Homeಮುಖಪುಟಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ಗೆ ವಕೀಲರ ಭೇಟಿಗೆ ಸುಪ್ರೀಂ ಅನುಮತಿ

ಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ಗೆ ವಕೀಲರ ಭೇಟಿಗೆ ಸುಪ್ರೀಂ ಅನುಮತಿ

ಸಿದ್ದೀಕ್ ಕಪ್ಪನ್ ಅವರಿಗೆ ವಕೀಲರನ್ನು ಭೇಟಿಯಾಗಲು ಅನುಮತಿ ನೀಡಿಲ್ಲ ಎಂಬ ಆರೋಪವನ್ನು ಉತ್ತರ ಪ್ರದೇಶ ಸರ್ಕಾರ ನಿರಾಕರಿಸಿದೆ

- Advertisement -
- Advertisement -

ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರಿಗೆ ತಮ್ಮ ವಕೀಲರನ್ನು ಭೇಟಿಯಾಗಲು, ಜಾಮೀನು ನೀಡಲು ಅನುಕೂಲವಾಗುವಂತೆ ಅರ್ಜಿಗೆ ಸಹಿ ಹಾಕಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿತು. ಜೊತೆಗೆ ಈ ಪ್ರಕರಣ ಮಾಧ್ಯಮಗಳಲ್ಲಿ ವರದಿಯಾದ ರೀತಿಗೆ ನ್ಯಾಯಪೀಠ ಆಕ್ಷೇಪ ವ್ಯಕ್ತಪಡಿಸಿದೆ.

ಸಿಜೆಐ ಎಸ್.ಎ.ಬೊಬ್ಡೆ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠ, ಕಪ್ಪನ್ ಬಂಧನದ ವಿರುದ್ಧ ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (KUWJ) ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಚಾರಣೆ ನಡೆಸಿತು.

ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಅಕ್ಟೋಬರ್ 5 ರಂದು ಉತ್ತರಪ್ರದೇಶಕ್ಕೆ ತೆರಳಿದ್ದ, ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಅವರನ್ನುಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.

ಕಪ್ಪನ್ ತನ್ನ ವಕೀಲರನ್ನು ಭೇಟಿಯಾಗುವುದರಲ್ಲಿ ತಮಗೆ ಯಾವುದೇ ಆಕ್ಷೇಪವಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ ನಂತರ, KUWJ ಪರ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ಕಪ್ಪನ್ ಅವರನ್ನು ಭೇಟಿಯಾಗಲು ಅವಕಾಶ ನೀಡಿತು.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

“ಯಾವುದೇ ಆಕ್ಷೇಪಣೆ ಇರಲಿಲ್ಲ ಮತ್ತು ಯಾವುದೇ ಆಕ್ಷೇಪಣೆ ಕೂಡ ಇಲ್ಲ” ಎಂದ ಎಸ್.ಪಿ. ಮೆಹ್ತಾ ಅವರು ಕಪ್ಪನ್ ಅವರ ವಕೀಲರನ್ನು ಭೇಟಿಯಾಗಲು ಅನುಮತಿ ನೀಡಿಲ್ಲ ಎಂಬ ಆರೋಪವನ್ನು ನಿರಾಕರಿಸಿದರು. ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಮುಂದಿನ ವಾರಕ್ಕೆ ಮುಂದೂಡಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಿರುವಂತೆ ಉತ್ತರಪ್ರದೇಶ ಸರ್ಕಾರವು ನ್ಯಾಯಾಂಗ ಬಂಧನದಲ್ಲಿರುವ ಕಪ್ಪನ್‌ಗೆ ಸಂಬಂಧಿಕರು ಅಥವಾ ವಕೀಲರೊಂದಿಗೆ ಮಾತನಾಡಲು ಅನುಮತಿ ಇಲ್ಲ ಎಂಬುದು “ಸಂಪೂರ್ಣ ಸುಳ್ಳು ನಿರೂಪಣೆ” ಎಂದು ಯುಪಿ ಸರ್ಕಾರ ಹೇಳಿದೆ. ಸಿದ್ದೀಕ್ ಕಪ್ಪನ್, ಲಿಖಿತ ಕೋರಿಕೆಯ ಮೇರೆಗೆ ಫೋನ್ ಮಾಡಿ ಮೂರು ಬಾರಿ ತಮ್ಮ ಕುಟುಂಬ ಸದಸ್ಯರೊಂದಿಗೆ ಸಂವಹನ ನಡೆಸಿದ್ದರು ಎಂದು ಹೇಳಿದೆ.

“ಆರೋಪಿ ಸಿದ್ದೀಕ್ ಕಪ್ಪನ್ ಯಾವುದೇ ಸಂಬಂಧಿ ಅಥವಾ ಯಾವುದೇ ವಕೀಲರನ್ನು ಭೇಟಿಯಾಗಲು ಎಂದಿಗೂ ವಿನಂತಿಸಿಲ್ಲ ಅಥವಾ ಇಲ್ಲಿಯವರೆಗೆ ನ್ಯಾಯಾಲಯ / ಜೈಲು ಅಧಿಕಾರಿಗಳ ಮುಂದೆ ಅಂತಹ ಯಾವುದೇ ಅರ್ಜಿಯನ್ನು ಸಲ್ಲಿಸಿಲ್ಲ” ಎಂದು ಉತ್ತರಪ್ರದೇಶ ಸರ್ಕಾರ ಹೇಳಿದೆ.

ಕಪ್ಪನ್ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ (CFI) ಇಬ್ಬರು ಸದಸ್ಯರು ಹತ್ರಾಸ್ ಅತ್ಯಾಚಾರದ ಬಗ್ಗೆ ಧಾರ್ಮಿಕ ದ್ವೇಷವನ್ನು ಉಂಟುಮಾಡುವ “ಪಿತೂರಿಯ” ಭಾಗವಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ ಮತ್ತು ಕಠಿಣ ಯುಎಪಿಎ ಮತ್ತು ದೇಶದ್ರೋಹ ಸೇರಿದಂತೆ ವಿವಿಧ ಆರೋಪಗಳ ಮೇಲೆ ಬಂಧಿಸಿದ್ದಾರೆ.


ಇದನ್ನೂ ಓದಿ: ಯುಪಿ ಸರ್ಕಾರ ಬಂಧಿಸಿದ ಕೇರಳದ ಪತ್ರಕರ್ತನಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...