Homeಕರ್ನಾಟಕಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ನಾಯಕರ ವಿರುದ್ಧದ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್‌ ತಡೆ

ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ನಾಯಕರ ವಿರುದ್ಧದ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್‌ ತಡೆ

- Advertisement -
- Advertisement -

ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್‌ ಇಂದು ತಡೆಯಾಜ್ಞೆ ವಿಧಿಸಿದೆ.

2022ರಲ್ಲಿ ಅಂದಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ ಎಸ್‌ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಸಿದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ನಾಯಕರಾದ ರಣದೀಪ್‌ ಸಿಂಗ್‌ ಸುರ್ಜೇವಾಲ, ರಾಮಲಿಂಗಾ ರೆಡ್ಡಿ, ಎಂ ಬಿ ಪಾಟೀಲ್‌ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ವಿಧಿಸಿದೆ.

ಹೃಷಿಕೇಶ್‌ ರಾಯ್‌ ಮತ್ತು ಪ್ರಶಾಂತ್‌ ಕುಮಾರ್‌ ಮಿಶ್ರಾ ನೇತೃತ್ವದ ಸುಪ್ರೀಂಕೋರ್ಟ್‌ ಪೀಠ, ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್‌ ನಾಯಕರ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್‌ ಹೊರಡಿಸಿದ ಆದೇಶದ ಬಗ್ಗೆ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿದೆ.

ಸಿದ್ದರಾಮಯ್ಯ ಪರ ವಕೀಲ ಡಾ ಅಭಿಷೇಕ್‌ ಮನು ಸಿಂಘ್ವಿ ಅವರು ಕೋರ್ಟ್‌ಗೆ ಹಾಜರಾಗಿದ್ದು, ಅದೊಂದು ರಾಜಕೀಯ ಪ್ರತಿಭಟನೆಯಾಗಿದ್ದು, ಅದಕ್ಕೆ ಕ್ರಿಮಿನಲ್‌ ಪ್ರಕರಣ ದಾಖಲಿಸುವುದು ಸಂವಿಧಾನದ ವಿಧಿ 19(1)(ಎ) ಅನ್ವಯ ಪ್ರತಿಭಟನೆಯ ಹಕ್ಕಿನ ಉಲ್ಲಂಘನೆಯಾಗಿದೆ. ಕ್ರಿಮಿನಲ್‌ ಉದ್ದೇಶವಿಲ್ಲದೆ ಶಾಂತಿಯುತವಾಗಿ ನಡೆಸಲಾದ ರಾಜಕೀಯ ಪ್ರತಿಭಟನೆಯನ್ನು ಹತ್ತಿಕ್ಕಲು ಶಿಕ್ಷಾರ್ಹ ನಿಬಂಧನೆಗಳನ್ನು ಬಳಸಬಾರದು ಎಂದು  ಕೋರ್ಟ್‌ ಗಮನಕ್ಕೆ ತಂದಿದ್ದರು.

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ 2022ರ ಎಪ್ರಿಲ್‌ 14ರಂದು ಅಂದಿನ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಹಿನ್ನೆಲೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಎಂ.ಬಿ‌. ಪಾಟೀಲ್, ರಾಮಲಿಂಗಾರೆಡ್ಡಿ, ರಣದೀಪ್ ಸಿಂಗ್ ಸುರ್ಜೇವಾಲ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ​ ಕ್ರಿಮಿನಲ್‌ ಕೇಸ್ ದಾಖಲಿಸಲಾಗಿತ್ತು. ಸಿದ್ದರಾಮಯ್ಯ ಸಹಿತ 35ರಿಂದ 40 ಕಾಂಗ್ರೆಸ್‌ ಮುಖಂಡರಿದ್ದ ಗುಂಪು ಆಗಿನ ಸಚಿವ ಈಶ್ವರಪ್ಪ ಅವರ ನಿವಾಸದತ್ತ ಘೋಷಣೆಗಳನ್ನು ಕೂಗುತ್ತಾ ಸಾಗಿದ್ದರು.

ಸಂತೋಷ್‌ ಆತ್ಮಹತ್ಯೆ:

ಕಳೆದ ಬಿಜೆಪಿ ಸರಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ವಿರುದ್ಧ ಲಂಚ ಬೇಡಿಕೆ ಆರೋಪ ಮಾಡಿದ್ದ ಸರ್ಕಾರಿ ಕಾಮಗಾರಿಗಳ ಗುತ್ತಿಗೆದಾರ ಸಂತೋಷ ಕೆ. ಪಾಟೀಲ್‌ (37) ಉಡುಪಿಯ ಖಾಸಗಿ ಲಾಡ್ಜ್‌ ಒಂದರಲ್ಲಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ  ಮಾಡಿಕೊಂಡಿದ್ದರು. ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಈ ಘಟನೆ ನಡೆದಿದ್ದು, ತಮ್ಮ ಸಾವಿಗೆ ಸಚಿವ ಈಶ್ವರಪ್ಪ ನೇರ ಕಾರಣವೆಂದು ವಿವಿಧ ಮಾಧ್ಯಮ ಪ್ರತಿನಿಧಿಗಳಿಗೆ ಸಂತೋಷ್‌ ಕಳುಹಿಸಿದ ವಾಟ್ಸಾಫ್‌ ಮೆಸೇಜ್‌ ಬಯಲಾಗಿತ್ತು.

ಕಾಮಗಾರಿಯ ಹಣ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದಾಗ 40% ಕಮಿಷನ್‌ ಕೇಳುತ್ತಿದ್ದಾರೆ ಎಂದು  ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಪ್ರಧಾನಿ ಮೋದಿ ಹಾಗೂ ಇನ್ನಿತರೆ ಬಿಜೆಪಿ ವರಿಷ್ಠರಿಗೂ ಸಂತೋಷ್‌ ಪತ್ರ ಬರೆದಿದ್ದರು. ಘಟನೆ ಕರ್ನಾಟಕದ ಅಂದಿನ ಬಿಜೆಪಿ ಸರಕಾರಕ್ಕೆ ಭಾರೀ ಮುಜುಗರವನ್ನು ತರಿಸಿತ್ತು.

 ಇದನ್ನು ಓದಿ: ‘ಜೈ ಹಿಂದ್ ಟಿವಿ’ ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿದ ಐಟಿ ಇಲಾಖೆ: ಡಿಕೆ ಶಿವಕುಮಾರ್ ಹೂಡಿಕೆಗೆ ರಾಜಕೀಯ ಸೇಡು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

’ಆದಿವಾಸಿಗಳ ಅಭಿವೃದ್ಧಿ’ ಪುಸ್ತಕದಿಂದ ಆಯ್ದ ಅಧ್ಯಾಯ; ಆದಿವಾಸಿಗಳೊಡನೆ ಅನುಸಂಧಾನ ವಿಧಾನ ಯಾವುದಾಗಿರಬೇಕು?

0
ಶ್ರೀಮತಿ ಖೋಂಗಮೆನ್ (1) ಅವರು, ಈಗ್ಗೆ ಮೂರು ದಿನಗಳ ಹಿಂದೆ ಈ ಸಮ್ಮೇಳನದ ಕುರಿತು ನನಗೆ ವಿವರಗಳನ್ನು ನೀಡಿದರು. ಈ ಕಾರ್ಯಕ್ರಮದ ಆಯೋಜನೆ ಮತ್ತು ವಿವರಗಳನ್ನು ನೋಡಿ ನನಗೆ ಸಂತೋಷವಾಯಿತು. ಈ ತರಹದ...