Homeಮುಖಪುಟಜಮ್ಮು, ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಯಾವಾಗ ಮರು ಸ್ಥಾಪಿಸುತ್ತೀರಿ?: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ಜಮ್ಮು, ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಯಾವಾಗ ಮರು ಸ್ಥಾಪಿಸುತ್ತೀರಿ?: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

- Advertisement -
- Advertisement -

ಆರ್ಟಿಕಲ್ 370 ರದ್ಧತಿ ಕುರಿತ ಅರ್ಜಿ ವಿಚಾರಣೆಯ 12ನೇ ದಿನವಾದ ಇಂದು ಮಹತ್ವದ ಬೆಳವಣಿಗೆ ನಡೆದಿದ್ದು, ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲ್ಪಟ್ಟಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಕುರಿತು  ಸಮಯ ಅಥವಾ ಮಾರ್ಗಸೂಚಿಯನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ.

ಭಾರತದ ಸಿಜೆಐ ಡಿವೈ ಚಂದ್ರಚೂಡ ಮತ್ತು ನ್ಯಾಯಮೂರ್ತಿಗಳಾದ ಎಸ್‌ಕೆ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಪೀಠವು ಈ ಮಹತ್ವದ ಸೂಚನೆಯನ್ನು ಕೇಂದ್ರ ಸರಕಾರಕ್ಕೆ ನೀಡಿದೆ.

ಸುಪ್ರೀಂಕೋರ್ಟ್ ಪೀಠದ ಮುಂದೆ ಉತ್ತರಿಸಿದ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರು, 2019ರಲ್ಲಿ ಮಸೂದೆಯನ್ನು ಮಂಡಿಸುವಾಗ ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು & ಕಾಶ್ಮೀರದ ರಾಜ್ಯತ್ವವನ್ನು ಸರಿಯಾದ ಸಮಯದಲ್ಲಿ ಮರುಸ್ಥಾಪಿಸಲಾಗುವುದು ಎಂದು ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದರು. ಕೇಂದ್ರಾಡಳಿತ ಸ್ಥಾನಮಾನ ಶಾಶ್ವತವಲ್ಲ ಎಂದು ಹೇಳಿದ್ದಾರೆ.

ಈ ವೇಳೆ ಮುಖ್ಯ ನ್ಯಾಯಾಧೀಶರು ಸಮಯದ ಬಗ್ಗೆ ಪ್ರಶ್ನಿಸಿದ್ದು ಮತ್ತು ಯಾವಾಗ ಚುನಾವಣೆ ನಡೆಸುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಸಾಲಿಸಿಟರ್ ಜನರಲ್ ಅವರು ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವ ಪ್ರಕ್ರಿಯೆಯು ಈಗಾಗಲೇ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ವಾದಗಳ ಸಂದರ್ಭದಲ್ಲಿ ಕೇಂದ್ರವು ತಾತ್ಕಾಲಿಕ ಅವಧಿಗೆ ರಾಜ್ಯವನ್ನು ಕೇಂದ್ರಾಡಳಿತವಾಗಿ ಪರಿವರ್ತಿಸಲು ಸಾಧ್ಯವೇ ಎಂದು ಸಿಜೆಐ  ಅವಲೋಕಿಸಿದ್ದಾರೆ.

ಸಂಸತ್ತಿನ ಹೇಳಿಕೆಯಂತೆ ಸರ್ಕಾರ ರಾಜ್ಯದ ಪುನಃಸ್ಥಾಪನೆಗೆ ಬದ್ಧವಾಗಿದೆ ಎಂದು ಸಾಲಿಸಿಟರ್ ಜನರಲ್ ಪುನರುಚ್ಚರಿಸಿದ್ದಾರೆ. ಮುಖ್ಯ ನ್ಯಾಯಾಧೀಶರು ರಾಷ್ಟ್ರೀಯ ಭದ್ರತಾ ಕಾಳಜಿಗಳನ್ನು ಒಪ್ಪಿಕೊಂಡಿದ್ದು,  ಈ ಪ್ರದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸುವ ಪ್ರಾಮುಖ್ಯತೆಯನ್ನು ಕೂಡ ಒತ್ತಿ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರವನ್ನು ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ವಿಚಾರಣೆ ನಡೆಸುತ್ತಿದೆ. ಹಿಂದೆ ರಾಜ್ಯವಾಗಿದ್ದ ಜಮ್ಮು-ಕಾಶ್ಮೀರವನ್ನು  2019 ರಲ್ಲಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಗಿತ್ತು.

ಇದನ್ನು ಓದಿ: ನೀವು ಯಾಕೆ ಪಾಕಿಸ್ತಾನಕ್ಕೆ ಹೋಗಿಲ್ಲ?: ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರಶ್ನಿಸಿದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಪ್ರಕರಣ: ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣಗೆ ಮಧ್ಯಂತರ ಜಾಮೀನು

0
ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 47ರ ಹರೆಯದ ಮನೆ ಕೆಲಸದಾಕೆಗೆ ಲೈಂಗಿಕ...