Homeಮುಖಪುಟದೆಹಲಿ ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: "ಸಮಸ್ಯೆ" ಎಂದ ಸುಪ್ರೀಂ ಕೋರ್ಟ್

ದೆಹಲಿ ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: “ಸಮಸ್ಯೆ” ಎಂದ ಸುಪ್ರೀಂ ಕೋರ್ಟ್

- Advertisement -
- Advertisement -

ದೆಹಲಿ ಮೆಟ್ರೊ ರೈಲಿನಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವ ದೆಹಲಿ ಸರ್ಕಾರದ ಯೋಜನೆಯು ವೆಚ್ಚವನ್ನು ಹೆಚ್ಚಿಸುವುದರಿಂದ ಸುಪ್ರೀಂ ಕೋರ್ಟ್‌ನಿಂದ ಭಾರೀ ಟೀಕೆಗೆ ಗುರಿಯಾಗಿದೆ.

ದೆಹಲಿ ಸರ್ಕಾರವು ದೆಹಲಿ ಮೆಟ್ರೊ ರೈಲು ನಿಗಮ ಆರ್ಥಿಕ ಸ್ಥಿತಿಯನ್ನು ಸರಿಯಾಗಿ ನಿರ್ವಹಿಸುತ್ತಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು ಮತ್ತು ನಷ್ಟಕ್ಕೆ ಕಾರಣವಾಗುವ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುವುದು ಸರಿಯಲ್ಲ ಎಂದು ಉನ್ನತ ನ್ಯಾಯಾಲಯ ಅಭಿಪ್ರಾಯಪಟ್ಟಿದೆ ಎಂದು ಎನ್.ಡಿ.ಟಿ.ವಿ ವರದಿ ಮಾಡಿದೆ.

ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾಯಮೂರ್ತಿ ದೀಪಕ್ ಗುಪ್ತಾ – ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠವು “ನೀವು ಜನರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದರೆ ಅದು ಸಮಸ್ಯೆಯಾಗುತ್ತದೆ” ಎಂದಿದೆ.

ಸಾರಿಗೆಯೂ ರಾಜ್ಯದ ಜವಾಬ್ದಾರಿಯಾಗಿದೆ. ರಾಜ್ಯವೊಂದೇ ಮೆಟ್ರೊ ನಷ್ಟವನ್ನು ತುಂಬಬೇಕಾಗುತ್ತದೆ. ಈ ವಿಚಾರವಾಗಿ ಕೇಂದ್ರವನ್ನು ಯಾವುದೇ ಕಾರಣಕ್ಕೂ ಒತ್ತಾಯಿಸಬಾರದು, ಅದಕ್ಕಾಗಿ ನಾವು ಉಚಿತ ಮೆಟ್ರೊವನ್ನು ವಿರೋಧಿಸುತ್ತೇವೆ ಎಂದು ನ್ಯಾಯಪೀಠ ಹೇಳಿದೆ.

ಆದಾಗ್ಯೂ, 103.94 ಕಿ.ಮೀ ಉದ್ದದ 4 ನೇ ಹಂತದ ಯೋಜನೆಗಾಗಿ ಭೂ ವೆಚ್ಚವನ್ನು ಕೇಂದ್ರ ಮತ್ತು ದೆಹಲಿ ಸರ್ಕಾರವು 50:50 ಅನುಪಾತದಲ್ಲಿ ಸಮಾನವಾಗಿ ಭರಿಸಲಿದೆ ಎಂದು ನ್ಯಾಯಾಲಯ ನಿರ್ದೇಶಿಸಿದೆ.

ನಾಲ್ಕನೇ ಹಂತದ ಮೆಟ್ರೋ ಯೋಜನೆಯಲ್ಲಿ ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳಲು ಮತ್ತು ಒಟ್ಟು ಭೂ ವೆಚ್ಚ ರೂ. 2,447.19 ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶನ ನೀಡಿತು.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...