Homeಮುಖಪುಟಜ್ಞಾನವಾಪಿ ಮಸೀದಿಯ ಪುರಾತತ್ವ ಸರ್ವೇಗೆ ಸುಪ್ರೀಂ ಬ್ರೇಕ್

ಜ್ಞಾನವಾಪಿ ಮಸೀದಿಯ ಪುರಾತತ್ವ ಸರ್ವೇಗೆ ಸುಪ್ರೀಂ ಬ್ರೇಕ್

- Advertisement -
- Advertisement -

ಜುಲೈ 26 ರಂದು ಸಂಜೆ 5 ಗಂಟೆಯವರೆಗೆ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ಸಮೀಕ್ಷೆಗೆ ಅನುಮತಿ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿಯು ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗಬಹುದು.

ಸೋಮವಾರ ಬೆಳಿಗ್ಗೆ 7 ಗಂಟೆಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ 30 ಸದಸ್ಯರ ತಂಡವು ಮಸೀದಿ ಆವರಣದ ಸಮೀಕ್ಷೆಯನ್ನು ಪ್ರಾರಂಭಿಸಿದ ಗಂಟೆಗಳ ನಂತರ ಈ ಆದೇಶ ಬಂದಿದೆ. ಮಸೀದಿ ಸಂಕೀರ್ಣದೊಳಗೆ ತಮ್ಮ ದೇವರನ್ನು ಪೂಜಿಸಲು ಹಕ್ಕು ಕೋರಿ ಹಿಂದೂ ಅರ್ಜಿದಾರರ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯವು ಶುಕ್ರವಾರ ಸಮೀಕ್ಷೆಗೆ ಅನುಮತಿ ನೀಡಿದೆ.

ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಐತಿಹಾಸಿಕ ಮಸೀದಿಯಲ್ಲಿ ಸಮೀಕ್ಷೆ ನಡೆಸುತ್ತಿರುವುದರಿಂದ ಉತ್ಖನನಕ್ಕೆ ಕಾರಣವಾಗಬಹುದು ಎಂಬ ಆತಂಕದೊಂದಿಗೆ ಮಸೀದಿಯ ಆಡಳಿತ ಸಮಿತಿಯು ಕೇಂದ್ರವನ್ನು ಸಂಪರ್ಕಿಸಿತ್ತು.

ಈ ಸಮೀಕ್ಷೆಯಿಂದ ಮಸೀದಿಯ ರಚನೆಯಲ್ಲಿ ಯಾವುದೇ ರೀತಿಯ ಬದಲಾವಣೆ ಮಾಡಲಾಗುವುದಿಲ್ಲ ಎಂದು ಕೇಂದ್ರವು ನ್ಯಾಯಾಲಯಕ್ಕೆ ಭರವಸೆ ನೀಡಿತು. ”ಒಂದು ಇಟ್ಟಿಗೆಯನ್ನು ತೆಗೆಯುವುದಿಲ್ಲ” ಎಂದು ಒತ್ತಿಹೇಳಿತು.

ಸಮೀಕ್ಷೆಯ ಯೋಜನೆಯು ಮಾಪನ, ಛಾಯಾಗ್ರಹಣ ಮತ್ತು ರಾಡಾರ್ ಅಧ್ಯಯನಗಳನ್ನು ಮಾತ್ರ ಒಳಗೊಂಡಿದೆ ಎಂದು ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.

ಆದೇಶದ ಅನುಸಾರವಾಗಿ ಯಾವುದೇ ಉತ್ಖನನವನ್ನು ನಡೆಸುವ ಬಗ್ಗೆ ಎಎಸ್‌ಐ ಯೋಚಿಸುತ್ತಿಲ್ಲ ಎಂದು ತೋರುತ್ತಿದೆ. ಈ ಹಂತದಲ್ಲಿ ಮುಂದಿನ ವಾರ ಸೋಮವಾರದವರೆಗೆ ಒಂದು ವಾರದವರೆಗೆ ಯಾವುದೇ ಉತ್ಖನನವನ್ನು ಮಾಡುವುದಿಲ್ಲ ಕೇಂದ್ರದ ಹೇಳಿಕೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಕೇಂದ್ರದ ಸಲ್ಲಿಕೆಗಳನ್ನು ದಾಖಲಿಸಿದ್ದಾರೆ.

ಜ್ಞಾನವಾಪಿ ಮಸೀದಿಯು, ದೇವಾಲಯದ ಮೇಲೆ ನಿರ್ಮಾಣವಾಗಿದೆಯೇ ಎಂಬುದರ ನಿರ್ಣಯಕ್ಕಾಗಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಸೋಮವಾರ ಬೆಳಿಗ್ಗೆ ವೈಜ್ಞಾನಿಕ ಸಮೀಕ್ಷೆ ಆರಂಭಿಸಿತು. ಮಸೀದಿ ಸಂಕೀರ್ಣದೊಳಗೆ ತಮ್ಮ ದೇವರನ್ನು ಪೂಜಿಸಲು ಹಕ್ಕು ಕೋರಿ ಹಿಂದೂ ಅರ್ಜಿದಾರರ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯವು ಶುಕ್ರವಾರ ಸಮೀಕ್ಷೆಗೆ ಆದೇಶ ನೀಡಿತ್ತು.

ಭಾರತೀಯ ಪುರಾತತ್ವ ಇಲಾಖೆಯ 40 ಅಧಿಕಾರಿಗಳು ಬೆಳಿಗ್ಗೆ 7 ರಿಂದ ಸಮೀಕ್ಷೆ ಆರಂಭಿಸಿದ್ದರು. ಸಮೀಕ್ಷೆ ಹಿನ್ನೆಲೆಯಲ್ಲಿ ಮಸೀದಿಗೆ ಹಾಗೂ ಮಸೀದಿ ಸುತ್ತಮುತ್ತ ಭಾರಿ ಭದ್ರತೆಯನ್ನು ಒದಗಿಸಲಾಗಿತ್ತು. ಸ್ಥಳದಲ್ಲಿ ಪ್ರಕರಣದ ಅರ್ಜಿದಾರರೆಲ್ಲರ ವಕೀಲರು ಹಾಜರಿದ್ದರು.

ಇದನ್ನೂ ಓದಿ: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಆರಂಭ; ಭಾರಿ ಬಿಗಿ ಭದ್ರತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...