Homeಮುಖಪುಟಯಾರನ್ನೂ ಬೆಂಬಲಿಸುವುದಿಲ್ಲ | ಮರಾಠ ಮೀಸಲಾತಿ ಹೋರಾಟಗಾರ ಜಾರಂಗೆ ಯೂ ಟರ್ನ್!

ಯಾರನ್ನೂ ಬೆಂಬಲಿಸುವುದಿಲ್ಲ | ಮರಾಠ ಮೀಸಲಾತಿ ಹೋರಾಟಗಾರ ಜಾರಂಗೆ ಯೂ ಟರ್ನ್!

- Advertisement -
- Advertisement -

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷಗಳನ್ನು ಬೆಂಬಲಿಸುವುದಿಲ್ಲ ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಸೋಮವಾರ ಘೋಷಿಸಿದ್ದಾರೆ. ನಾಮಪತ್ರ ಸಲ್ಲಿಸಿರುವ ತಮ್ಮ ಬೆಂಬಲಿಗರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆಯುವಂತೆ ಅವರು ಒತ್ತಾಯಿಸಿದ್ದಾರೆ.

ನಾಮಪತ್ರ ಹಿಂಪಡೆಯಲು ಸೋಮವಾರ ಕೊನೆಯ ದಿನವಾಗಿದೆ. ನವೆಂಬರ್ 20 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಸೋಮವಾರ ಜಾರಂಗೆ ಅವರು ಈ ಘೋಷಣೆ ಮಾಡಿದ್ದರಾದರೂ, ಈ ಹಿಂದೆ ಕೆಲವು ಕ್ಷೇತ್ರಗಳು ಮತ್ತು ಅಭ್ಯರ್ಥಿಗಳ ಪರವಾಗಿ ಬೆಂಬಲ ಸೂಚಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೋಮವಾರ ಬೆಳಗ್ಗೆ ಅಂತರವಾಳಿ ಸಾರಥಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಂಗೆ, ‘‘ಬಹಳ ಸಮಾಲೋಚನೆಯ ನಂತರ ರಾಜ್ಯದಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿದ್ದೇನೆ. ಯಾರನ್ನು ಸೋಲಿಸಬೇಕು, ಯಾರನ್ನು ಆರಿಸಬೇಕು ಎಂಬುದನ್ನು ಮರಾಠ ಸಮುದಾಯವು ತಾನೇ ನಿರ್ಧರಿಸುತ್ತದೆ. ನಾನು ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದೊಂದಿಗೆ ಯಾವುದೇ ಸಂಬಂಧ ಅಥವಾ ಬೆಂಬಲವನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

ಇದೇ ಅವರು ಆಡಳಿತಾರೂಢ ಮಹಾಯುತಿ ಒಕ್ಕೂಟ ಅಥವಾ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಯಿಂದ ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ ಎಂದು ಒತ್ತಿ ಹೇಳಿದ್ದಾರೆ.

“ನಾನು ಯಾರ ಒತ್ತಡಕ್ಕೂ ಒಳಗಾಗಿಲ್ಲ. ಮರಾಠಾ ಮೀಸಲಾತಿ ಹೋರಾಟಕ್ಕಾಗಿ ಅವರ ಬದ್ಧತೆಯ ಆಧಾರದ ಮೇಲೆ ಯಾರನ್ನು ಬೆಂಬಲಿಸಬೇಕೆಂದು ಸಮುದಾಯವೇ ನಿರ್ಧರಿಸುತ್ತದೆ” ಎಂದು ಅವರು ಹೇಳಿದ್ದಾರೆ. ಮರಾಠಾ ಹಿತಾಸಕ್ತಿಗಳಿಗೆ ತಮ್ಮ ಬೆಂಬಲದ ಬಗ್ಗೆ ಅಭ್ಯರ್ಥಿಗಳಿಂದ ಲಿಖಿತ ಅಥವಾ ವೀಡಿಯೊ ಮೂಲಕ ಭರವಸೆಗಳನ್ನು ಪಡೆಯುವಂತೆ ಅವರು ಮತದಾರರನ್ನು ಕೇಳಿದ್ದಾರೆ.

“ಮರಾಠರ ಬೆಂಬಲವಿಲ್ಲದೆ ಈ ರಾಜ್ಯದಲ್ಲಿ ಯಾರೂ ಆಯ್ಕೆಯಾಗಲು ಸಾಧ್ಯವಿಲ್ಲ” ಎಂದು ಹೇಳಿರುವ ಅವರು, ಮರಾಠಾ ಸಮುದಾಯದ ಸದಸ್ಯರು ರಾಜಕೀಯ ರ್ಯಾಲಿಗಳಲ್ಲಿ ಪಾಲ್ಗೊಳ್ಳುವುದನ್ನು ತಪ್ಪಿಸಬೇಕು ಮತ್ತು ಯಾವುದೇ ಪಕ್ಷಗಳಿಗೆ ಮಣಿಯಬಾರದು ಎಂದು ಅವರು ಹೇಳಿದ್ದಾರೆ. ಮರಾಠಾ ಸಮುದಾಯಕ್ಕೆ ಅನ್ಯಾಯ ಮಾಡಿದವರಿಗೆ ಅಥವಾ ಕಿರುಕುಳ ನೀಡಿದವರಿಗೆ ಮತದಾನದ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಇತರ ಹಿಂದುಳಿದ ವರ್ಗಗಳ (ಒಬಿಸಿ) ವರ್ಗದ ಅಡಿಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿಯನ್ನು ಪಡೆಯುವ ತನ್ನ ಬದ್ಧತೆಯನ್ನು ಜಾರಂಗೆ ಪುನರುಚ್ಚರಿಸಿದ್ದಾರೆ. ಮೀಸಲಾತಿಗಾಗಿ ತಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ. ಅವರು ಒಂದು ದಿನದ ಹಿಂದೆಯಷ್ಟೆ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪರ್ವತಿ ಮತ್ತು ದೌಂಡ್‌ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳನ್ನು ಬೆಂಬಲಿಸುವ ಬಗ್ಗೆ ಘೋಷಿಸಿದ್ದರು, ಆದರೆ ಅವರು ಅವರ ಹೆಸರನ್ನು ಬಹಿರಂಗಪಡಿಸಿರಲಿಲ್ಲ.

ಪ್ರಸ್ತುತ ಈ ಎರಡು ಕ್ಷೇತ್ರಗಳು ಬಿಜೆಪಿ ವಶದಲ್ಲಿದ್ದು, ಮರಾಠಾ ಮೀಸಲಾತಿಯನ್ನು ಅವರು ವಿರೋಧಿಸುತ್ತಿದ್ದಾರೆ ಎಂದು ಜಾರಂಗೇ ಆಗಾಗ್ಗೆ ಆರೋಪಿಸುತ್ತಿದ್ದಾರೆ. ಈ ಹಿಂದೆ, ಅವರು ಫೂಲಂಬ್ರಿ, ಕನ್ನಡ (ಛತ್ರಪತಿ ಸಂಭಾಜಿನಗರ), ಹಿಂಗೋಲಿ, ಪಠಾರಿ (ಪರ್ಭಾನಿ), ಮತ್ತು ಹಡಗಾಂವ್ (ನಾಂದೇಡ್‌) ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಸೂಚಿಸಿದ್ದರು.

ಅಲ್ಲದೆ, ಭೋಕರ್ದನ್ (ಜಲ್ನಾ), ಗಂಗಾಪುರ (ಛತ್ರಪತಿ ಸಂಭಾಜಿನಗರ), ಕಲಂನೂರಿ (ಹಿಂಗೋಲಿ), ಗಂಗಾಖೇಡ್, ಜಿಂಟೂರ್ (ಪರ್ಭಾನಿ), ಮತ್ತು ಔಸಾ (ಲಾತೂರ್) ನ ಮಹಾಯುತಿ ಸರ್ಕಾರದ ಹಾಲಿ ಶಾಸಕರನ್ನು ಸೋಲಿಸುವ ಬಗ್ಗೆ ಅವರು ಉಲ್ಲೇಖಿಸಿದ್ದರು. ಮರಾಠ ಮೀಸಲಾತಿ

ಇದನ್ನೂ ಓದಿ: ‘ಕೇವಲ ಹಿಂದಿ ಏಕೆ?’ | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!

‘ಕೇವಲ ಹಿಂದಿ ಏಕೆ?’ | ಹಿಂದಿಯಲ್ಲಿ ಕಲಾಪ ನಡೆಸುವಂತೆ ಕೇಳಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...