Homeಮುಖಪುಟಮಹಿಳಾ ಸಿಬ್ಬಂದಿ 'ಮುಟ್ಟು' ಸಾಬೀತಿಗೆ 'ಸ್ಯಾನಿಟರಿ ಪ್ಯಾಡ್‌'ನ ಫೋಟೋ ಕೇಳಿದ ಮೇಲ್ವಿಚಾರಕ

ಮಹಿಳಾ ಸಿಬ್ಬಂದಿ ‘ಮುಟ್ಟು’ ಸಾಬೀತಿಗೆ ‘ಸ್ಯಾನಿಟರಿ ಪ್ಯಾಡ್‌’ನ ಫೋಟೋ ಕೇಳಿದ ಮೇಲ್ವಿಚಾರಕ

- Advertisement -
- Advertisement -

ಮಹಿಳಾ ಸಿಬ್ಬಂದಿಗಳು ತಮ್ಮ ‘ಮುಟ್ಟು’ ಸಾಬೀತು ಪಡಿಸಲು, ತಾವು ಧರಿಸಿರುವ ಸ್ಯಾನಿಟರಿ ಪ್ಯಾಡ್‌ನ ಫೋಟೋ ತೆಗೆದು, ತಂದು ತೋರಿಸುವಂತೆ ಕೇಳಲಾಗಿರುವ ಅಮಾನವೀಯ ಘಟನೆ ಹರಿಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ವಿಶ್ವವಿದ್ಯಾಲಯದಲ್ಲಿ ನೈರ್ಮಲ್ಯ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಸ್ಯಾನಿಟರಿ ಪ್ಯಾಡ್‌ಗಳ ಛಾಯಚಿತ್ರ ತೆಗೆಯುವಂತೆ ಅವರ ಮೇಲ್ವಿಚಾರಕರು ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ.

ಅಕ್ಟೋಬರ್ 26 ರಂದು ಕ್ಯಾಂಪಸ್‌ನಲ್ಲಿ ಕೆಲ ಮಹಿಳೆಯರು ತಡವಾಗಿ ಕೆಲಸಕ್ಕೆ ಬಂದಿದ್ದರು. ಅವರನ್ನು ಮೇಲ್ವಿಚಾರಕರಾದ ವಿನೋದ್ ಮತ್ತು ಜೀತೇಂದ್ರ ನಿಂದಿಸಲಾರಂಭಿಸಿದ್ದರು. ಈ ವೇಳೆ, ಅವರು ಋತುಚಕ್ರದಲ್ಲಿದ್ದಾರೆ ಮತ್ತು ಸುಸ್ತಾಗಿದ್ದಾರೆಂದು ಇತರ ಸಿಬ್ಬಂದಿಗಳು ಮೇಲ್ವಿಚಾರಕರಿಗೆ ತಿಳಿಸಿದ್ದಾರೆ. ಆದರೆ, ಅವರ ಮಾತನ್ನು ನಂಬದ ವಿನೋದ್ ಮತ್ತು ಜೀತೇಂದ್ರ, ‘ವಾಶ್‌ರೂಮ್‌ಗೆ ಹೋಗಿ, ತಮ್ಮ ಸ್ಯಾನಿಟರ್ ಪ್ಯಾಡ್‌ನ ಚಿತ್ರ ತೆಗೆದು, ತಮ್ಮ ಮುಟ್ಟನ್ನು ಸಾಬೀತುಪಡಿಸಿ’ ಎಂದು ಸೂಚಿಸಿದ್ದಾರೆ. ಅದನ್ನು ಪರಿಶೀಲಿಸುವಂತೆ ಮತ್ತೊಬ್ಬ ಮಹಿಳಾ ಸಿಬ್ಬಂದಿಗೆ ನಿರ್ದೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ.

“ಮುಟ್ಟನ್ನು ದೃಢೀಕರಿಸಲು ಖಾಸಗಿ ಭಾಗಗಳ ಫೋಟೋಗಳನ್ನು ಪುರಾವೆಯಾಗಿ ಕ್ಲಿಕ್ಕಿಸಬೇಕೆಂದು ಮೇಲ್ವಿಚಾರಕರು ಒತ್ತಾಯಿಸಿದರು. ನಮ್ಮಲ್ಲಿ ಇಬ್ಬರು ಆ ಸೂಚನೆಗಳನ್ನು ಪಾಲಿಸಲು ನಿರಾಕರಿಸಿದಾಗ, ನಮ್ಮನ್ನು ಮೇಲ್ವಿಚಾರಕರು ನಿಂದಿಸಿದರು. ವಜಾಗೊಳಿಸುವುದಾಗಿ ಬೆದರಿಕೆ ಹಾಕಿದರು” ಎಂದು ಸಂತ್ರಸ್ತ ಮಹಿಳೆಯರು ದೂರಿರುವುದಾಗಿ ವರದಿಯಾಗಿದೆ.

ಘಟನೆಯ ಬಗ್ಗೆ ತಿಳಿದ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಗಳು ಮತ್ತು ಉಳಿದ ಮಹಿಳಾ ಸಿಬ್ಬಂದಿಗಳು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ.

ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ವಾರ್ಸಿಟಿ ರಿಜಿಸ್ಟ್ರಾರ್ ಕೃಷ್ಣನ್ ಕಾಂತ್, “ಘಟನೆ ಬಗ್ಗೆ ಆಂತರಿಕ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದರೆ ಅವರನ್ನು ಬಿಡಲಾಗುವುದಿಲ್ಲ. ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

“ಇಬ್ಬರು ಮೇಲ್ವಿಚಾರಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಪಿಜಿಐಎಂಎಸ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ರೋಷನ್ ಲಾಲ್ ತಿಳಿಸಿದ್ದಾರೆ.

“ಕೆಲಸದ ಸ್ಥಳದಲ್ಲಿ ಅಭದ್ರತೆ ಉಂಟುಮಾಡುವ ಯಾವುದೇ ಘಟನೆಯನ್ನು ಯಾವುದೇ ಸಂದರ್ಭದಲ್ಲೂ ಸಹಿಸಲಾಗುವುದಿಲ್ಲ. ಸುರಕ್ಷಿತ, ಗೌರವ ಹಾಗೂ ಸೂಕ್ಷ್ಮತೆಯುಳ್ಳ ಕೆಲಸದ ವಾತಾವರಣವನ್ನು ಒದಗಿಸುವು ನಮ್ಮ ಆದ್ಯತೆಯಾಗಿದೆ. ಯಾವುದೇ ರೀತಿಯ ಅನುಚಿತ ನಡವಳಿಕೆ ಅಥವಾ ದುಷ್ಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ವಿಶ್ವವಿದ್ಯಾಲಯ ಹೇಳಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...