Homeಚಳವಳಿರೈತ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ 'ದೇಶಪ್ರೇಮಿ ಯುವಾಂದೋಲನ'

ರೈತ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ‘ದೇಶಪ್ರೇಮಿ ಯುವಾಂದೋಲನ’

ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಬಳಿ ಒಟ್ಟುಗೂಡಿದ ನೂರಾರು ವಿದ್ಯಾರ್ಥಿ ಯುವಜನರು ಮತ್ತು ನೂರಾರು ಸಿಖ್ ಧರ್ಮೀಯರು ದೆಹಲಿಯಲ್ಲಿ ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಶ್ರದ್ದಾಂಜಲಿ ಸಲ್ಲಿಸಿದರು.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಇಂದು ಬೆಂಗಳೂರಿನಲ್ಲಿ ವಿದ್ಯಾರ್ಥಿ ಯುವಜನರು ‘ದೇಶಪ್ರೇಮಿ ಯುವಾಂದೋಲನ’ ಹೆಸರಿನಲ್ಲಿ ಪ್ರತಿಭಟನಾ ಧರಣಿ ನಡೆಸಿದರು.

ನಗರದ ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಬಳಿ ಒಟ್ಟುಗೂಡಿದ ನೂರಾರು ವಿದ್ಯಾರ್ಥಿ ಯುವಜನರು ಮತ್ತು ನೂರಾರು ಸಿಖ್ ಧರ್ಮೀಯರು ದೆಹಲಿಯಲ್ಲಿ ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಶ್ರದ್ದಾಂಜಲಿ ಸಲ್ಲಿಸಿದರು.

ಎಸ್‌ಎಫ್‌ಐ ರಾಜ್ಯಕಾರ್ಯದರ್ಶಿ ವಾಸುದೇವರೆಡ್ಡಿ ಮಾತನಾಡಿ “ಇಂದು ಆರ್ಥಿಕ ಕುಸಿತದಿಂದಾಗಿ ಉತ್ಪಾದನಾ ಚಟುವಟಿಕೆಗಳು ಕುಸಿತಗೊಂಡಿರುವ ಸಂದರ್ಭದಲ್ಲಿ ರೈತರಿಗೆ ವಿರುದ್ಧವಾದ ಮತ್ತು ಬಂಡವಾಳಶಾಹಿಗಳ ಪರವಾದ ಕೃಷಿ ಕಾಯ್ದೆಗಳನ್ನು ನರೇಂದ್ರ ಮೋದಿ ತಂದಿದ್ದಾರೆ. ಹಾಗಾಗಿ ರೈತರ ಪರವಾಗಿ ಮತ್ತು ದೇಶದ ಆಹಾರ ಸಾರ್ವಭೌಮತೆ ಉಳಿಸಿಕೊಳ್ಳಲು ನಾವು ಹೋರಾಡಲೇಬೇಕು” ಎಂದರು.

ದೆಹಲಿಯಲ್ಲಿ ಕೊರೆವ ಚಳಿಯಲ್ಲಿ ಕಳೆದ 24 ದಿನಗಳಿಂದ ರೈತರು ಹೋರಾಡುತ್ತಿದ್ದಾರೆ. ಆದರೆ ನರೇಂದ್ರ ಮೋದಿ ಅವರತ್ತ ತಿರುಗಿ ನೋಡಿಲ್ಲ. ಇದುವರೆಗೂ 33 ಜನ ಹೋರಾಟನಿರತ ರೈತರು ಸಾವನಪ್ಪಿದ್ದಾರೆ. ಆದರೂ ರೈತರು ತಮ್ಮ ಹೋರಾಟವನ್ನು ಬಿಟ್ಟುಕೊಟ್ಟಿಲ್ಲ. ಇಂತಹ ಸಂದರ್ಭದಲ್ಲಿ ಮೋದಿ ಮತ್ತು ಅಮಿತ್‌ ಶಾ ಚುನಾವಣೆ ಗೆಲ್ಲಲು ಯೋಚಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಮಿತಿ ಸದಸ್ಯರಾದ ಪುಷ್ಪಲತ ಮಾತನಾಡಿ “ನಮ್ಮ ದೇಶದಲ್ಲಿ ಈವರೆಗೆ ಜೈಜವಾನ್ ಜೈ ಕಿಸಾನ್ ಎಂದು ಘೋಷಣೆ ಕೂಗುತ್ತಿದ್ದೆವು. ಆದರೆ ಈಗ ಡೈ ಜವಾನ್ ಡೈ ಕಿಸಾನ್ ಎನ್ನುವ ರೀತಿ ಕೇಂದ್ರ ರೈತರ ಮೇಲೆ ದಾಳಿ ಮಾಡುತ್ತಿದೆ” ಎಂದರು.

ದೇಶದ ಬೆನ್ನುಲುಬಾದ ರೈತರು ದೇಶದ ಜನತೆಗೆ ಆಹಾರ ಒದಗಿಸುತ್ತಿದ್ದಾರೆ. ಆದರೆ ಆ ರೈತರ ವಿರುದ್ಧದ ಕೃಷಿ ಕಾಯ್ದೆಗಳನ್ನು ತರಲಾಗಿದೆ. ಪ್ರತಿಯೊಂದು ರಾಜಕೀಯ ಪಕ್ಷಗಳು ಸ್ವಾಮಿನಾಥನ್ ವರದಿ ತರುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಬರೆಯುತ್ತಾರೆ. ಆದರೆ ಅಧಿಕಾರಕ್ಕೆ ಬಂದಾಗ ಅದನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯ ಲೈವ್ ನೋಡಿ

ಎಐಎಸ್‌ಎಫ್‌ ರಾಜ್ಯಾಧ್ಯಕ್ಷೆ ಕೆ ಜ್ಯೋತಿ ಮಾತನಾಡಿ,  “ಕೇಂದ್ರ ಸರ್ಕಾರ ಕೃಷಿಕರು ಕೃಷಿಯಿಂದ ವಿಮುಖರಾಗಿ ಆ ಜಾಗದಲ್ಲಿ ಕಾರ್ಪೊರೇಟ್‌ಗಳು ಬಂದು ಕುಳಿತುಕೊಳ್ಳುವಂತೆ ಮಾಡಲು ಮುಂದಾಗಿದೆ. ಹಾಗಾಗಿ
ಇವತ್ತು ಅನ್ನ ನೀಡುವ ಕೈಗಳು ದಿಕ್ಕಾರ ಕೂಗುತ್ತಿದ್ದಾರೆ. ಅವರೊಡನೆ ನಿಲ್ಲಬೇಕಾದುದು ವಿದ್ಯಾರ್ಥಿ ಯುವಜನರ ಕರ್ತವ್ಯ ಎಂದರು.

ಇದೇ ರೀತಿ ದೇಶದಲ್ಲಿ ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಾ ಹೋದರೆ ಹಿಟ್ಲರ್‌ನನ್ನು ಜರ್ಮನಿಯಲ್ಲಿ ಯಾವ ರೀತಿ ಮಾಡಿದರೋ ಆ ರೀತಿ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

AIDSO ರಾಜ್ಯ ಕಾರ್ಯದರ್ಶಿಗಳಾದ ಅಜಯ್ ಕಾಮತ್, AISA ಮುಖಂಡರಾದ ವಿಶಾಲ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಭಟನೆಯಲ್ಲಿ AIDSO, AISA, AISF, SFI, KVS, AIDYO, AIYF ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು. ನೂರಾರು ಸಿಖ್ ಧರ್ಮೀಯರು ಸಹ ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ: ರೈತ ಹೋರಾಟದ ಹುತಾತ್ಮರಿಗೆ ಇಂದು ಶ್ರದ್ಧಾಂಜಲಿ: ಇಲ್ಲಿವೆ ಪ್ರಮುಖ ಅಂಶಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...