Homeಕರ್ನಾಟಕಜಾರಕಿಹೊಳಿ ರಾಜೀನಾಮೆ ಅಂಗೀಕರಿಸದಂತೆ ಸೀಮೆಎಣ್ಣೆ ಸುರಿದುಕೊಂಡು ಪ್ರತಿಭಟಿಸಿದ ಬೆಂಬಲಿಗರು!

ಜಾರಕಿಹೊಳಿ ರಾಜೀನಾಮೆ ಅಂಗೀಕರಿಸದಂತೆ ಸೀಮೆಎಣ್ಣೆ ಸುರಿದುಕೊಂಡು ಪ್ರತಿಭಟಿಸಿದ ಬೆಂಬಲಿಗರು!

- Advertisement -
- Advertisement -

ಲೈಂಗಿಕ ಪ್ರಕರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೆ, ಅವರ ರಾಜೀನಾಮೆಯನ್ನು ಅಂಗೀಕರಿಸದಂತೆ ಬೆಳಗಾವಿಯಲ್ಲಿ ಬುಧವಾರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬೆಂಬಲಿಗನೊಬ್ಬ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಬೃಹತ್‌ ನೀರಾವರಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ತಮ್ಮ ಬಳಿ ಕೆಲಸ ಕೇಳಿಕೊಂಡು ಬಂದ ಯುವತಿಯನ್ನು ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಂಡಿದ್ದಾರೆ ಎಂದು ಆರೋಪಗಳೆದ್ದಿದ್ದು, ಅದರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ

ಘಟನೆಯಿಂದ ರಾಜ್ಯದ ಬಿಜೆಪಿ ಸರ್ಕಾರ ಮುಜುಗರಕ್ಕೊಳಗಾಗಿದ್ದು ಅವರನ್ನು ರಾಜೀನಾಮೆ ನೀಡುವಂತೆ ಕೇಳಿಕೊಂಡಿತ್ತು ಎಂದು ಹೇಳಲಾಗಿತ್ತು. ಈ ಹಿನ್ನಲೆಯಲ್ಲಿ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

ಅವರ ರಾಜೀನಾಮೆಯ ಸುದ್ದಿ ತಿಳಿಯುತ್ತಿದ್ದಂತೆ ಅವರ ಬೆಂಬಲಿಗರು, ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಬಾರದು ಎಂದು ಆಗ್ರಹಿಸಿ ಗೋಕಾಕದ ಬಸವೇಶ್ವದ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರಾಜೀನಾಮೆ ಅಂಗೀಕರಿಸಿದರೆ ಜಿಲ್ಲೆಯನ್ನು ಬಂದ್ ಮಾಡುವುದಾಗಿ ರಾಜ್ಯ ಸರ್ಕಾರಕ್ಕೆ ಅವರು ಎಚ್ಚರಿಕೆ ನೀಡಿದ್ದಾರೆ.

ರಾಜೀನಾಮೆ ಪತ್ರ ನೀಡಿದ ಬೆನ್ನಲ್ಲೆ ಗೋಕಾಕ್ ಪಟ್ಟಣ ಬಂದ್‌ ಮಾಡಿಸಲು ಅವರ ಬೆಂಬಲಿಗರು ಮುಂದಾಗಿದ್ದಾರೆ. ಕೆಲವರು ಸ್ವಯಂ ಪ್ರೇರಿತವಾಗಿ ತಮ್ಮ ಅಂಗಡಿಗಳನ್ನು ಬಂದ್‌ ಮಾಡಿದ್ದರೆ, ಕೆಲವು ಅಂಗಡಿಗಳನ್ನು ಅವರ ಬೆಂಬಲಿಗರು ಬಲವಂತವಾಗಿ ಮುಚ್ಚಿಸುತ್ತಿದ್ದ ದೃಶ್ಯ ಕಂಡು ಬಂದಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೋಳಿ ಲೈಂಗಿಕ ಹಗರಣದ ಬಗ್ಗೆ CBI ತನಿಖೆ ಅಗತ್ಯ: ಬಾಲಚಂದರ್ ಜಾರಕಿಹೋಳಿ

ಭತ್ತದ ಗದ್ದೆಯಿಂದ ವಿಶ್ವ ಅಥ್ಲೆಟಿಕ್ಸ್‌ವರೆಗೆ ಓಡಿದ ‘ಚಿನ್ನದ ಹುಡುಗಿ’ | ವಿಡಿಯೊ ನೋಡಿ >>

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಶಿವಸೇನೆಯನ್ನು ವಿಭಜಿಸಿ, ಇಲ್ಲವೇ ಬಂಧನ ಎದುರಿಸಿ ಎಂದು ಏಕನಾಥ್ ಶಿಂದೆಗೆ ಕೇಂದ್ರ ಸರ್ಕಾರ ಬೆದರಿಕೆ...

0
ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಏಕನಾಥ್ ಶಿಂದೆ ಸಚಿವರಾಗಿದ್ದಾಗ, ಅವರನ್ನು ಬಂಧಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯೋಜಿಸಿತ್ತು ಎಂದು ಮಂಗಳವಾರ ಶಿವಸೇನೆ (ಯುಬಿಟಿ) ನಾಯಕ...