ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಬೆಂಬಲಿಸಿ ಲೋಕಸಭೆಯ ಮಾಜಿ ಸಂಸದ ಹರಿಂದರ್ ಸಿಂಗ್ ಖಲ್ಸಾ ಇಂದು ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಎಎನ್‌ಐ, “ಮಾಜಿ ಲೋಕಸಭಾ ಸದಸ್ಯರಾದ ಹರಿಂದರ್ ಸಿಂಗ್ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಅವರ ಪತ್ನಿಯಂದಿರು, ಮಕ್ಕಳು ಅನುಭವಿಸುತ್ತಿರುವ ದುಃಖ-ದುಮ್ಮಾನಗಳ ಬಗ್ಗೆ ಪಕ್ಷದ ಮುಖಂಡರು ಹಾಗೂ ಸರಕಾರದ ನಿರ್ಲಕ್ಷ್ಯತೆಯ ಧೋರಣೆಯನ್ನು ವಿರೋಧಿಸಿ ಈ ನಿರ್ಧಾರ ಕೈಗೊಂಡಿದ್ದಾರೆ” ಎಂದು ವರದಿ ಮಾಡಿದೆ.
ಇದನ್ನೂ ಓದಿ: ಈ 45 ವರ್ಷಗಳಲ್ಲಿ ರೈತರ ಬೆಳೆಯ ಬೆಲೆ ಹೆಚ್ಚಳ & ಸರ್ಕಾರಿ ನೌಕರರ ವೇತನ…
Punjab: Former Lok Sabha MP Harinder Singh Khalsa resigns from BJP "in protest against the insensitivity shown by party leaders & the govt towards the sufferings of the farmers, their wives and children protesting against the three agrarian laws".
— ANI (@ANI) December 26, 2020
ಇದನ್ನೂ ಓದಿ: ಗ್ರಾ.ಪಂ ಚುನಾವಣೆ: ಯುವ, ಮಹಿಳಾ, ರೈತವರ್ಗಕ್ಕೆ ವಿಶೇಷ ಪ್ರಣಾಳಿಕೆ ತಯಾರಿಸಿದ ಸ್ಪರ್ಧಿ!
ಈ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇತ್ತೀಚೆಗೆ ಹರಿಯಾಣದ ಬಿಜೆಪಿ ಮುಖಂಡರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಕೆಲವು ನಿಮಿಷಗಳ ಹಿಂದೆ ಎನ್‌ಡಿಎ ಮೈತ್ರಿಕೂಟದಿಂದ ಲೋಕ್‌ತಾಂತ್ರಿಕ್ ಪಕ್ಷವು ಹೊರ ಬಂದಿತ್ತು.
ಇದರ ನಡುವೆ, ಈ ಕಾನೂನುಗಳನ್ನು ಹಿಂಪಡೆಯುವಂತೆ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಇತರೆ ಹಲವು ರಾಜ್ಯಗಳ ಸಾವಿರಾರು ರೈತರು ನವೆಂಬರ್ 26 ರಿಂದ ದೆಹಲಿಯ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ NDA ತೊರೆದ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷ
ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಈಗ ಡಿಸಂಬರ್ 29 ರಂದು ಮತ್ತೊಂದು ಸುತ್ತಿನ ಮಾತುಕತೆಗೆ ರೈತರು ಮುಂದಾಗಿದ್ದಾರೆ. ಜೊತೆಗೆ ತಮ್ಮ ಅಜೆಂಡಾವನ್ನೂ ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.
ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.
ಇದನ್ನೂ ಓದಿ: ಬಿಜೆಪಿ ನಾಯಕರನ್ನೇ ‘ಆಪರೇಷನ್’ ಮಾಡಲಿರುವ ಎನ್‌ಸಿಪಿ: ಮಹಾ ಡಿಸಿಎಂ ಅಜಿತ್ ಪವಾರ್


