Homeಚಳವಳಿರೈತರಿಗೆ ಬೆಂಬಲ: ತಲೋಜಾ ಜೈಲಿನಲ್ಲಿ ಖೈದಿಗಳಾಗಿರುವ ಚಿಂತಕರಿಂದಲೂ ಇಂದು ಉಪವಾಸ

ರೈತರಿಗೆ ಬೆಂಬಲ: ತಲೋಜಾ ಜೈಲಿನಲ್ಲಿ ಖೈದಿಗಳಾಗಿರುವ ಚಿಂತಕರಿಂದಲೂ ಇಂದು ಉಪವಾಸ

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಯಾಗಿರುವ ಹತ್ತಾರು ಚಿಂತಕರು ರೈತರು ಮತ್ತು ಅವರ ಪ್ರತಿಭಟನೆಯನ್ನು ಬೆಂಬಲಿಸಿ ಸಾಂಕೇತಿಕವಾಗಿ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ದೇಶದಾದ್ಯಂತ ರೈತರು ಪ್ರತಿಭಟನೆ ಮಾಡುತ್ತಿದ್ದು, ಇವರನ್ನು ಬೆಂಬಲಿಸಿ ತಲೋಜ ಜೈಲಿನಲ್ಲಿ ಬಂಧನದಲ್ಲಿರುವ ಚಿಂತಕರು ಸೇರಿದಂತೆ ಹಲವರು ಇಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಯಾಗಿರುವ ಹತ್ತಾರು ಚಿಂತಕರು, ಹೋರಾಟಗಾರರು ಸೇರಿ ರೈತರು ಮತ್ತು ಅವರ ಪ್ರತಿಭಟನೆಯನ್ನು ಬೆಂಬಲಿಸಿ ಸಾಂಕೇತಿಕವಾಗಿ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: ಹೋರಾಟ ನಿರತ ರೈತರ ಯೂಟ್ಯೂಬ್ ಚಾನೆಲ್‌ಗೆ ಒಂದೇ ವಾರದಲ್ಲಿ 10 ಲಕ್ಷ ಚಂದಾದಾರರು!

ದೆಹಲಿ ಮತ್ತು ಹರಿಯಾಣ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 28 ನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ತಮ್ಮ ವಿರೋಧವನ್ನು ಇನ್ನಷ್ಟು ತೀವ್ರಗೊಳಿಸುವ ಉದ್ದೇಶದಿಂದ ದೇಶದಾದ್ಯಂತ ಉಪವಾಸಕ್ಕೆ ಕರೆ ನೀಡಿದ್ದಾರೆ.

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಇದನ್ನೂ ಓದಿ: ಮತ್ತೆ ಪತನವಾದ ಇಸ್ರೇಲ್ ಸರ್ಕಾರ; ಮಾರ್ಚ್‌ನಲ್ಲಿ ಚುನಾವಣೆ

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.

ಕರ್ನಾಟಕದಲ್ಲಿಯೂ ಕೂಡ ಜನಶಕ್ತಿ ಸಂಘಟನೆಯ ವತಿಯಿಂದ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲಾಗುತ್ತಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ರೈತರ ಕರೆಗೆ ಸಾಕಷ್ಟು ಬೆಂಬಲ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಸಾವಿರಾರು ಜನರು ಒಪ್ಪತ್ತಿನ ಊಟ ಬಿಡುವ ಮೂಲಕ ಅನ್ನದಾತರಿಗೆ ಬೆಂಬಲ ಸೂಚಿಸಿದ್ದಾರೆ.


ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...