Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಬ್ಯಾನ್‌‌ ವಿರುದ್ಧದ ವಿಚಾರಣೆಗೆ ಒಪ್ಪಿಕೊಂಡ ಸುಪ್ರೀಂಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ಬ್ಯಾನ್‌‌ ವಿರುದ್ಧದ ವಿಚಾರಣೆಗೆ ಒಪ್ಪಿಕೊಂಡ ಸುಪ್ರೀಂಕೋರ್ಟ್

- Advertisement -
- Advertisement -

2002ರ ಗುಜರಾತ್ ಗಲಭೆಗಳು ಮತ್ತು ಹಿಂಸಾಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರದ ಕುರಿತು ಚರ್ಚಿಸುವ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ತಡೆದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಒಕ್ಕೂಟ ಸರ್ಕಾರವು ಸಾಕ್ಷ್ಯಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ತುರ್ತು ಅಧಿಕಾರವನ್ನು ಬಳಸಿ ತಡೆಹಿಡಿದಿತ್ತು. ಒಕ್ಕೂಟ ಸರ್ಕಾರ ಬಳಸಿದ ಈ ಅಧಿಕಾರವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದಿನ ಸೋಮವಾರ ನಡೆಸಲಿದೆ.

ಪ್ರಕರಣವನ್ನು ತುರ್ತು ಪಟ್ಟಿ ಮಾಡಬೇಕು ಎಂದು ಕೋರಿ ವಕೀಲ ಎಂ.ಎಲ್. ಶರ್ಮಾ ಮತ್ತು ಹಿರಿಯ ವಕೀಲ ಸಿ.ಯು. ಸಿಂಗ್ ಸಲ್ಲಿಸಿದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಗಮನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಂಎಲ್‌ ಶರ್ಮಾ ಅವರ ಜೊತೆಗೆ, ಹಿರಿಯ ಪತ್ರಕರ್ತ ಎನ್.ರಾಮ್, ಹೋರಾಟಗರ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದಾರೆ.

ಸಾಮಾಜಿಕ ಮಾಧ್ಯಮದಿಂದ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕಲು ಒಕ್ಕೂಟ ಸರ್ಕಾರವು ಐಟಿ ನಿಯಮಗಳ ಅಡಿಯ ತುರ್ತು ಅಧಿಕಾರವನ್ನು ಬಳಸಿಕೊಂಡಿದೆ ಎಂದು ವಕೀಲ ಸಿ.ಯು. ಸಿಂಗ್ ಹೇಳಿದ್ದಾರೆ. “ಎನ್. ರಾಮ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರ ಟ್ವೀಟ್‌ಗಳನ್ನು ತೆಗೆದುಹಾಕಲಾಗಿದೆ. ಅಲ್ಲದೆ ಒಕ್ಕೂಟ ಸರ್ಕಾರವು ನಿರ್ಬಂಧದ ಆದೇಶವನ್ನು ಇನ್ನೂ ಔಪಚಾರಿಕವಾಗಿ ಪ್ರಕಟಿಸಿಲ್ಲ. ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ ಅಜ್ಮೀರ್‌ನ ಕಾಲೇಜು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

“ಎರಡು ಭಾಗಗಳಾಗಿ ಬಿಡುಗಡೆಗೊಂಡ ಬಿಬಿಸಿ ಸಾಕ್ಷ್ಯಚಿತ್ರದ ಮೇಲಿನ ಒಕ್ಕೂಟ ಸರ್ಕಾರದ ನಿಷೇಧವು, ‘ದುಷ್ಕೃತ್ಯ, ಅನಿಯಂತ್ರಿತ ಮತ್ತು ಅಸಂವಿಧಾನಿಕ’ವಾಗಿದೆ’’ ಎಂದು ಎಮ್‌.ಎಲ್. ಶರ್ಮಾ ಅವರ ಅರ್ಜಿಯು ಉಲ್ಲೇಖಿಸಿದೆ.

ಇದನ್ನೂ ಓದಿ: ಫಾಸಿಲ್‌ ಕೊಲೆಗೆ ಮೆಚ್ಚುಗೆ ಸೂಚಿಸಿದ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್: ದ್ವೇಷ ಭಾಷಣಕ್ಕೆ ಖಂಡನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...