Homeಮುಖಪುಟದೆಹಲಿ ಜನರಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ; ಬಂಧನದಲ್ಲಿರುವಾಗಲೇ ಮೊದಲ ಆದೇಶ ನೀಡಿದ ಸಿಎಂ ಕೇಜ್ರಿವಾಲ್

ದೆಹಲಿ ಜನರಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ; ಬಂಧನದಲ್ಲಿರುವಾಗಲೇ ಮೊದಲ ಆದೇಶ ನೀಡಿದ ಸಿಎಂ ಕೇಜ್ರಿವಾಲ್

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿ, ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನೀರಿನ ಕೊರತೆ ಎದುರಿಸುತ್ತಿರುವ ಪ್ರದೇಶಗಳಿಗೆ ನಿನ್ನೆ ಅಲ್ಲಿಂದಲೇ ಆದೇಶ ಹೊರಡಿಸಿದ್ದಾರೆ.

ಕಾರಾಗೃಹದಿಂದ ತಮ್ಮ ಮೊದಲ ಆದೇಶ ನೀಡಿರುವ ಕೇಜ್ರಿವಾಲ್, ಸುಡುವ ಬೇಸಿಗೆಯಲ್ಲಿ ರಾಷ್ಟ್ರ ರಾಜಧಾನಿ ಅನುಭವಿಸುತ್ತಿರುವ ನೀರಿನ ಪೂರೈಕೆಯನ್ನು ಬಲಪಡಿಸಲು, ಕೆಲ ಪ್ರದೇಶಗಳಲ್ಲಿ ಟ್ಯಾಂಕರ್‌ಗಳನ್ನು ನಿಯೋಜಿಸಲು ನಗರದ ಜಲ ಇಲಾಖೆಗೆ ಆದೇಶ ನೀಡಿದ್ದಾರೆ.

ಈ ಆದೇಶವನ್ನು ನಿನ್ನೆ ಸಂಜೆ ದೆಹಲಿ ಜಲ ಸಚಿವೆ ಅತಿಶಿ ಅವರಿಗೆ ಕಳುಹಿಸಲಾದ ಟಿಪ್ಪಣಿಯ ಮೂಲಕ ತಲುಪಿಸಲಾಗಿದೆ. ಕೇಜ್ರಿವಾಲ್ ಜೈಲಿನಿಂದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದರೂ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಎಎಪಿ ಸಮರ್ಥಿಸಿಕೊಂಡಿದೆ.

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರನ್ನು ಗುರುವಾರ ಬಂಧಿಸಲಾಯಿತು. ಮರುದಿನ, ನಗರದ ರೂಸ್ ಅವೆನ್ಯೂ ನ್ಯಾಯಾಲಯವು ಅವರನ್ನು ಮಾರ್ಚ್ 28 ರವರೆಗೆ ತನಿಖಾ ಸಂಸ್ಥೆಯ ಕಸ್ಟಡಿಗೆ ಒಪ್ಪಿಸಿತ್ತು.

ಅರವಿಂದ್ ಕೇಜ್ರಿವಾಲ್ ನೀಡಿದ ಆದೇಶವೇನು?

ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, ಹಾನಿಗೊಳಗಾದ ಪ್ರದೇಶಗಳಲ್ಲಿ ಸಾಕಷ್ಟು ನೀರು ಸರಬರಾಜು ಮಾಡಲು ಇಲಾಖೆಗೆ ಕೇಜ್ರಿವಾಲ್ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದರು.

ಬೇಕಿದ್ದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರ ಸಹಾಯ ಪಡೆಯುವಂತೆಯೂ ಅವರು ಸಚಿವರಿಗೆ ಸೂಚಿಸಿದ್ದಾರೆ.

‘ದಿಲ್ಲಿಯ ಕೆಲವು ಭಾಗಗಳಲ್ಲಿ ಜನರು ನೀರು ಮತ್ತು ಒಳಚರಂಡಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಾನು ತಿಳಿದುಕೊಂಡಿದ್ದೇನೆ. ಇದರಿಂದ ನಾನು ಚಿಂತಿತನಾಗಿದ್ದೇನೆ. ನಾನು ಜೈಲಿನಲ್ಲಿದ್ದೇನೆ ಎಂಬ ಕಾರಣಕ್ಕೆ ಜನರಿಗೆ ಈ ಸಮಸ್ಯೆ ಎದುರಾಗಬಾರದು. ನೀರಿನ ಕೊರತೆ ಇರುವ ಸ್ಥಳಗಳಿಗೆ ಟ್ಯಾಂಕರ್ ವ್ಯವಸ್ಥೆ ಮಾಡಬೇಕು ಮತ್ತು ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಕೇಜ್ರಿವಾಲ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ನಿನ್ನೆ ಎಲ್ಲರೂ ಸಮಾಜಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸಬೇಕೆಂದು ಒತ್ತಾಯಿಸಿದರು; ಯಾರನ್ನೂ ದ್ವೇಷಿಸಬೇಡಿ, ಆಡಳಿತಾರೂಢ ಬಿಜೆಪಿಯವರನ್ನೂ ಸಹ ದ್ವೇಷಿಸಬೇಡಿ ಎಂದು ಹೇಳಿದ್ದಾರೆ ಎಂಬ ಸಂದೇಶವನ್ನು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಓದಿದರು.

“ಭಾರತದ ಒಳಗೆ ಮತ್ತು ಹೊರಗೆ ಹಲವಾರು ಶಕ್ತಿಗಳು ದೇಶವನ್ನು ದುರ್ಬಲಗೊಳಿಸುತ್ತಿವೆ. ಅವರನ್ನು ದೀರ್ಘಕಾಲ ಕಂಬಿಗಳ ಹಿಂದೆ ಇಡಲು ಯಾವುದೇ ಜೈಲು ಇಲ್ಲ. ನಾನು ಶೀಘ್ರದಲ್ಲೇ ಹೊರಗೆ ಬಂದು ನನ್ನ ಭರವಸೆಗಳನ್ನು ಈಡೇರಿಸುತ್ತೇನೆ” ಎಂದು ದೆಹಲಿ ಮುಖ್ಯಮಂತ್ರಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಜೈಲು ನಿಯಮಗಳು ಏನು ಹೇಳುತ್ತವೆ?

ದೆಹಲಿಯ ತಿಹಾರ್ ಜೈಲಿನ ಮಾಜಿ ಕಾನೂನು ಅಧಿಕಾರಿಯೊಬ್ಬರು ಹೇಳುವಂತೆ, ಒಬ್ಬ ಕೈದಿಯು ವಾರದಲ್ಲಿ ಎರಡು ಸಭೆಗಳನ್ನು ಮಾತ್ರ ನಡೆಸಬಹುದು, ಇದು ಕೇಜ್ರಿವಾಲ್‌ಗೆ ಮುಖ್ಯಮಂತ್ರಿಯಾಗಿ ತನ್ನ ಜವಾಬ್ದಾರಿಗಳನ್ನು ನಿರ್ವಹಿಸಲು ಕಷ್ಟಕರವಾಗುತ್ತದೆ. ಅವರನ್ನು ಗೃಹಬಂಧನದಲ್ಲಿ ಇರಿಸಿದರೆ ಬಂಧನದೊಳಗಿಂದ ಅವರ ಆಡಳಿತವನ್ನು ಸುಗಮಗೊಳಿಸಬಹುದಾದ ಏಕೈಕ ಮಾರ್ಗವಾಗಿದೆ.

ಲೆಫ್ಟಿನೆಂಟ್ ಗವರ್ನರ್ ಅವರು ಯಾವುದೇ ಕಟ್ಟಡವನ್ನು ಜೈಲಿನಂತೆ ಪರಿವರ್ತಿಸುವ ಅಧಿಕಾರವನ್ನು ಹೊಂದಿದ್ದಾರೆ. ಕೇಜ್ರಿವಾಲ್ ಅವರನ್ನು ಗೃಹಬಂಧನದಲ್ಲಿ ಇರಿಸಲು ಅವರಿಗೆ ಮನವರಿಕೆ ಮಾಡಿದರೆ, ಅದು ದೆಹಲಿ ಸರ್ಕಾರದ ದೈನಂದಿನ ಕಾರ್ಯಚಟುವಟಿಕೆಯಲ್ಲಿ ಭಾಗವಾಗಲು ಸಹಾಯ ಮಾಡುತ್ತದೆ.

“ಯಾವುದೇ ಕಟ್ಟಡವನ್ನು ಜೈಲು ಎಂದು ಘೋಷಿಸಲು ನಿರ್ವಾಹಕರಿಗೆ ಅಧಿಕಾರವಿದೆ” ಎಂದು ಸುನೀಲ್ ಗುಪ್ತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ; ಕೇಜ್ರಿವಾಲ್‌ ಕಂಡರೆ ಬಿಜೆಪಿಗೆ ಹೆದರಿಕೆ, ಅವರು ಪ್ರಚಾರ ಮಾಡುವುದು ಇಷ್ಟವಿಲ್ಲ: ಭಗವಂತ್ ಮಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...