Homeಕರ್ನಾಟಕಬಿಜೆಪಿ ಸೋಲಿಸಲು ಜಾತ್ಯಾತೀತ ಅಭ್ಯರ್ಥಿಗೆ ಬೆಂಬಲ; ಸ್ಪರ್ಧೆ ಮಾಡಲ್ಲ ಎಂದ ಎಡಪಕ್ಷಗಳು

ಬಿಜೆಪಿ ಸೋಲಿಸಲು ಜಾತ್ಯಾತೀತ ಅಭ್ಯರ್ಥಿಗೆ ಬೆಂಬಲ; ಸ್ಪರ್ಧೆ ಮಾಡಲ್ಲ ಎಂದ ಎಡಪಕ್ಷಗಳು

- Advertisement -
- Advertisement -

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚುನಾವಣೆಯ ಕಾವು ರಂಗೇರುತ್ತಿದೆ. ಈ ಬಾರಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಎಡಪಕ್ಷಗಳು ತೀರ್ಮಾನಿಸಿವೆ. ಬಿಜೆಪಿ ವಿರೋಧಿ ಮತಗಳು ವಿಭಜನೆಯಾಗುವುದನ್ನು ತಡೆಯಲು ಕರಾವಳಿ ಜಿಲ್ಲೆಗಳಲ್ಲಿನ ಯಾವ ಕ್ಷೇತ್ರದಲ್ಲೂ ಸ್ಪರ್ಧಿಸದಿರಲು ಸಿಪಿಐ(ಎಂ) ಮತ್ತು ಸಿಪಿಐ ಪಕ್ಷಗಳು ನಿರ್ಧರಿಸಿವೆ.

ಈಗಾಗಲೇ ಬಿಜೆಪಿ 212 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಈ ಪ್ರದೇಶದಲ್ಲಿ ಜಾತ್ಯತೀತ ಮತಗಳನ್ನು ಕ್ರೋಢೀಕರಿಸಬೇಕು ಎಂದು ಉಭಯ ಪಕ್ಷಗಳು ತೀರ್ಮಾನಿಸಿವೆ.

ಸಾಕಷ್ಟು ಪ್ರಭಾವ ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಸಲು ಪಣ ತೊಟ್ಟಿರುವ ಎಡಪಕ್ಷಗಳು ಚುನಾವಣಾ ಕಣದಿಂದ ದೂರ ಉಳಿದು ಜಾತ್ಯಾತೀತ ಸಿದ್ದಾಂತ ಹೊಂದಿರುವ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ಮುಂದಾಗಿವೆ.

ಈ ಬಗ್ಗೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಮಾತನಾಡಿ, ”ಕರಾವಳಿ ಜಿಲ್ಲೆಗಳಲ್ಲಿ ಪಕ್ಷವು ಅಭ್ಯರ್ಥಿಗಳನ್ನು ಕಣಕ್ಕಿಳಿಸದಿದ್ದರೂ, ಜಾತ್ಯತೀತ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಸಕ್ರಿಯರಾಗಿದ್ದೇವೆ. ಎರಡು ಪಕ್ಷಗಳು ತಮ್ಮ ಚುನಾವಣಾ ಕಾರ್ಯತಂತ್ರವನ್ನು ರೂಪಿಸಲು ಏಪ್ರಿಲ್ 18ರಂದು ಸಭೆ ಕರೆದಿದ್ದೇವೆ. ಈ ಸಂದರ್ಭದಲ್ಲಿ ಜಾತ್ಯಾತೀತ ಪಕ್ಷಗಳಲ್ಲಿ ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಬೆಂಬಲಿಸಲು  ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ”ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಮತ್ತು ಅದರ ಜನವಿರೋಧಿ ನೀತಿಗಳನ್ನು ಸೋಲಿಸುವುದೇ ಎಡಪಕ್ಷಗಳ ಗುರಿಯಾಗಿದೆ” ಎಂದು ಹೇಳಿದರು.

1962ರಲ್ಲಿ ಸಿಪಿಐ ನಾಯಕ ಎ ಕೃಷ್ಣ ಶೆಟ್ಟಿ ಅವರು ಹಿಂದಿನ ಉಳ್ಳಾಲ (ಈಗ ಮಂಗಳೂರು) ಕ್ಷೇತ್ರದ ಶಾಸಕರಾಗಿ ಕಾಂಗ್ರೆಸ್‌ನ ಬಿಎಂ ಇದ್ದಿನಬ್ಬ ಅವರನ್ನು ಸೋಲಿಸಿದಾಗ ಕರಾವಳಿ ಕರ್ನಾಟಕವು ಎಡಪಕ್ಷಗಳ ದೃಢವಾದ ನೆಲೆಯಾಗಿತ್ತು. ಎಡಪಕ್ಷಗಳ ಯುವ ಘಟಕಗಳು ಕರಾವಳಿ ಜಿಲ್ಲೆಗಳಲ್ಲಿ ವಿವಿಧ ಸಾಮಾಜಿಕ ಸಮಸ್ಯೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ.

ಇದನ್ನೂ ಓದಿ: ’ಹಿಂದೂ ಎಂದು ಕರೆದುಕೊಳ್ಳುವ ವ್ಯಕ್ತಿಯಾಗಿ ನಾನು ಸಾಯುವುದಿಲ್ಲ!’ – ಬಿ.ಆರ್. ಅಂಬೇಡ್ಕರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಮಹಿಳೆಯೊಬ್ಬರ ಅಪಹರಣ ಪ್ರತ್ಯೇಕ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ...