Homeಮುಖಪುಟದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ;...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

- Advertisement -
- Advertisement -

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್ ಮೊರೆ ಹೋಗುವಂತೆ ಅರ್ಜಿದಾರರಿಗೆ ಸೋಮವಾರ (ಫೆ.16) ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಪಾಂಚೋಲಿ ಅವರನ್ನೊಳಗೊಂಡ ಪೀಠವು ಈ ಪ್ರಕರಣದಲ್ಲಿ ಸಂವಿಧಾನದ 32ನೇ ವಿಧಿಯನ್ನು ಬಳಸಲು ಹಿಂಜರಿಕೆ ವ್ಯಕ್ತಪಡಿಸಿತು. ಅರ್ಜಿದಾರರು ಮೊದಲು ಸಂಬಂಧಪಟ್ಟ ಹೈಕೋರ್ಟ್‌ಗಳನ್ನು ಸಂಪರ್ಕಿಸಬೇಕು ಎಂದು ಪೀಠವು ತಿಳಿಸಿತು.

ಹೈಕೋರ್ಟ್‌ಗಳ ಅಧಿಕಾರವನ್ನು ಕಡೆಗಣಿಸಿ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಬರುವ “ಶಾರ್ಟ್‌ಕಟ್” ಪ್ರವೃತ್ತಿಯನ್ನು ನ್ಯಾಯಪೀಠವು ಟೀಕಿಸಿತು. ಚುನಾವಣೆಗಳು ಸಮೀಪಿಸಿದಾಗ ರಾಜಕೀಯ ಹೋರಾಟಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ನಡೆಸುವ “ಗೊಂದಲಕಾರಿ ಪ್ರವೃತ್ತಿ” ಹೆಚ್ಚುತ್ತಿದೆ ಎಂದು ಸಿಜೆಐ ಸೂರ್ಯ ಕಾಂತ್ ಬೇಸರ ವ್ಯಕ್ತಪಡಿಸಿದರು.

ಈ ಪ್ರಕರಣವನ್ನು ಪರಿಣಾಮಕಾರಿಯಾಗಿ ನಿರ್ಣಯಿಸಲು ಹೈಕೋರ್ಟ್‌ಗೆ ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು, ಅರ್ಜಿದಾರರ ಮನವಿಯನ್ನು ಆದ್ಯತೆಯ ಮೇಲೆ ಆಲಿಸುವಂತೆ ಗುವಾಹಟಿ ಹೈಕೋರ್ಟ್‌ಗೆ ವಿನಂತಿಸಿತು. ರಾಜಕೀಯ ಪಕ್ಷಗಳು ಪರಸ್ಪರ ಗೌರವ ಮತ್ತು ಸಾಂವಿಧಾನಿಕ ನೈತಿಕತೆಯ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು ಎಂದು ನ್ಯಾಯಾಲಯವು ಕರೆ ನೀಡಿತು.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಅವರು, ಈ ಪ್ರಕರಣವು ಕೇವಲ ಅಪರಾಧ ಎಸಗಿರುವುದಕ್ಕೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ಸಾಂವಿಧಾನಿಕ ಹುದ್ದೆಯಲ್ಲಿರುವವರು ತಮ್ಮ ಪದವಿಯ ಪ್ರಮಾಣ ವಚನವನ್ನು ಉಲ್ಲಂಘಿಸಿರುವ ಗಂಭೀರ ವಿಷಯವಾಗಿದೆ ಎಂದು ಪ್ರತಿಪಾದಿಸಿದರು.

ಇದು ಸಂವಿಧಾನದ 32ನೇ ವಿಧಿಯನ್ನು ಬಳಸಲು ಅತ್ಯಂತ ಯೋಗ್ಯವಾದ ಪ್ರಕರಣವಾಗಿದೆ. ದೇಶದ ಸಾಂವಿಧಾನಿಕ ಮತ್ತು ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯಾದಾಗ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಸಿಂಘ್ವಿ ವಾದಿಸಿದರು.

ಅರ್ಜಿದಾರರು ಅಸ್ಸಾಂ ಮುಖ್ಯಮಂತ್ರಿಯ ವಿರುದ್ಧವೇ ವಿಶೇಷ ತನಿಖಾ ತಂಡ (ಎಸ್ಐಟಿ) ಮೂಲಕ ತನಿಖೆ ನಡೆಸಬೇಕೆಂದು ಕೋರುತ್ತಿದ್ದಾರೆ. ರಾಜ್ಯದ ಆಡಳಿತ ಮುಖ್ಯಸ್ಥರ ವಿರುದ್ಧ ತನಿಖೆ ನಡೆಯಬೇಕಿರುವುದರಿಂದ, ಹೈಕೋರ್ಟ್‌ನಲ್ಲಿ ಸೂಕ್ತ ಪರಿಹಾರ ಸಿಗದೇ ಇರಬಹುದು ಎಂಬ ಆತಂಕವನ್ನು ಸಿಂಘ್ವಿ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಕೇವಲ ಅಸ್ಸಾಂನಲ್ಲಿ ಮಾತ್ರವಲ್ಲದೆ, ಜಾರ್ಖಂಡ್ ಮತ್ತು ಛತ್ತೀಸ್‌ಗಢದಲ್ಲೂ ಇಂತಹ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ಆದ್ದರಿಂದ ಇದು ಕೇವಲ ಒಂದು ರಾಜ್ಯಕ್ಕೆ ಸೀಮಿತವಾದ ವಿಷಯವಲ್ಲ, ಇಡೀ ದೇಶಕ್ಕೆ ಸಂಬಂಧಿಸಿದೆ ನ್ಯಾಯಪೀಠದ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಪೀಠವು, ಹೈಕೋರ್ಟ್‌ಗಳ ಮೇಲೆ ನಂಬಿಕೆ ಇಡಬೇಕು ಮತ್ತು ಅವುಗಳನ್ನು ಕಡೆಗಣಿಸಬಾರದು ಎಂದು ಸೂಚಿಸಿತು. ಹೈಕೋರ್ಟ್‌ಗಳು ಕೂಡ ಎಸ್‌ಐಟಿ ತನಿಖೆಗೆ ಆದೇಶಿಸುವ ಅಧಿಕಾರ ಹೊಂದಿವೆ ಎಂದು ಸಿಜೆಐ ಸೂರ್ಯ ಕಾಂತ್ ಸ್ಪಷ್ಟಪಡಿಸಿದರು.

ಅರ್ಜಿದಾರರ ಪರ ವಾದ ಮಂಡಿಸಿದ ಮತ್ತೊಬ್ಬರು ವಕೀಲ ನಿಝಾಮ್ ಪಾಷಾ, ಹೈಕೋರ್ಟ್ ಅಸ್ಸಾಂನ ಹೊರಗಿನ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿಯನ್ನು ರಚಿಸಬೇಕಾಗಬಹುದು ಎಂದು ವಾದಿಸಿದರು. ಹೈಕೋರ್ಟ್ ಕೂಡ ಅಂತಹ ಆದೇಶವನ್ನು ನೀಡಬಹುದು ಎಂದು ಸಿಜೆಐ ಹೇಳಿದರು ಮತ್ತು ಹೈಕೋರ್ಟ್ ನ್ಯಾಯಾಧೀಶರಾಗಿ ತಾನು ಅಂತಹ ನಿರ್ದೇಶನವನ್ನು ನೀಡಿರುವುದಾಗಿ ನೆನಪಿಸಿಕೊಂಡರು.

ನಾಲ್ವರು ಅಸ್ಸಾಮಿ ವ್ಯಕ್ತಿಗಳ ಪರವಾಗಿ ವಾದಿಸಿದ ವಕೀಲ ನಿಝಾಮ್ ಪಾಷಾ, ತಾನು ಈಗಾಗಲೇ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ಈ ವಿಷಯದಲ್ಲಿ ಸ್ವಯಂಪ್ರೇರಿತ ಹಸ್ತಕ್ಷೇಪ ಮಾಡುವಂತೆ ಕೋರಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಕೇವಲ ಪತ್ರ ಬರೆಯುವುದು ಮತ್ತು ಅಧಿಕೃತವಾಗಿ ಅರ್ಜಿ ಸಲ್ಲಿಸುವುದು ಇವೆರಡೂ ವಿಭಿನ್ನ ವಿಷಯಗಳು ಎಂದು ತಿಳಿಸಿದರು.

ನ್ಯಾಯಾಲಯವು ಆದೇಶವನ್ನು ನೀಡಿದ ನಂತರ, ಹಿರಿಯ ವಕೀಲ ಸಿಂಘ್ವಿ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವವರು ತಮ್ಮ ಭಾಷಣಗಳಲ್ಲಿ ಸಂಯಮ ಪಾಲಿಸಬೇಕಾದ ಅಗತ್ಯತೆಯ ಕುರಿತು ಕೆಲವು ಸಾಮಾನ್ಯ ಅಭಿಪ್ರಾಯಗಳನ್ನು ಅಥವಾ ಮಾರ್ಗಸೂಚಿಗಳನ್ನು ನೀಡುವಂತೆ ಪೀಠವನ್ನು ವಿನಂತಿಸಿದರು.

ಇದಕ್ಕೆ ನಿರಾಕರಿಸಿದ ಸಿಜೆಐ, “ನಾವು ಈಗಾಗಲೇ ಈ ಪ್ರಕರಣವನ್ನು ಹೈಕೋರ್ಟ್‌ಗೆ ವರ್ಗಾಯಿಸಲು ನಿರ್ಧರಿಸಿರುವುದರಿಂದ, ಈ ಹಂತದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ನಮ್ಮಲ್ಲಿ ಒಂದು ಅಂತರ್ಗತ ವ್ಯವಸ್ಥೆಯಿದೆ. ಸಾಂವಿಧಾನಿಕ ಚೌಕಟ್ಟು ಒದಗಿಸಿರುವ ಆ ವ್ಯವಸ್ಥೆಯನ್ನು ನಾವೆಲ್ಲರೂ ಗೌರವಿಸೋಣ” ಎಂದರು.

ಪ್ರಕರಣವು ಕೆಳ ಹಂತದ ನ್ಯಾಯಾಲಯದ (ಹೈಕೋರ್ಟ್) ವ್ಯಾಪ್ತಿಗೆ ಹೋದಾಗ, ಅದರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಹೇಳಿಕೆಗಳನ್ನು ನೀಡಬಾರದು ಎಂಬ ನ್ಯಾಯಾಂಗದ ಶಿಸ್ತನ್ನು ಸಿಜೆಐ ಎತ್ತಿಹಿಡಿದರು. ಸಂವಿಧಾನವು ರೂಪಿಸಿರುವ ನ್ಯಾಯಾಂಗ ವ್ಯವಸ್ಥೆಯ ಹಂತಗಳನ್ನು ಗೌರವಿಸುವುದು ಮುಖ್ಯ ಎಂದು ಅವರು ಒತ್ತಿ ಹೇಳಿದರು. ಪ್ರಕರಣದ ಗುಣಾವಗುಣಗಳ ಬಗ್ಗೆ ಯಾವುದೇ ಮುನ್ಸೂಚನೆ ನೀಡದೆ, ಹೈಕೋರ್ಟ್ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಳ್ಳಲು ಅವಕಾಶ ನೀಡಲಾಯಿತು.

ಸಿಎಂ ಶರ್ಮಾ ವಿರುದ್ದ ಒಟ್ಟು ಮೂರು ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿತ್ತು. ಮೊದಲ ಎರಡು ಅರ್ಜಿಗಳನ್ನು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) – ಸಿಪಿಐ(ಎಂ) ಮತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ನಾಯಕಿ ಆನ್ನಿ ರಾಜಾ ಅವರು ಸಲ್ಲಿಸಿದ್ದರು. ಮೂರನೇ ಅರ್ಜಿಯನ್ನು ಅಸ್ಸಾಂನ ನಿವೃತ್ತ ಪ್ರಾಧ್ಯಾಪಕ ಮತ್ತು ಬುದ್ಧಿಜೀವಿ ಡಾ. ಹಿರೇನ್ ಗೊಹೈನ್, ಅಸ್ಸಾಂನ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹರಿಕೃಷ್ಣ ದೇಕಾ, ಹಿರಿಯ ಪತ್ರಕರ್ತ ಪರೇಶ್ ಚಂದ್ರ ಮಲಕರ್ ಮತ್ತು ಹಿರಿಯ ವಕೀಲ ಶಂತನು ಬೋರ್ಠಾಕೂರ್ ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...