‘ಆಪರೇಷನ್ ಸಿಂಧೂರ’ ಕುರಿತಾದ ಹೇಳಿಕೆಗಾಗಿ ಹರಿಯಾಣ ಪೊಲೀಸರಿಂದ ಬಂಧನಕ್ಕೊಳಗಾದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಕೊಂಡಿದೆ. ಆಪರೇಷನ್ ಸಿಂಧೂರ ಕುರಿತ
ಪ್ರೊಫೆಸರ್ ಮಹ್ಮದಾಬಾದ್ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಭೂಷಣ್ ರಾಮಕೃಷ್ಣ ಗವಾಯಿ ನೇತೃತ್ವದ ದ್ವಿಸದಸ್ಯ ಪೀಠಕ್ಕೆ ಈ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ದೇಶಭಕ್ತಿಯ ಹೇಳಿಕೆಗಳಿಗಾಗಿ ಬಂಧಿಸಲಾಗಿದೆ ಎಂದು ಪ್ರೊಫೆಸರ್ ಮಹ್ಮದಾಬಾದ್ ಅವರು ಪ್ರತಿಪಾದಿಸಿದ್ದಾರೆ.
ತನ್ನ ಹೇಳಿಕೆಗಳನ್ನು ಸಂಪೂರ್ಣವಾಗಿ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದು, ದಯವಿಟ್ಟು ಈ ವಿಷಯವನ್ನು ವಿಚಾರಣೆಗೆ ಪಟ್ಟಿ ಮಾಡಿ ಎಂದು ವಿನಂತಿದ್ದಾರೆ. ಸಿಬಲ್ ಅವರ ಹೇಳಿಕೆಯನ್ನು ಆಲಿಸಿದ ನಂತರ, ಸುಪ್ರೀಂಕೋರ್ಟ್‌ನ ಪೀಠವು ಮೇ 20 ಅಥವಾ 21 ರಂದು ವಿಚಾರಣೆಗೆ ಪಟ್ಟಿ ಮಾಡುವುದಾಗಿ ಹೇಳಿದೆ.
ಆಪರೇಷನ್ ಸಿಂಧೂರ ಕುರಿತಾದ ಪ್ರೊಫೆಸರ್ ಅಹ್ಮದಾಬಾದ್ ಅವರ ಸಾಮಾಜಿಕ ಮಾಧ್ಯಮ ಹೇಳಿಕೆಗೆ ಸಂಬಂಧಿಸಿದಂತೆ ಭಾರತದ ಸಾರ್ವಭೌಮತೆ ಮತ್ತು ಭದ್ರತೆಗೆ ಅಪಾಯವನ್ನುಂಟುಮಾಡುವುದು ಸೇರಿದಂತೆ ಗಂಭೀರ ಆರೋಪಗಳ ಅಡಿಯಲ್ಲಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.
ಹರಿಯಾಣದ ಅಶೋಕ ವಿಶ್ವವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಮತ್ತು ರಾಜಕೀಯ ವಿಜ್ಞಾನ ವಿಭಾಗದ ಮುಖ್ಯಸ್ಥರೂ ಆಗಿರುವ ಮಹ್ಮದಾಬಾದ್ ಅವರನ್ನು ಭಾನುವಾರ ನವದೆಹಲಿಯ ಅವರ ನಿವಾಸದಿಂದ ಬಂಧಿಸಲಾಯಿತು. ಅವರ ಬಂಧನದ ನಂತರ, ಅವರನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಯಿತು.
ಆಪರೇಷನ್ ಸಿಂಧೂರ ಬಗ್ಗೆ ಅವರು ನೀಡಿದ ಹೇಳಿಕೆ ಮೇಲೆ ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡಿದ್ದಾರೆ ಎಂದು ಪ್ರಾಸಿಕ್ಯೂಷನ್ ಅವರ ಮೇಲೆ ಆರೋಪ ಹೊರಿಸಿತ್ತು. ಮಹ್ಮದಾಬಾದ್ ಅವರ ಹೇಳಿಕೆಗಳು ಭಾರತೀಯ ಸಶಸ್ತ್ರ ಪಡೆಗಳ ಮಹಿಳಾ ಅಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಯಾಗಿದೆ ಮತ್ತು ಅದು ಕೋಮು ಸೌಹಾರ್ದತೆಯನ್ನು ಉತ್ತೇಜಿಸುತ್ತದೆ ಎಂದು ರಾಜ್ಯ ಮಹಿಳಾ ಆಯೋಗವು ಟೀಕಿಸಿತ್ತು. ಆಪರೇಷನ್ ಸಿಂಧೂರ ಕುರಿತ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು
ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

