Homeಮುಖಪುಟಹೈಕೋರ್ಟ್ ಆದೇಶ ಪಾಲಿಸದ ಯುಪಿ ಸರ್ಕಾರಿ ಅಧಿಕಾರಿಗಳನ್ನು 'ಅಹಂಕಾರಿ' ಎಂದ ಸುಪ್ರೀಂ: ಬಂಧನಕ್ಕೆ ಅನುಮತಿ

ಹೈಕೋರ್ಟ್ ಆದೇಶ ಪಾಲಿಸದ ಯುಪಿ ಸರ್ಕಾರಿ ಅಧಿಕಾರಿಗಳನ್ನು ‘ಅಹಂಕಾರಿ’ ಎಂದ ಸುಪ್ರೀಂ: ಬಂಧನಕ್ಕೆ ಅನುಮತಿ

- Advertisement -
- Advertisement -

ಅಲಹಾಬಾದ್ ಹೈಕೋರ್ಟ್ ಆದೇಶಗಳನ್ನು ಪಾಲಿಸದ ಉತ್ತರ ಪ್ರದೇಶದ ಹಿರಿಯ ಸರ್ಕಾರಿ ಅಧಿಕಾರಿಗಳನ್ನು ‘ಅತ್ಯಂತ ಅಹಂಕಾರಿ’ ಎಂದು ಕರೆದಿರುವ ಸುಪ್ರೀಂ ಕೋರ್ಟ್, ರಾಜ್ಯ ಹಣಕಾಸು ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಬಂಧನಕ್ಕೆ ಅನುಮತಿ ನೀಡಿದೆ.

ಅಲಹಾಬಾದ್ ಹೈಕೋರ್ಟ್ ತನ್ನ ಆದೇಶಗಳ ಜಾರಿಗೆ ವಿಳಂಬ ಮಾಡುತ್ತಿದ್ದ ಉತ್ತರ ಪ್ರದೇಶದ ರಾಜ್ಯ ಹಣಕಾಸು ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕಂದಾಯ) ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿದ ಸುಪ್ರಿಂ ಅಧಿಕಾರಿಗಳನ್ನು “ಅತ್ಯಂತ ದುರಹಂಕಾರಿ” ಎಂದು ಬಣ್ಣಿಸಿದೆ.

ಸರ್ಕಾರಿ ಅಧಿಕಾರಿಗಳು 2017 ರಲ್ಲಿ “ಕಲೆಕ್ಷನ್ ಅಮೀನ್” ಗೆ ಸೇವೆಯನ್ನು ಕ್ರಮಬದ್ಧಗೊಳಿಸುವುದು ಮತ್ತು ಬಾಕಿ ಪಾವತಿಗೆ ಸಂಬಂಧಿಸಿದ ಪ್ರಕರಣ ದಾಖಲಿಸಿದ್ದರು. ನವೆಂಬರ್ 1 ರಂದು ಹೈಕೋರ್ಟ್ ಪ್ರಕರಣವನ್ನು ಆಲಿಸಿ ‘ಅಧಿಕಾರಿಗಳು ನ್ಯಾಯಾಲಯವನ್ನು “ಆಟದ ಮೈದಾನ” ಎಂದು ಪರಿಗಣಿಸುತ್ತಿದ್ದಾರೆ ಮತ್ತು ಈ ಹಿಂದೆ ಸೇವೆಯನ್ನು ಕಾಯಂಗೊಳಿಸುವ ಹಕ್ಕು ನಿರಾಕರಿಸಿದ ವ್ಯಕ್ತಿಗೆ ಬಾಕಿ ವೇತನ ನೀಡಲು ನಿರಾಕರಿಸಿದ್ದಾರೆ’ ಎಂದು ಕಿಡಿಕಾರಿತ್ತು.

“ಪ್ರತಿವಾದಿಗಳು (ಅಧಿಕಾರಿಗಳು) ಉದ್ದೇಶಪೂರ್ವಕವಾಗಿ ಉನ್ನತ ನ್ಯಾಯಾಲಯವನ್ನು ತಪ್ಪುದಾರಿಗೆಳೆದಿದ್ದಾರೆ ಮತ್ತು ಅರ್ಜಿದಾರರಿಗೆ ಬಾಕಿ ವೇತನವನ್ನು ನೀಡದೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ನೀಡಿದ ಭರವಸೆಯನ್ನು ಉಲ್ಲಂಘಿಸಿದ್ದಾರೆ. ಈ ನ್ಯಾಯಾಲಯವು ಪ್ರತಿವಾದಿಗಳ ಖಂಡನೀಯ ನಡವಳಿಕೆಯ ಬಗ್ಗೆ ದುಃಖ ಮತ್ತು ವೇದನೆಯನ್ನು ದಾಖಲಿಸುತ್ತದೆ. ಅದರಂತೆ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕಂದಾಯ) ಮತ್ತು ಪ್ರಸ್ತುತ ಯುಪಿ ಸರ್ಕಾರದ ಕಾರ್ಯದರ್ಶಿ (ಹಣಕಾಸು), ಲಕ್ನೋಗೆ ನಿಯೋಜಿಸಲಾದ ಅಂದಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸುವುದು ಸೂಕ್ತ ಪ್ರಕರಣ ಎಂದು ನಂಬುತ್ತದೆ. ನವೆಂಬರ್ 15 ರಂದು ಈ ನ್ಯಾಯಾಲಯಕ್ಕೆ ಹಾಜರಾಗಲು ಅವಕಾಶ ಮಾಡಿಕೊಟ್ಟು ಅವರ ವಿರುದ್ಧ ಜಾಮೀನು ನೀಡಬಹುದಾದ ವಾರೆಂಟ್ ಹೊರಡಿಸುತ್ತದೆ’’ ಎಂದು ಹೈಕೋರ್ಟ್ ಆದೇಶಿಸಿತ್ತು.

ನಂತರ ಬಂಧನದಿಂದ ಪಾರಾಗಲು ಯುಪಿ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು ಅರ್ಜಿ ವಜಾಗೊಳಿಸಿ ಛೀಮಾರಿ ಹಾಕಿದೆ. “ನಿಮಗೆ ಹೆಚ್ಚಿನ ಶಿಕ್ಷೆಯ ಅಗತ್ಯವಿದೆ. ನಿಮ್ಮ ನಡವಳಿಕೆಯನ್ನು ನೋಡಿ, ನೀವು ಆದೇಶಗಳನ್ನು ಪಾಲಿಸಲು ಏನನ್ನೂ ಮಾಡಿಲ್ಲ. ಹೈಕೋರ್ಟ್ ನಿಮ್ಮ ಬಗ್ಗೆ ತುಂಬಾ ಕರುಣೆ ತೋರಿದೆ… ಆದರೆ ನಿಮಗೆ ನ್ಯಾಯಾಲಯದ ಬಗ್ಗೆ ಗೌರವವಿಲ್ಲ. ಈ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಂಬಾ ದುರಹಂಕಾರಿ ಎಂದು ತೋರುತ್ತಿದೆ” ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠ ಕಿಡಿಕಾರಿದೆ.

ನೀವು ಏನೇ ವಾದ ಮಾಡುವುದಿದ್ದರೂ ಅವರನ್ನು ಬಂಧಿಸಿ ಇಲ್ಲಿಗೆ ಕರೆತನ್ನಿ ಎಂದು ಪೀಠವು ಉತ್ತರ ಪ್ರದೇಶ ಸರ್ಕಾರದ ಪರ ವಾದಿಸಿದ ಅಡಿಷನಲ್ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿರವರಿಗೆ ಸೂಚಿಸಿತು.


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...