Homeಮುಖಪುಟಕೃಷಿ ತ್ಯಾಜ್ಯ ಸುಡುವುದನ್ನು ನಿಯಂತ್ರಿಸಲು ಏಕ ಸದಸ್ಯ ಸಮಿತಿ ರಚನೆ

ಕೃಷಿ ತ್ಯಾಜ್ಯ ಸುಡುವುದನ್ನು ನಿಯಂತ್ರಿಸಲು ಏಕ ಸದಸ್ಯ ಸಮಿತಿ ರಚನೆ

ಕೃಷಿ ತ್ಯಾಜ್ಯ ಸುಡುವುದು ಅದನ್ನು ನಿಯಂತ್ರಿಸುವುದು ಹೇಗೆ ಎಂಬುದರ ಬಗ್ಗೆ ಅಧ್ಯಯನ ನಡೆಸಿ, 15 ದಿನಗಳಲ್ಲಿ ವರದಿ ಒಪ್ಪಿಸುವಂತೆ ಏಕ ಸದಸ್ಯ ಸಮಿತಿಗೆ ಸೂಚನೆ ನೀಡಿದೆ. 

- Advertisement -
- Advertisement -

ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಪಂಜಾಬ್‌, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿನ ಕೃಷಿ ತ್ಯಾಜ್ಯ ಸುಡುವುದನ್ನು ನಿಯಂತ್ರಿಸಲು ಹಾಗೂ ಅಗತ್ಯ ಕ್ರಮಗಳ ಕುರಿತು ಅಧ್ಯಯನ ನಡೆಸಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮದನ್ಬಿ..ಲೋಕೂರ್ ನೇತೃತ್ವದಲ್ಲಿ​​ ಸಮಿತಿ ರಚಿಸಿದೆ.

ಪಂಜಾಬ್‌, ಹರಿಯಾಣ ಮತ್ತು ಉತ್ತರ ಪ್ರದೇಶದ ರಾಜ್ಯಗಳ ಯಾವ್ಯಾವ ಭಾಗಗಳಲ್ಲಿ ಕೃಷಿ ತ್ಯಾಜ್ಯ ಸುಡಲಾಗುತ್ತದೆ, ಅದನ್ನು ನಿಯಂತ್ರಿಸುವುದು ಹೇಗೆ ಎಂಬುದರ ಬಗ್ಗೆ ಅಧ್ಯಯನ ನಡೆಸಿ, 15 ದಿನಗಳಲ್ಲಿ ವರದಿ ಒಪ್ಪಿಸುವಂತೆ ಏಕ ಸದಸ್ಯ ಸಮಿತಿಗೆ ಸೂಚನೆ ನೀಡಿದೆ.

ಏಕ ಸದಸ್ಯ ಸಮಿತಿಗೆ ಸಹಾಯ ಮಾಡಲು ಎನ್‌ಸಿಸಿ, ಎನ್‌ಎಸ್‌ಎಸ್‌ ಹಾಗೂ ಭಾರತ್ ಸ್ಕೌಟ್ಸ್‌ಗಳನ್ನು ನಿಯೋಜಿಸಬೇಕೆಂದು ಹರಿಯಾಣ, ಪಂಜಾಬ್‌, ಉತ್ತರ ಪ್ರದೇಶ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿ​ಗಳಿಗೆ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎಸ್​​.ಎ ಬೊಬ್ಡೆ ಅವರ ನ್ಯಾಯಪೀಠ ಆದೇಶಿಸಿದೆ.

ಏಕವ್ಯಕ್ತಿ ಸಮಿತಿಯ ನೇಮಕವನ್ನು ಮರುಪರಿಶೀಲಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಆಕ್ಷೇಪಣೆಯನ್ನು ಪೀಠ ತಿರಸ್ಕರಿಸಿತು. ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 26 ರಂದು ನಿಗದಿಪಡಿಸಲಾಗಿದೆ.


ಇದನ್ನೂ ಓದಿ: ಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...