Homeಮುಖಪುಟಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

- Advertisement -
- Advertisement -

ಕಿರಿಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌‌ಬರ್ಗ್ ಮೇಲೆ “ಕ್ರಿಮಿನಲ್ ಪಿತೂರಿ ಮತ್ತು ಧರ್ಮದ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ” ಎಂದು ಆರೋಪಿಸಿ ದೆಹಲಿ ಪೊಲೀಸರು ದೂರು ದಾಖಲಿಸಿದ್ದಾರೆ. ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಒಂದು ದಿನದ ಹಿಂದೆಯಷ್ಟೆ ಟ್ವೀಟ್ ಮಾಡಿದ್ದರು.

ಇವರಿಗಿಂತಲು ಮೊದಲು ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ರೈತರನ್ನು ಬೆಂಬಲಿಸಿದ್ದರು. ಇದಾದ ನಂತರ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಗ್ಗೆ ಹಲವು ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ವಿಶ್ವದ ಗಮನ ಸೆಳೆದಿದ್ದು, ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ ಸಿಗುವಂತಾಗಿದೆ.

ಇದನ್ನೂ ಓದಿ: ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ಗ್ರೇಟಾ ಥನ್‌‌ಬರ್ಗ್‌ ತನ್ನ ಟ್ವೀಟ್‌ನಲ್ಲಿ, “ಭಾರತೀಯ ರೈತರ ಹೋರಾಟದ ಜೊತೆ ನಾವು ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ” ಎಂದು ಎಂದು ಸಿಎನ್‌ಎನ್‌ ವರದಿಯನ್ನು ಹಂಚಿಕೊಂಡಿದ್ದರು.

ಇಷ್ಟೇ ಅಲ್ಲದೆ ಗೇಟಾ ಥನ್‌ಬರ್ಗ್ ಇಂದು, ರೈತ ಹೋರಾಟಕ್ಕೆ ಹೇಗೆ ಬೆಂಬಲ ನೀಡಬಹುದು ಎಂಬ ಮಾಹಿತಿಯಿರುವ “ಟೂಲ್‌‌ಕಿಟ್” ಅನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!

ಟೂಲ್‌ಕಿಟ್‌ ರೈತ ಆಂದೋಲನವನ್ನು ಬೆಂಬಲಿಸಲು ಏಳು ಮಾರ್ಗಗಳನ್ನು ಸೂಚಿಸಿದೆ. ಫೆಬ್ರವರಿ 13 ಮತ್ತು 14 ರಂದು ಹತ್ತಿರದ ಭಾರತೀಯ ರಾಯಭಾರ ಕಚೇರಿಯ ಬಳಿ ಪ್ರತಿಭಟನೆಗಳನ್ನು ಆಯೋಜಿಸಲು ಅವರು ಸಲಹೆ ನೀಡಿದ್ದಾರೆ.

ಈ ನಡುವೆ ಗ್ರೇಟಾ ಥನ್‌‌ಬರ್ಗ್ ಮತ್ತೇ ರೈತರ ಹೋರಾಟವನ್ನು ಬೆಂಬಲಿಸಿದ್ದಾರೆ. ಈಗಷ್ಟೇ ಹಾಕಿದ ಟ್ವೀಟ್‌‌ನಲ್ಲಿ, “ನಾನಿನ್ನೂ ರೈತರನ್ನು ಬೆಂಬಲಿಸುತ್ತೇನೆ ಹಾಗೂ ಅವರ ಶಾಂತಿಯುತ ಹೋರಾಟವನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಗಳು ನನ್ನ ನಿಲುವನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ನಿನ್ನೆಯಿಂದ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯ ಬೆಂಬಲ ಹೆಚ್ಚುತ್ತಿದ್ದು, ಇದರಿಂದಾಗಿ ತೀವ್ರ ಮುಜುಗರಕ್ಕೊಳಗಾಗಿರುವ ಕೇಂದ್ರ ಸರ್ಕಾರ, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು.

ಇದನ್ನೂ ಓದಿ: ’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. how can you call Greta a climate activist. Please publish an article if you can about the number of trees she has planted and carried a campaign against use of one use plastic bags. Just by reading a statement written by somebody in a conference does not make her a climate activist. We have Salumara Thimmkka, Sukri Bommanagowda in India. They are climate activists. Not Thunberg

  2. ಗ್ರೇಟಾ ತನ್ಬರ್ಗ್ ವಿರುದ್ದ ಎಫ್.ಐ.ಆರ್.!
    ಇದು ಮೂರ್ಕತನದ ಪರಮಾವದಿ.
    ಎಫ್.ಐ.ಆರ್. ದಾಕಲಿಸಿ ಯಾರನ್ನು ಬೇಕಾದರೂ ಹೆದರಿಸಿ, ಸುಮ್ಮನಿರಿಸಬಹುದೆಂದು ಆಡಳಿತಾರೂಢರು ತಿಳಿದಿರುವಂತಿದೆ.
    ಆದರೆ ಅಸಲಿ ಹೋರಾಟಗಾರರು ಎಫ್. ಐ.ಆರ್.ಗೆ ಹೆದರುವುದಿಲ್ಲ ಎಂಬುದನ್ನು ಈ ಅಯೋಗ್ಯರು ತಿಳಿಯುವುದೊಳಿತು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...