 2000 ರೂ, ನಿರುದ್ಯೋಗಿಗಳಿಗೆ 3000 ರೂ ನಿರುದ್ಯೋಗ ಭತ್ಯೆ, ಬಿಪಿಎಲ್ ಕಾರ್ಡುದಾರರಿಗೆ ತಲಾ 10ಕೆಜಿ ಅಕ್ಕಿ, ಮಹಿಳೆಯರಿಗೆ ಉಚಿತ ಬಸ್ ಪಾಸ್ ಎಂಬ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಸುಲಭವಾಗಿ ತಲುಪಿದವು.

2. ಜಾತ್ಯತೀತತೆ ಬೆಂಬಲಿಸಿದ್ದು, ದೃಢವಾಗಿ ನಿಂತಿದ್ದು

ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಮತೀಯ ಗೂಂಡಾಗಿರಿ, ದ್ವೇ‍ಷ ಭಾಷಣ, ಅನ್ಯಧರ್ಮ ದ್ವೇ‍ಷಗಳಲ್ಲಿ ಮುಳುಗಿಹೋಯಿತು. ಹಲಾಲ್-ಹಿಜಾಬ್, ಮುಸ್ಲಿಮರಿಗೆ ವ್ಯಾಪಾರಕ್ಕೆ ಅಡ್ಡಿ, ಉರಿಗೌಡ – ನಂಜೇಗೌಡ ವಿವಾದ ಹುಟ್ಟು ಹಾಕಿದರು. ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದರು. ಆದರೆ ಈ ಎಲ್ಲಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜಾತ್ಯಾತೀತತೆಯ ಪರವಾಗಿ ದೃಢವಾಗಿ ನಿಂತಿತು. ಭಾರತ್ ಜೋಡೋ ಯಾತ್ರೆ ನಡೆಸಿ ದ್ವೇಷದ ವಿರುದ್ದ ದನಿಯೆತ್ತಿದ್ದು. ತಮ್ಮ ಪ್ರಣಾಳಿಕೆಯನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದುಕೊಂಡಿತು. ಅದು ಅವರಿಗೆ ಜಯ ತಂದುಕೊಟ್ಟಿತು.

3. ಪ್ರಾದೇಶಿಕತೆ ಪರ ನಿಂತ ಕಾಂಗ್ರೆಸ್

ಬಿಜೆಪಿಯ ಹಿಂದಿ ಹೇರಿಕೆ, ಅಮುಲ್ ಮಾರಾಟ, ಜಿಎಸ್‌ಟಿ ಮೋಸ, ನೆರೆ-ಬರ ಪರಿಹಾರ ಕೊಡದಿರುವುದನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿತು. ಕನ್ನಡ ಮತ್ತು ಕರ್ನಾಟಕದ ಪರ ದನಿ ಎತ್ತಿತ್ತು. ಅದು ಅವರ ಗೆಲುವಿಗೆ ಸಹಕಾರಿಯಾಯಿತು.

4. ಟಿಕೆಟ್ ಹಂಚಿಕೆಯಲ್ಲಿ ಜಾಣತನ: ಬೇರೆ ಪಕ್ಷಗಳಿಂದ ಪಕ್ಷಕ್ಕೆ ಸೆಳೆದುಕೊಂಡಿದ್ದು

ಕಾಂಗ್ರೆಸ್ ಪಕ್ಷ ಬೇಗನೇ ಟಿಕೆಟ್ ಘೋಷಿಸಿತು. ಬಂಡಾಯವನ್ನು ಸಮರ್ಪಕವಾಗಿ ನಿಭಾಯಿಸಿತು. ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಸೇರಿದಂತೆ ಬೇರೆ ಪಕ್ಷಗಳ ಟಿಕೆಟ್ ವಂಚಿತರನ್ನು ಸೆಳೆದುಕೊಂಡಿತು. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಒಟ್ಟಾಗಿ ಚುನಾವಣೆ ಎದುರಿಸಿ ಗೆಲುವು ಕಂಡರು.

5. ಬಿಜೆಪಿ ಸರ್ಕಾರದ ವಿರುದ್ಧವಿದ್ದ ಆಡಳಿತವಿರೋಧಿ ಅಲೆ, 40% ಕಮಿಷನ್ ವಿರುದ್ಧ ಜನಾಕ್ರೋಶ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ಬಿಜೆಪಿ ಜನಪರ ಆಡಳಿತ ನೀಡುವಲ್ಲಿ ವಿಫಲವಾಯಿತು. ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಿತು. ಬಿಪಿಎಲ್ ಅರ್ಜಿದಾರರಿಗೆ ನೀಡುವ ಅಕ್ಕಿಯ ಕಡಿತ ಮಾಡಿತು. ಕೋವಿಡ್ ನಿರ್ವಹಣೆಯಲ್ಲಿ, ಆಕ್ಸಿಜನ್, ಆಸ್ಪತ್ರೆ ಬೆಡ್ ಪೂರೈಸುವಲ್ಲಿ ಸಂಪೂರ್ಣ ವಿಫಲವಾಯಿತು. ಪಠ್ಯ ಪುಸ್ತಕ  ಒಂದು ಕಡೆ ಹಿಂದಿನ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಕಡಿತ ಮಾಡಿದರೆ ಇನ್ನೊಂದು ಕಡೆ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಯಿತು. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ನಿರಂತರವಾಗಿ ಏರಿದ್ದು ಜನರನ್ನು ಬಾಧಿಸತೊಡಗಿತು. ಇದೆಲ್ಲವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಕಾಂಗ್ರೆಸ್ ಶಕ್ತಿ ಮೀರಿ ಯತ್ನಿಸಿತು. ಸಾಮಾಜಿಕ ಜಾಲತಾಣಗಳ ಮೂಲಕ ಮಾತ್ರವಲ್ಲದೇ ಹಲವಾರು ಬೀದಿ ಹೋರಾಟಗಳನ್ನು ನಡೆಸಿತು.

ಸಾಲು ಸಾಲು ಹಗರಣಗಳಲ್ಲಿ ಮುಳುಗಿದ ಬಿಜೆಪಿ –  ಟ್ಯಾಗ್ ಕೊಟ್ಟ ಕಾಂಗ್ರೆಸ್

ಯಡಿಯೂರಪ್ಪನವರು ಕರ್ನಾಟಕದ ಸಿಎಂ ಆಗುತ್ತಲೆ ಅವರ ಪುತ್ರ ಸೂಪರ್ ಸಿಎಂ ಎನಿಸಿಕೊಂಡರು. ಸರ್ಕಾರದಲ್ಲಿ ಹಸ್ತಕ್ಷೇಪ ಮಾತ್ರವಲ್ಲದೇ ಭಾರೀ ಭ್ರಷ್ಟಾಚಾರ ನಡೆಸುತ್ತಾರೆ ಎಂಬ ಆರೋಪಗಳು ಕೇಳಿ ಬಂದವು. (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳ ನಗದನ್ನೂ ಮತ್ತು ಶೆಲ್ ಕಂಪೆನಿಗಳ ಮೂಲಕವಾಗಿಯೂ ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸಿದ್ದರು. ಈ ಕುರಿತು ಪವರ್ ಟಿವಿ ಸ್ಟಿಂಗ್ ಆಪರೇಷನ್ ನಡೆಸಿ ನಿರಂತರ ವರದಿ ಮಾಡಿತ್ತು. ಈ ಪ್ರಕರಣದ ತನಿಖೆ ಇಂದಿಗೂ ನಡೆಯುತ್ತಿದೆ.

ಇನ್ನು ಬೊಮ್ಮಾಯಿಯವರು ಸಿಎಂ ಆಗುತ್ತಲೇ 40% ಕಮಿಷನ್ ಸರ್ಕಾರ, ಬಿಟ್ ಕಾಯಿನ್ ಹಗರಣ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ – ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ, ಮಠಗಳ ಅನುದಾನದಲ್ಲಿಯೂ 30% ಕಮಿಷನ್!, ಪಿಎಸ್‌ಐ ಹಗರಣ, ಮತದಾರರ ಪಟ್ಟಿ ಹಗರಣ, ಸ್ಯಾಂಟ್ರೋ ರವಿ ಕೇಸ್, ಮಾಡಾಳ್ ಹಗರಣ.. ಹೀಗೆ ಪಟ್ಟಿ ಬೆಳೆಯುತ್ತಲೇ ಇರುವುದು ಬಿಜೆಪಿ ಸೋಲಿಗೆ, ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಯಿತು.

ಇದನ್ನೂ ಓದಿ: ಮುರಿಯಲಾಗದ 37 ವರ್ಷಗಳ ಇತಿಹಾಸ; ಆಡಳಿತರೂಢ ಸರ್ಕಾರ ಕೆಡವಿದ ಮತದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...