Homeಮುಖಪುಟವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ

ವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ

- Advertisement -
- Advertisement -

ವಕ್ಫ್‌ (ತಿದ್ದುಪಡಿ) ಮಸೂದೆಗೆ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ (ಯುನೈಟೆಡ್) ಸಂಸತ್ತಿನಲ್ಲಿ ಬೆಂಬಲಿಸಿದ್ದನ್ನು ವಿರೋಧಿಸಿ ಪಕ್ಷದ ಇಬ್ಬರು ಹಿರಿಯ ನಾಯಕರು ಗುರುವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಬೆಳಗ್ಗಿನ ಜಾವ 3 ಗಂಟೆಗೆ ಲೋಕಸಭೆಯಲ್ಲಿ, ಶುಕ್ರವಾರ ಬೆಳಗ್ಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಮಸೂದೆ ಬೆಂಬಲಿಸಿದವರಲ್ಲಿ ಎನ್‌ಡಿಎ ಮಿತ್ರ ಪಕ್ಷವಾದ ಜೆಡಿ(ಯು) ಪಕ್ಷ ಕೂಡಾ ಒಂದಾಗಿದೆ. ವಕ್ಫ್ ಮಸೂದೆಗೆ ಬೆಂಬಲ

ಪಕ್ಷದ ಹಿರಿಯ ನಾಯಕರಾದ ಮೊಹಮ್ಮದ್ ಖಾಸಿಮ್ ಅನ್ಸಾರಿ ಮತ್ತು ಮೊಹಮ್ಮದ್ ನವಾಜ್ ಮಲಿಕ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪ್ರತ್ಯೇಕ ಪತ್ರಗಳಲ್ಲಿ ಬರೆದಿದ್ದು, ಪಕ್ಷವು ಜಾತ್ಯತೀತ ಎಂದು ನಂಬಿದ್ದವು, ಆದರೆ ಇದೀಗ ಪಕ್ಷವು ಮುಸ್ಲಿಮರ “ಎಲ್ಲಾ ನಂಬಿಕೆಯನ್ನು ಕಳೆದುಕೊಂಡಿದೆ” ಎಂದು ಹೇಳಿದ್ದಾರೆ.

“ನನ್ನ ಜೀವನದ ಹಲವಾರು ವರ್ಷಗಳನ್ನು ಪಕ್ಷಕ್ಕೆ ನೀಡಿದ್ದಕ್ಕಾಗಿ ನಾನು ನಿರಾಶೆಗೊಂಡಿದ್ದೇನೆ” ಎಂದು ಅನ್ಸಾರಿ ಬರೆದ ಪತ್ರದಲ್ಲಿ ಹೇಳಿದ್ದಾರೆ. ಮಲಿಕ್ ಅವರು ತನ್ನ ಪತ್ರದಲ್ಲಿ, ವಕ್ಫ್ ಮಸೂದೆಯು ಸಂವಿಧಾನದಲ್ಲಿ ತಿಳಿಸಲಾದ ಅನೇಕ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

“ನಮ್ಮಂತಹ ಲಕ್ಷಾಂತರ ಭಾರತೀಯ ಮುಸ್ಲಿಮರು ನೀವು ಸಂಪೂರ್ಣವಾಗಿ ಜಾತ್ಯತೀತ ಸಿದ್ಧಾಂತದ ಧ್ವಜವಾಹಕರು ಎಂದು ಅಚಲ ನಂಬಿಕೆಯನ್ನು ಹೊಂದಿದ್ದರು ಎಂದು ನಾನು ಗಂಭೀರವಾಗಿ ಹೇಳಲು ಬಯಸುತ್ತೇನೆ. ಆದರೆ ಈಗ ಈ ನಂಬಿಕೆ ಮುರಿದುಹೋಗಿದೆ. ನಮ್ಮಂತಹ ಲಕ್ಷಾಂತರ ಸಮರ್ಪಿತ ಭಾರತೀಯ ಮುಸ್ಲಿಮರು ಮತ್ತು ಕಾರ್ಯಕರ್ತರು ಜೆಡಿ(ಯು) ನಿಲುವಿನಿಂದ ತೀವ್ರವಾಗಿ ಆಘಾತಕ್ಕೊಳಗಾಗಿದ್ದಾರೆ” ಎಂದು ಅನ್ಸಾರಿ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ವಕ್ಫ್ ಮಸೂದೆಯು ಭಾರತೀಯ ಮುಸ್ಲಿಮರ ವಿರುದ್ಧ ಇದ್ದು, ಅದನ್ನು ಯಾವುದೇ ಸಂದರ್ಭಗಳಲ್ಲಿಯೂ ಸ್ವೀಕರಿಸುವುದಿಲ್ಲ ಎಂದು ಅನ್ಸಾರಿ ಹೇಳಿದ್ದಾರೆ.

“ಈ ಮಸೂದೆಯು ಸಂವಿಧಾನದ ಅನೇಕ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ಮಸೂದೆಯ ಮೂಲಕ, ಭಾರತೀಯ ಮುಸ್ಲಿಮರನ್ನು ಅವಮಾನಿಸಲಾಗುತ್ತಿದೆ… ನೀವು ಅಥವಾ ನಿಮ್ಮ ಪಕ್ಷ ಇದನ್ನು ಅರಿತುಕೊಳ್ಳುತ್ತಿಲ್ಲ. ನಾನು ನನ್ನ ಜೀವನದ ಹಲವು ವರ್ಷಗಳನ್ನು ಪಕ್ಷಕ್ಕೆ ನೀಡಿದ್ದಕ್ಕಾಗಿ ವಿಷಾದಿಸುತ್ತೇನೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಮತ್ತೊಂದೆಡೆ, ಜೆಡಿ(ಯು)ನ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ನವಾಜ್ ಮಲಿಕ್ ಕೂಡ ರಾಜೀನಾಮೆ ನೀಡಿದ್ದಾರೆ, ವಕ್ಫ್ ಮಸೂದೆಗೆ ಪಕ್ಷದ ಬೆಂಬಲದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿತೀಶ್ ಕುಮಾರ್‌ಗೆ ಬರೆದ ರಾಜೀನಾಮೆ ಪತ್ರದಲ್ಲಿ,”ನೀವು ಸಂಪೂರ್ಣವಾಗಿ ಜಾತ್ಯತೀತ ಸಿದ್ಧಾಂತದ ಧ್ವಜವಾಹಕರು ಎಂದು ಲಕ್ಷಾಂತರ ಭಾರತೀಯ ಮುಸ್ಲಿಮರು ಅಚಲ ನಂಬಿಕೆಯನ್ನು ಹೊಂದಿದ್ದರು. ಆದರೆ ಈಗ ಈ ನಂಬಿಕೆ ಮುರಿದುಹೋಗಿದೆ. ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಜೆಡಿ(ಯು) ತೆಗೆದುಕೊಂಡ ನಿಲುವು ಸಮರ್ಪಿತ ಭಾರತೀಯ ಮುಸ್ಲಿಮರು ಮತ್ತು ನಮ್ಮಂತಹ ಪಕ್ಷದ ಕಾರ್ಯಕರ್ತರಿಗೆ ತೀವ್ರವಾಗಿ ನೋವುಂಟು ಮಾಡಿದೆ. ಲಾಲನ್ ಸಿಂಗ್ ಲೋಕಸಭೆಯಲ್ಲಿ ಮಾತನಾಡಿದ ಮತ್ತು ಈ ಮಸೂದೆಯನ್ನು ಬೆಂಬಲಿಸಿದ ರೀತಿ ನಮಗೆ ನಿರಾಶೆಯನ್ನುಂಟು ಮಾಡಿದೆ.” ಎಂದು ನವಾಜ್ ಮಲಿಕ್ ಹೇಳಿದ್ದಾರೆ.

“ವಕ್ಫ್ ಮಸೂದೆ ಭಾರತೀಯ ಮುಸ್ಲಿಮರ ವಿರುದ್ಧವಾಗಿದೆ. ನಾವು ಅದನ್ನು ಯಾವುದೇ ಸಂದರ್ಭದಲ್ಲೂ ಸ್ವೀಕರಿಸಲು ಸಾಧ್ಯವಿಲ್ಲ. ಈ ಮಸೂದೆಯು ಸಂವಿಧಾನದ ಹಲವು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ಮಸೂದೆಯ ಮೂಲಕ ಭಾರತೀಯ ಮುಸ್ಲಿಮರನ್ನು ಅವಮಾನಿಸಲಾಗುತ್ತಿದೆ… ನೀವು ಅಥವಾ ನಿಮ್ಮ ಪಕ್ಷ ಇದನ್ನು ಅರಿತುಕೊಳ್ಳುತ್ತಿಲ್ಲ” ಎಂದು ಅವರು ಹೇಳಿದ್ದಾರೆ.

ಕೇಂದ್ರ ಸಚಿವ ಮತ್ತು ಜೆಡಿ (ಯು) ನಾಯಕ ರಾಜೀವ್ ರಂಜನ್ ಸಿಂಗ್ ಲೋಕಸಭೆಯಲ್ಲಿ ಮಸೂದೆಯನ್ನು ಸಮರ್ಥಿಸಿಕೊಂಡ ಒಂದೇ ದಿನದಲ್ಲಿ ಈ ರಾಜೀನಾಮೆ ಸರಣಿ ಪ್ರಾರಂಭವಾಗಿದೆ. ರಾಜೀವ್ ರಂಜನ್ ಅವರು ವಕ್ಪ್‌ ತಿದ್ದಪಡಿ ಬಗ್ಗೆ ಮಾತನಾಡುತ್ತಾ, ಇದು ಪಾರದರ್ಶಕತೆಯನ್ನು ತರಲು ಮತ್ತು ಮುಸ್ಲಿಂ ಸಮುದಾಯದ ಎಲ್ಲಾ ವರ್ಗಗಳ ಕಲ್ಯಾಣವನ್ನು ಖಚಿತಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದರು. ಮಸೂದೆಯನ್ನು “ಮುಸ್ಲಿಂ ವಿರೋಧಿ” ಎಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದ್ದು ಎಂದು ಹೇಳಿದ್ದ ಅವರು, ಅಂತಹ ವಾದಗಳನ್ನು ನಿರಾಕರಿಸಿದ್ದರು.

“ವಕ್ಫ್ ಎಂಬುದು ಮುಸ್ಲಿಮರ ಹಿತಾಸಕ್ತಿಗಾಗಿ ಕೆಲಸ ಮಾಡಲು ರಚಿಸಲಾದ ಒಂದು ರೀತಿಯ ಟ್ರಸ್ಟ್ ಆಗಿದೆ. ಇದು ಧಾರ್ಮಿಕ ಸಂಘಟನೆಯಲ್ಲ… ಟ್ರಸ್ಟ್ ಎಲ್ಲಾ ವರ್ಗಗಳ ಮುಸ್ಲಿಮರಿಗೆ ನ್ಯಾಯ ಒದಗಿಸುವ ಹಕ್ಕನ್ನು ಹೊಂದಿದೆ, ಆದರೆ ಅದು ನಡೆಯುತ್ತಿಲ್ಲ… ಇಂದು, ಒಂದು ನಿರೂಪಣೆ ರಚಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಲಾಗುತ್ತಿದೆ. ನಿಮಗೆ ಅವರನ್ನು ಇಷ್ಟವಾಗದಿದ್ದರೆ, ಅವರನ್ನು ನೋಡಬೇಡಿ, ಆದರೆ ಅವರ ಒಳ್ಳೆಯ ಕೆಲಸವನ್ನು ಪ್ರಶಂಸಿಸಿ,” ಎಂದು ರಂಜನ್ ಸಿಂಗ್ ಹೇಳಿದ್ದಾರೆ.

ಪಕ್ಷದ ಇಬ್ಬರು ಹಿರಿಯ ನಾಯಕರಂತೆ ಜೆಡಿಯುನ ಹಲವಾರು ಮುಸ್ಲಿಂ ನಾಯಕರು ಪಕ್ಷದ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಷಯದ ಬಗ್ಗೆ ಕಾನೂನು ಅಭಿಪ್ರಾಯವನ್ನು ಪಡೆಯುವುದಾಗಿ ಹೇಳಿದ್ದಾರೆ. ಎರಾಡಾ-ಎ-ಶರಿಯಾ (ಬಿಹಾರ, ಜಾರ್ಖಂಡ್ ಮತ್ತು ಒಡಿಶಾ) ಸಭೆಯ ನಂತರ ಅವರು ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಜೆಡಿಯು ಬೆಂಬಲವನ್ನು ನೀಡಿದ ನಂತರ ನಾವು ವಂಚನೆಗೊಳಗಾಗಿದ್ದೇವೆ. ಈಗ ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲದಂತಾಗಿದೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಮತ್ತು ಜೆಡಿಯು ಪ್ರಧಾನ ಕಾರ್ಯದರ್ಶಿ ಗುಲಾಂ ರಸೂಲ್ ಬಲ್ಯಾವಿ ಹೇಳಿದ್ದಾರೆ.

ಎರಡಾ-ಎ-ಶರಿಯಾ ಪರವಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) 31 ಪುಟಗಳ ಸಲಹೆಯನ್ನು ಸಲ್ಲಿಸಿದ್ದೆ. ಲೋಕಸಭೆಯಲ್ಲಿ ಮಸೂದೆ ಮಂಡನೆಯಾಗುವ ಮುನ್ನಾ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದ್ದೆ. ಆದರೆ, ಅವರ ಸಲಹೆಗಳಿಗೆ ಜೆಪಿಸಿ ಅಥವಾ ಸಿಎಂ ನಿತೀಶ್‌ ಕಿವಿಗೊಡಲಿಲ್ಲ.

ಈ ಸಂಬಂಧ ಶೀಘ್ರದಲ್ಲೇ ನಾವು ಎರಾಡಾ-ಎ-ಶರಿಯಾ (ಬಿಹಾರ, ಜಾರ್ಖಂಡ್ ಮತ್ತು ಒಡಿಶಾ) ಸಭೆಯನ್ನು ಕರೆಯಲಿದ್ದೇವೆ. ತದನಂತರ ಮುಂದಿನ ಕ್ರಮವನ್ನು ಕೈಗೊಳ್ಳಲಿದ್ದೇವೆ. ಅಲ್ಲದೇ ನ್ಯಾಯಾಲಯದಲ್ಲಿ ಮಸೂದೆಯನ್ನು ಪ್ರಶ್ನಿಸಲು ನಾವು ಕಾನೂನು ತಜ್ಞರೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಅವರು ಗುರುವಾರ ಪಾಟ್ನಾದಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

ಬಲ್ಯಾವಿ ಮಾತ್ರವಲ್ಲ. ಜೆಡಿಯು ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಮತ್ತು ಬಿಹಾರ ವಿಧಾನ ಪರಿಷತ್ತಿನ ಉಪಾಧ್ಯಕ್ಷ ಸಲೀಂ ಪರ್ವೇಜ್ ಅವರು ಶೀಘ್ರದಲ್ಲೇ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಮಸೂದೆಯ ಬಗ್ಗೆ ಪಕ್ಷದ ಮುಸ್ಲಿಂ ಮುಖಂಡರ ಅಸಮಾಧಾನವನ್ನು ತಿಳಿಸುವುದಾಗಿ ಹೇಳಿದ್ದಾರೆ.

ಇದಕ್ಕೂ ಮುನ್ನಾ ಮಾತನಾಡಿದ ಜೆಡಿಯು ಎಂಎಲ್ ಸಿ ಗುಲಾಮ್ ಹಾಗೂ ಮಾಜಿ ಸಂಸದ ಅನ್ಸಾಫ್ ಕರಿಮ್ ಅವರು ವಕ್ಫ್ ತಿದ್ದುಪಡಿ ಕುರಿತ ಜೆಡಿಯುನ ನಿಲುವಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಿತೀಶ್ ಕುಮಾರ್ ಅವರ ನಡೆಯಿಂದ ನಾವು ಆಘಾತಗೊಂಡಿದ್ದೇವೆ ಎಂದು ಅವರು ಹೇಳಿದರು. ವಕ್ಫ್ ಮಸೂದೆಗೆ ಬೆಂಬಲ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...