Homeಮುಖಪುಟಐಎಎಸ್ ಅಧಿಕಾರಿ ಎದುರು ಸ್ಯಾನಿಟರಿ ಪ್ಯಾಡ್ ಕುರಿತ ದಿಟ್ಟ ಪ್ರಶ್ನೆ ಎತ್ತಿದ ಯುವತಿಗೆ ಬೆಂಬಲ

ಐಎಎಸ್ ಅಧಿಕಾರಿ ಎದುರು ಸ್ಯಾನಿಟರಿ ಪ್ಯಾಡ್ ಕುರಿತ ದಿಟ್ಟ ಪ್ರಶ್ನೆ ಎತ್ತಿದ ಯುವತಿಗೆ ಬೆಂಬಲ

ಪದವಿ ಮುಗಿಯುವವರೆಗೆ ರಿಯಾ ಕುಮಾರಿಯ ಶಿಕ್ಷಣದ ವೆಚ್ಚ ಭರಿಸಲು ವೆಟ್ ಅಂಡ್ ಡ್ರೈ ಪರ್ಸನಲ್ ಕೇರ್ ಕಂಪನಿ ನಿರ್ಧರಿಸಿದೆ.

- Advertisement -
- Advertisement -

“ಸರ್ಕಾರವು ನಮಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನವನ್ನು ನೀಡುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡುತ್ತಿದೆ. ಹೀಗಿರುವಾಗ, ಕೇವಲ 20-30ರೂಗಳ ಸ್ಯಾನಿಟರಿ ಪ್ಯಾಡ್‌ಗಳನ್ನು ಏಕೆ ನೀಡಲು ಸಾಧ್ಯವಿಲ್ಲ?” ಎಂದು ದಿಟ್ಟ ಪ್ರಶ್ನೆ ಎತ್ತಿದ್ದ ಬಿಹಾರದ ವಿದ್ಯಾರ್ಥಿನಿ ರಿಯಾ ಕುಮಾರಿಯವರ ಬೆಂಬಲಕ್ಕೆ ಹಲವರು ಮುಂದೆ ಬಂದಿದ್ದಾರೆ.

ಸೆಪ್ಟಂಬರ್ ಕೊನೆಯ ವಾರದಲ್ಲಿ ಪಾಟ್ನಾದಲ್ಲಿ ನಡೆದ ಯುನಿಸೆಫ್ ಮತ್ತು ರಾಜ್ಯ ಸರ್ಕಾರವು ಜಂಟಿಯಾಗಿ ಆಯೋಜಿಸಿದ್ದ ‘ಸಶಕ್ತ ಬೇಟಿ, ಸಮ್ರದ್ದ ಬಿಹಾರ’ ಎಂಬ ಕಾರ್ಯಗಾರದಲ್ಲಿ ರಿಯಾ ಕುಮಾರಿ ಕೇಳಿದ ಪ್ರಶ್ನೆಗೆ ಬಿಹಾರದ ಮಹಿಳಾ ಅಭಿವೃದ್ಧಿ ನಿಗಮ (ಡಬ್ಲ್ಯುಡಿಸಿ) ವ್ಯವಸ್ಥಾಪಕ ನಿರ್ದೇಶಕಿ ಹರ್ಜೋತ್‌ ಕೌರ್ ಬಾಮ್ಹ್ರಾ ಮುಂದೆ ನೀವು ಕಾಂಡೋಮ್ ಸಹ ಕೇಳುತ್ತೀರಿ ಎಂದು ಉದ್ಧಟತನದಿಂದ ಉತ್ತರಿಸಿದ್ದರು.

ರಾಜಕಾರಣಿಗಳು ಮತಗಳನ್ನು ಕೇಳುತ್ತಾರೆ, ಹೀಗಿರುವಾಗ ಕೆಲವು ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿನಿ ವಾದಿಸಿದಾಗ, “ಮತ ಹಾಕಬೇಡಿ, ಪಾಕಿಸ್ತಾನ ಮಾಡಿ ಈ ದೇಶವನ್ನು. ಹಣ ಅಥವಾ ಸೌಕರ್ಯಗಳಿಗಾಗಿ ನೀವು ಮತ ​​ಚಲಾಯಿಸುತ್ತೀರಾ?” ಎಂದು ಐಎಎಸ್ ಅಧಿಕಾರಿ ಹೇಳಿ ಆ ಹುಡುಗಿಯ ಬಾಯಿ ಮುಚ್ಚಿಸಿ ವ್ಯಾಪಕ ಟೀಕೆಗೆ ಒಳಗಾಗಿದ್ದರು. ತದ ನಂತರ ತನ್ನ ತಪ್ಪಿಗೆ ಕ್ಷಮೆಯಾಚಿಸಿದ್ದರು.

ಸದ್ಯ ಸಾರ್ವಜನಿಕ ವೇದಿಕೆಯಲ್ಲಿ ಮುಜುಗರ ಎಂದು ಭಾವಿಸಿರುವ ವಿಷಯಗಳ ಕುರಿತು ದಿಟ್ಟವಾಗಿ ಪ್ರಶ್ನಿಸಿದ್ದಕ್ಕೆ ರಿಯಾ ಕುಮಾರಿಗೆ ಹಲವು ಎನ್‌ಜಿಓಗಳು ನೆರವು ನೀಡಲು ಮುಂದಾಗಿವೆ.

20 ವರ್ಷದ ರಿಯಾ ಕುಮಾರಿ ಪಾಟ್ನಾದ ಕಮಲ ನೆಹರು ನಗರ ಕಾಲೋನಿಯ ಸ್ಲಮ್ ನಿವಾಸಿಯಾಗಿದ್ದಾರೆ. ರಘುಪುರ್‌ನ ರಾಮ್ ವಿಲಾಸ್ ರಾಯ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ನಾಲ್ವರು ಸಹೋದರಿಯರು ಮತ್ತು ಮೂವರು ಸಹೋದರರ ದೊಡ್ಡ ಕುಟುಂಬ ಅವರದು. ಅಣ್ಣಂದಿರು ರೈಲುಗಳಲ್ಲಿ ಕೂಲಿಗಳಾಗಿ ಕೆಲಸ ಮಾಡುತ್ತಿದ್ದಾರೆ.

ಭಾರತೀಯ ಸ್ಯಾನಿಟರಿ ನ್ಯಾಪ್ಕಿನ್ ತಯಾರಕ ಪ್ಯಾನ್ ಹೆಲ್ತ್‌ಕೇರ್ ಪ್ರೈ.ಲಿ ಸಂಸ್ಥೆಯು ರಿಯಾಗೆ ಒಂದು ವರ್ಷದ ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ಒದಗಿಸುವುದಾಗಿ ಹೇಳಿಕೊಂಡಿದೆ.

ವೆಟ್ ಅಂಡ್ ಡ್ರೈ ಪರ್ಸನಲ್ ಕೇರ್ ಎಂಬ ದೆಹಲಿ ಮೂಲದ ಹೆಣ್ಣು ಮಕ್ಕಳ ನೈರ್ಮಲ್ಯ ಕಾಪಾಡುವ ಕಂಪನಿಯ ಸಿಇಒ ಹರಿಓಂ ತ್ಯಾಗಿಯವರು, “ಸಾರ್ವಜನಿಕ ವೇದಿಕೆಯಲ್ಲಿ ಬಡ ಹುಡುಗಿಯರು ಮತ್ತು ಸ್ಲಂಗಳಲ್ಲಿ ವಾಸಿಸುವ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ವಿಧಾನಗಳ ಸಮಸ್ಯೆಯನ್ನು ದಿಟ್ಟವಾಗಿ ಪ್ರಶ್ನಿಸಿದಕ್ಕಾಗಿ” ಆ ಹುಡುಗಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

“ಸದ್ಯಕ್ಕೆ ಪದವಿ ಮುಗಿಯುವವರೆಗೆ ರಿಯಾ ಕುಮಾರಿಯ ಶಿಕ್ಷಣದ ವೆಚ್ಚವನ್ನು ಕಂಪನಿಯೇ ಭರಿಸಲು ನಿರ್ಧರಿಸಿದೆ. ಭವಿಷ್ಯದಲ್ಲಿ ಅವರು ಯಾವುದೇ ಹೆಚ್ಚಿನ ಸಹಾಯ ಅಥವಾ ಬೆಂಬಲವನ್ನು ಬಯಸಿದರೆ ಅದು ನಿಮ್ಮ ಜೀವನದ ಗುಣಮಟ್ಟವನ್ನು ಸುಧಾರಿಸಲು ನಾವು ನೀಡುವ ಕೊಡುಗೆ ಎಂದು ಭಾವಿಸಿ ಸಹಾಯ ಮಾಡುತ್ತೇವೆ” ಎಂದು ತ್ಯಾಗಿ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಿಯಾ, “ಸ್ಯಾನಿಟರಿ ನ್ಯಾಪ್‌ಕಿನ್ ಬಗೆಗಿನ ನನ್ನ ಪ್ರಶ್ನೆಯಲ್ಲಿ ಯಾವುದೇ ತಪ್ಪಿಲ್ಲ. ಈ ಪ್ರಶ್ನೆ ಎತ್ತಿದ್ದು ಕೂಡ ಕೇವಲ ನನಗಾಗಿ ಮಾತ್ರವಲ್ಲ. ನಾನು ಬೇಕಾದರೆ ಹಣ ಕೊಟ್ಟು ಖರೀದಿಸಬಲ್ಲೆ. ಆದರೆ ನಮ್ಮ ಸ್ಲಮ್‌ನಲ್ಲಿನ ಬಹುತೇಕ ಹೆಣ್ಣುಮಕ್ಕಳಿಗೆ ಕೊಳ್ಳುವ ಶಕ್ತಿಯಿಲ್ಲ. ಈ ಬಗ್ಗೆ ದನಿ ಎತ್ತಿದೆ. ನನಗೆ ಸಿಗುವ ಸ್ಯಾನಿಟರಿ ಪ್ಯಾಡ್‌ಗಳನ್ನು ಬೇರೆ ಹೆಣ್ಣು ಮಕ್ಕಳೊಂದಿಗೆ ಹಂಚಿಕೊಳ್ಳುತ್ತೇನೆ. ನನಗೆ ಸಿಗುವ ಶಿಕ್ಷಣವನ್ನು ಉಳಿದವರಿಗೆ ಅರಿವು ಮೂಡಿಸಲು ಬಳುಸತ್ತೇನೆ” ಎಂದಿದ್ದಾರೆ.

ಕ್ವಿಂಟ್ ಜೊತೆ ಮಾತನಾಡಿರುವ ರಿಯಾ, “ನಾನು ಮಕ್ಕಳನ್ನು ಉಳಿಸಿ ಎಂಬ ಎನ್‌ಜಿಓಗೆ ಸ್ವಯಂ ಸೇವಕಿಯಾಗಿ ಕೆಲಸ ಮಾಡುತ್ತಿದ್ದೆ. ಆಗ ಹಲವು ಸ್ಲಂಗಳಿಗೆ ಭೇಟಿ ನೀಡಿ ಮುಟ್ಟಿನ ಬಗ್ಗೆ ಅರಿವು ಮೂಡಿಸುವ ಕೆಲಸ ನನ್ನದಾಗಿತ್ತು. ಕೆಲವು ಸ್ಲಂಗಳಿಗೆ ಹೋದಾಗ ಅಲ್ಲಿನ ಹೆಣ್ಣು ಮಕ್ಕಳ ಸ್ಥಿತಿ ನೋಡಿ ಬೇಸರವಾಯಿತು. ಬಹುತೇಕರು ಸ್ಯಾನಿಟರಿ ನ್ಯಾಪ್‌ಕಿನ್ ಖರೀದಿಸಲು ಸಾಧ್ಯವಾಗದೆ ಇಂದಿಗೂ ಬಟ್ಟೆಗಳನ್ನೆ ಬಳಸುತ್ತಿದ್ದಾರೆ. ಇದು ಅವರ ಆರೋಗ್ಯದ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಕಣ್ಣಾರೆ ಕಂಡ ಕಷ್ಟಗಳನ್ನು ಪ್ರಶ್ನೆಯಾಗಿಸಿದೆ” ಎಂದಿದ್ದಾರೆ.

ಬಹಳಷ್ಟು ಹೆಣ್ಣು ಮಕ್ಕಳು ಮುಟ್ಟಿನ ಸಮಯದಲ್ಲಿ ವಾರಗಟ್ಟಲೆ ಶಾಲೆಗಳಿಗೆ ಹೋಗದೆ ರಜೆ ಹಾಕುತ್ತಾರೆ. ಇದರಿಂದ ಅವರ ಕಲಿಕೆಯು ಕುಂಠಿತಗೊಳ್ಳುತ್ತದೆ. ಅಂತವರಿಗೆ ಅರಿವು ಮತ್ತು ಧೈರ್ಯ ತುಂಬುತ್ತೇನೆ. ಮುಟ್ಟು ಎಂಬುದು ನಾಚಿಕೆಯ ವಿಷಯವಲ್ಲ ಎಂದು ಅವರಿಗೆ ಕಲಿಸಬೇಕಾಗಿದೆ ಎನ್ನುತ್ತಾರೆ ರಿಯಾ.

ಇದನ್ನೂ ಓದಿ: ಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...