Homeಚಳವಳಿರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ಕೃಷಿ ಕಾನೂನುಗಳ ಹಿಂತೆಗೆತ ಜೊತೆಗೆ ತಮ್ಮ ಇತರ ಬೇಡಿಕೆಗಳಾದ ಆಹಾರ, ಕೆಲಸ, ಆರೋಗ್ಯ ಸೇವೆಗಳು, ಸ್ವಸಹಾಯ ಸಂಘಗಳ ಸಾಲ ಮನ್ನಾಕ್ಕೆ ಮಹಿಳೆಯರು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕಳೆದ ಒಂದು ತಿಂಗಳಿನಿಂದ ಮಾಡುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ, ದೇಶದಾದ್ಯಂತ ಇರುವ ಆರು ಪ್ರಮುಖ ಮಹಿಳಾ ಸಂಘಟನೆಗಳು ಜನವರಿ 18 ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲಿವೆ.

ಕೃಷಿ ಕಾನೂನುಗಳ ಜೊತೆಗೆ ತಮ್ಮ ಇತರ ಬೇಡಿಕೆಗಳಾದ ಆಹಾರ, ಕೆಲಸ, ಆರೋಗ್ಯ ಸೇವೆಗಳು, ಸ್ವಸಹಾಯ ಸಂಘಗಳ ಸಾಲ ಮನ್ನಾ, ಎಂಎಫ್‌ಐಗಳಿಂದ ಕಿರುಕುಳ ವಿರುದ್ಧ ಕ್ರಮ ಸೇರಿದಂತೆ ಮುಂತಾದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ‌ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ್ ಸಂಘಟನ್ (AIMSS) ಸೇರಿದಂತೆ, ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವುಮೆನ್ (NFIW), ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ (AIDWA), ಅಖಿಲ ಭಾರತ ಪ್ರಗತಿಶೀಲ ಮಹಿಳಾ ಸಂಘ (AIPWA), ಪ್ರಗತಿಶೀಲ್ ಮಹಿಳಾ ಸಂಘಟನ್ (PMS), ಅಖಿಲ ಭಾರತ ಅಗ್ರಗಾಮಿ ಮಹಿಳಾ ಸಮಿತಿಗಳು (AIAMS) ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಇದನ್ನೂ ಓದಿ: ಟ್ರಂಪ್ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಿದ ಟ್ವಿಟರ್: ಅಮಾನತ್ತಾದ ಟೀಮ್‌ಟ್ರಂಪ್ ಖಾತೆ!

ಸಂಯುಕ್ತ ಕಿಸಾನ್‌ ಮೋರ್ಚಾ ನೀಡಿರುವ ʼಮಹಿಳಾ ಕಿಸಾನ್ ದಿವಸ್‌ʼ ಕರೆಯ ಭಾಗವಾಗಿ ಈ ಪ್ರತಿಭಟನೆಗಳು ನಡೆಯಲಿವೆ. ಜನವರಿ 18 ರಂದು ಸಹಸ್ರಾರು ಸಂಖ್ಯೆಯ ಮಹಿಳೆಯರು ಸೇರಿ ರಾಜ್ಯ ರಾಜಧಾನಿಗಳಲ್ಲಿ ರಾಜಭವನಕ್ಕೆ ಮೆರವಣಿಗೆ, ವಿವಿಧ ಭಾಗಗಳಲ್ಲಿ ಧರಣಿ, ಜಿಲ್ಲಾ ಮಟ್ಟಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಿದ್ದಾರೆ.

ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ರೈತರು ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ 8 ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ.

ಶುಕ್ರವಾರ (ಜ.8) 8ನೇ ಸುತ್ತಿನ ಮಾತುಕತೆ ನಡೆದಿದ್ದು ಕೇಂದ್ರ ಸರ್ಕಾರದ ಪರವಾಗಿ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪಿಯೂಶ್ ಗೋಯಲ್ ಮತ್ತು ಸೋಮ್‌ಪ್ರಕಾಶ್‌ ಭಾಗವಹಿಸಿದ್ದರು. 40 ರೈತ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದು, ಇಂದು ಸಹ ಸಭೆ ಯಾವುದೇ ತಾರ್ಕಿಕ ತೀರ್ಮಾನಗಳಿಗೆ ಬಂದಿಲ್ಲ. ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದಿಲ್ಲವೆಂದು ಹಠ ಹಿಡಿದರೆ, ಹೋರಾಟ ನಿಲ್ಲಿಸುವುದಿಲ್ಲವೆಂದು ರೈತರು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಜನವರಿ 15ಕ್ಕೆ ಮುಂದಿನ ಸಭೆ ನಿಗಧಿಗೊಳಿಸಲಾಗಿದೆ.

ಇದನ್ನೂ ಓದಿ: Black Lives Matter V/s ಕ್ಯಾಪಿಟಲ್ ಮುತ್ತಿಗೆ: ಇವೆರಡಕ್ಕೆ ಪೊಲೀಸರ ಪ್ರತಿಕ್ರಿಯೆಗಳು ಹೇಗಿದ್ದವು?

ಮಾತುಕತೆಯಲ್ಲಿ ‘ನೀವು ಕಾಯ್ದೆ ವಾಪ್ಸಿ ಮಾಡಿದರೆ ಮಾತ್ರ ನಾವು ಘರ್ ವಾಪ್ಸಿ ಮಾಡುತ್ತೇವೆ’ ಎಂದು ರೈತ ಮುಖಂಡರೊಬ್ಬರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾಗಿ ಪಿಟಿಐ ವರದಿ ಮಾಡಿದೆ.

ರೈತ ಮುಖಂಡರೊಬ್ಬರು “ಒಂದೋ ಗೆಲ್ಲುತ್ತೇವೆ ಇಲ್ಲ ಸಾಯುತ್ತೇವೆ” ಎಂಬ ಫ್ಲಕಾರ್ಡು ಹಿಡಿಯುವ ಮೂಲಕ ಸಭೆಯಲ್ಲಿ ಗಮನ ಸೆಳೆದರು. ಅಂದರೆ ಈ ಮೂಲಕ ಕೃಷಿ ಕಾಯ್ದೆಗಳ ವಿಚಾರದಲ್ಲಿ ರೈತರು ಪಟ್ಟು ಬಿಡುವುದಿಲ್ಲ ಎಂಬ ಎಚ್ಚರಿಕೆ ರವಾನಿಸಿದ್ದಾರೆ.

ಜನವರಿ 4 ರಂದು ನಡೆದ 7 ಸುತ್ತಿನ ಮಾತುಕತೆ ವಿಫಲವಾದಾಗ ರೈತರು ಜನವರಿ 7 ರಂದು ಟ್ರಾಕ್ಟರ್ ರ್ಯಾಲಿ ನಡೆಸುವುದಾಗಿ ಘೋಷಿಸಿ, ಅಂತೆಯೇ ನಡೆಸಿದರು. ಈಗ 8ನೇ ಸುತ್ತಿನ ಮಾತುಕತೆಯೂ ಸಹ ವಿಫಲವಾಗಿದ್ದು ರೈತರು ಯಾವ ರೀತಿಯ ಹೋರಾಟಕ್ಕೆ ಅಣಿಯಾಗುತ್ತಾರೆ ಎಂದು ಕಾದುನೋಡಬೇಕಾಗಿದೆ.


ಇದನ್ನೂ ಓದಿ: ಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...