Homeಮುಖಪುಟವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಸಂಬಂಧ ಕೇಂದ್ರ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಕಾರ್ಯದರ್ಶಿ ಮತ್ತು ಎನ್‌ಸಿಇಆರ್‌ಟಿ ನಿರ್ದೇಶಕರಿಗೆ ನ್ಯಾಯಾಲಯ ‘ಶೋಕಾಸ್ ನೋಟಿಸ್’ ಜಾರಿ ಮಾಡಿದೆ. ಈ ವಿಚಾರದಲ್ಲಿ ನಿಮ್ಮ ಮೇಲೆ ನ್ಯಾಯಾಂಗ ನಿಂದನೆ ಕಾಯ್ದೆ ಅಥವಾ ಇತರ ಕಾನೂನುಗಳ ಅಡಿಯಲ್ಲಿ ಯಾಕೆ ಕ್ರಮ ಕೈಗೊಳ್ಳಬಾರದು? ಎಂದು ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು livelaw.in ವರದಿ ಮಾಡಿದೆ.

ಪಠ್ಯಪುಸ್ತಕದ ವಿಷಯವು ಮೇಲ್ನೋಟಕ್ಕೆ ‘ಗಂಭೀರ ದುರ್ನಡತೆ’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಒಂದು ವೇಳೆ ಈ ವಿಷಯವನ್ನು ಉದ್ದೇಶಪೂರ್ವಕವಾಗಿ ನ್ಯಾಯಾಂಗದ ಘನತೆಯನ್ನು ಕುಂದಿಸಲು ಅಥವಾ ನ್ಯಾಯಾಂಗವನ್ನು ಅವಮಾನಿಸಲು ಸೇರಿಸಲಾಗಿದೆ ಎಂದು ಸಾಬೀತಾದರೆ, ಇದು ‘ಕ್ರಿಮಿನಲ್ ನ್ಯಾಯಾಂಗ ನಿಂದನೆ’ ವ್ಯಾಪ್ತಿಗೆ ಬರುತ್ತದೆ ಎಂದು ಕೋರ್ಟ್ ಎಚ್ಚರಿಸಿದೆ. ಅಂದರೆ, ನ್ಯಾಯಾಂಗ ವ್ಯವಸ್ಥೆಯ ಮೇಲಿರುವ ಸಾರ್ವಜನಿಕ ನಂಬಿಕೆಗೆ ಧಕ್ಕೆ ತರುವ ಪ್ರಯತ್ನ ಇದಾಗಿದೆಯೇ ಎಂಬ ಬಗ್ಗೆ ನ್ಯಾಯಾಲಯವು ತನಿಖೆ ನಡೆಸಲಿದೆ.

ಪುಸ್ತಕದ ಮೇಲೆ ನಿಷೇಧ ಹೇರಿದ ಕೋರ್ಟ್, ಎಲ್ಲಾ ಮುದ್ರಿತ ಪ್ರತಿಗಳು ವಶಪಡಿಸಿಕೊಳ್ಳಲು ಮತ್ತು ಡಿಜಿಟಲ್ ಪ್ರತಿಗಳನ್ನು ತೆಗೆದುಹಾಕಲು ಆದೇಶ

ಪಠ್ಯಪುಸ್ತಕದ ಪ್ರಕಟಣೆ, ಮರುಮುದ್ರಣ ಮತ್ತು ಡಿಜಿಟಲ್ ರೂಪದ ಪ್ರಸಾರವನ್ನು ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ನಿಷೇಧಿಸಿದೆ. ವಿವಾದಾತ್ಮಕ ವಿಷಯವನ್ನು ಯಾವುದೇ ರೂಪದಲ್ಲಿ ಹಂಚಿಕೊಳ್ಳುವುದನ್ನು ಗಂಭೀರವಾಗಿ ಪರಿಗಣಿಸುವುದಾಗಿ ಎಚ್ಚರಿಸಿದೆ. “ಈ ಪುಸ್ತಕವನ್ನು ಮುದ್ರಿತ ಅಥವಾ ಡಿಜಿಟಲ್ ರೂಪದಲ್ಲಿ ವಿತರಿಸುವ ಯಾವುದೇ ಪ್ರಯತ್ನವನ್ನು ನ್ಯಾಯಾಲಯದ ಆದೇಶದ ಉದ್ದೇಶಪೂರ್ವಕ ಉಲ್ಲಂಘನೆ ಎಂದು ಪರಿಗಣಿಸಲಾಗುವುದು” ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಅಂದರೆ, ಈ ಪಠ್ಯದ ಯಾವುದೇ ಪಿಡಿಎಫ್ ಅಥವಾ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು ಕೂಡ ಕಾನೂನುಬಾಹಿರ ಕ್ರಮವಾಗುತ್ತದೆ.

ವಿವಾದಾತ್ಮಕ ವಿಷಯವಿರುವ ಪಠ್ಯಪುಸ್ತಕದ ಎಲ್ಲಾ ಮುದ್ರಿತ ಪ್ರತಿಗಳನ್ನು ಕೂಡಲೇ ವಶಪಡಿಸಿಕೊಳ್ಳಲು ನ್ಯಾಯಾಲಯ ಆದೇಶಿಸಿದೆ. ಕೇಂದ್ರ ಮತ್ತು ರಾಜ್ಯ ಶಿಕ್ಷಣ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಮಾರಾಟ ಮಳಿಗೆಗಳಲ್ಲಿ ಅಥವಾ ಶಾಲೆಗಳಲ್ಲಿ ಇರುವ ಈ ಪುಸ್ತಕದ ಎಲ್ಲಾ ಹಾರ್ಡ್ ಮತ್ತು ಸಾಫ್ಟ್ ಪ್ರತಿಗಳನ್ನು ಸಾರ್ವಜನಿಕ ಲಭ್ಯತೆಯಿಂದ ತೆಗೆದುಹಾಕುವುದನ್ನು ಖಚಿತಪಡಿಸಿಕೊಳ್ಳಲು ಎನ್‌ಸಿಇಆರ್‌ಟಿಗೆ ನಿರ್ದೇಶನ ನೀಡಿದೆ.

ಎಲ್ಲಾ ಮುದ್ರಿತ ಮತ್ತು ಡಿಜಿಟಲ್ ವೇದಿಕೆಗಳಿಂದ ಪುಸ್ತಕವನ್ನು ತಕ್ಷಣವೇ ತೆಗೆದುಹಾಕಬೇಕು. ಶಾಲೆಗಳಿಗೆ ಈಗಾಗಲೇ ಕಳುಹಿಸಲಾದ ಪುಸ್ತಕಗಳನ್ನು ತಕ್ಷಣವೇ ವಶಪಡಿಸಿಕೊಳ್ಳುವ ಜವಾಬ್ದಾರಿಯನ್ನು ಎನ್‌ಸಿಇಆರ್‌ಟಿ ನಿರ್ದೇಶಕರಿಗೆ ವಹಿಸಲಾಗಿದ್ದು, ಈ ಬಗ್ಗೆ ನ್ಯಾಯಾಲಯಕ್ಕೆ ಅನುಸರಣಾ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ವಿವಾದಾತ್ಮಕ ವಿಷಯವಿರುವ ಪಠ್ಯಪುಸ್ತಕದ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಬೋಧನೆ ಅಥವಾ ಸೂಚನೆಗಳನ್ನು ನೀಡಬಾರದು ಎಂದು ನ್ಯಾಯಾಲಯವು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಈಗಾಗಲೇ ಈ ಪುಸ್ತಕದ ಪ್ರತಿಗಳನ್ನು ಹೊಂದಿರುವ ಶಾಲೆಗಳು ಅಥವಾ ಶಿಕ್ಷಕರು, ಅದರಲ್ಲಿನ ಮುದ್ರಿತ ಅಥವಾ ಡಿಜಿಟಲ್ ಮಾಹಿತಿಯನ್ನು ಬಳಸಿ ಪಾಠ ಮಾಡುವಂತಿಲ್ಲ ಎಂದು ಸೂಚಿಸಿದೆ. ಎಲ್ಲಾ ರಾಜ್ಯಗಳ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ನ್ಯಾಯಾಲಯ ನೀಡಿದ ನಿರ್ದೇಶನಗಳನ್ನು ಪಾಲಿಸಬೇಕು ಮತ್ತು ಎರಡು ವಾರಗಳಲ್ಲಿ ಅನುಸರಣಾ ವರದಿಯನ್ನು ಸಲ್ಲಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಪಠ್ಯ ಸಿದ್ದಪಡಿಸಿದವರ ಹೆಸರು ನೀಡಲು ಎನ್‌ಸಿಇಆರ್‌ಟಿಗೆ ಸೂಚನೆ

ವಿವಾದಾತ್ಮಕ ಪಠ್ಯವನ್ನು ಸಿದ್ದಪಡಿಸಿದ ವ್ಯಕ್ತಿಗಳ ಹೆಸರು ನೀಡುವಂತೆ ಎನ್‌ಸಿಇಆರ್‌ಟಿ ನಿರ್ದೇಶಕರಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಕೇವಲ ಹೆಸರುಗಳನ್ನು ಮಾತ್ರವಲ್ಲದೆ, ಈ ಅಧ್ಯಾಯವನ್ನು ಸಿದ್ಧಪಡಿಸಿದ ತಂಡದ ಸದಸ್ಯರ ಅರ್ಹತೆ ಮತ್ತು ಹಿನ್ನೆಲೆಯನ್ನು ಒದಗಿಸುವಂತೆಯೂ ಕೋರ್ಟ್ ಸೂಚಿಸಿದೆ. ಅಷ್ಟೇ ಅಲ್ಲದೆ, ಈ ಅಧ್ಯಾಯದ ಬಗ್ಗೆ ಚರ್ಚಿಸಿ ಅದನ್ನು ಅಂತಿಮಗೊಳಿಸಿದ ಸಭೆಗಳ ಮೂಲ ನಡಾವಳಿಗಳನ್ನು ಮುಂದಿನ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಂಚೋಲಿ ಅವರಿದ್ದ ಪೀಠವು ಪುಸ್ತಕವನ್ನು ಪುಸ್ತಕದ ಕುರಿತು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡ ಪ್ರಕರಣದಲ್ಲಿ ಈ ಆದೇಶ ನೀಡಿದೆ.

ಎನ್‌ಸಿಇಆರ್‌ಟಿ ನಿರ್ದೇಶಕರ ಉತ್ತರ ತಿರಸ್ಕಾರಾರ್ಹ; ನ್ಯಾಯಾಂಗವನ್ನು ದುರ್ಬಲಗೊಳಿಸುವ ಉದ್ದೇಶಪೂರ್ವಕ ಪ್ರಯತ್ನ

ಈ ಪಠ್ಯಪುಸ್ತಕದ ಅಧ್ಯಾಯದಲ್ಲಿ ನ್ಯಾಯಾಧೀಶರ ವಿರುದ್ಧ ಬಂದಿರುವ ದೂರುಗಳ ಸಂಖ್ಯೆಯನ್ನು ಉಲ್ಲೇಖಿಸಲಾಗಿದೆ. ಆದರೆ, ಆ ದೂರುಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ತಪ್ಪು ಅಭಿಪ್ರಾಯ ಮೂಡುವಂತೆ ಇದನ್ನು ಪ್ರಸ್ತುತಪಡಿಸಲಾಗಿದೆ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

ಅಲ್ಲದೆ, ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ನೀಡಿದ್ದ ಹೇಳಿಕೆಗಳನ್ನು ಪಠ್ಯದಲ್ಲಿ ತಪ್ಪಾಗಿ ಬಳಸಿಕೊಳ್ಳಲಾಗಿದೆ. ಸ್ವತಃ ಮುಖ್ಯ ನ್ಯಾಯಮೂರ್ತಿಗಳೇ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಇರುವುದನ್ನು ಒಪ್ಪಿಕೊಂಡಿದ್ದಾರೆ ಎಂಬಂತೆ ಬಿಂಬಿಸಲು ಅವರ ಮಾತುಗಳನ್ನು ಸಂದರ್ಭಕ್ಕೆ ಹೊರತಾಗಿ (out of context) ಬಳಸಲಾಗಿದೆ ಎಂದು ನ್ಯಾಯಪೀಠವು ಆಕ್ಷೇಪ ವ್ಯಕ್ತಪಡಿಸಿದೆ.

ಪಠ್ಯಪುಸ್ತಕದ ವಿವಾದಾತ್ಮಕ ವಿಷಯವನ್ನು ಸಮರ್ಥಿಸಿಕೊಳ್ಳುತ್ತಾ ಸುಪ್ರೀಂ ಕೋರ್ಟ್‌ನ ಸೆಕ್ರೆಟರಿ ಜನರಲ್‌ಗೆ ಪತ್ರ ಬರೆದಿದ್ದ ಎನ್‌ಸಿಇಆರ್‌ಟಿ ನಿರ್ದೇಶಕರ ಕ್ರಮಕ್ಕೆ ನ್ಯಾಯಪೀಠ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ನಿರ್ದೇಶಕರು ನೀಡಿದ ಈ ಉತ್ತರವು “ನ್ಯಾಯಾಂಗ ನಿಂದನೆಯಿಂದ ಕೂಡಿದೆ ಮತ್ತು ಬೇಜವಾಬ್ದಾರಿತನದ್ದು” ಎಂದು ನ್ಯಾಯಾಲಯವು ಬಣ್ಣಿಸಿದೆ. ನ್ಯಾಯಾಲಯದ ಆದೇಶವನ್ನು ಗೌರವಿಸುವ ಬದಲು, ತಪ್ಪನ್ನು ಸಮರ್ಥಿಸಲು ಪ್ರಯತ್ನಿಸಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಈ ಪಠ್ಯದ ಪ್ರಕಟಣೆಯು ಕೇವಲ ಆಕಸ್ಮಿಕವಲ್ಲ, ಬದಲಿಗೆ “ನ್ಯಾಯಾಂಗದ ಸಾಂಸ್ಥಿಕ ಅಧಿಕಾರವನ್ನು ಕುಂದಿಸಲು ಮತ್ತು ವ್ಯವಸ್ಥೆಯ ಘನತೆಯನ್ನು ಕೆಡಿಸಲು ಮಾಡಿದ ಲೆಕ್ಕಾಚಾರದ ನಡೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಇಂತಹ ವಿಷಯಗಳನ್ನು ಪರಿಶೀಲಿಸದೆ ಪ್ರಕಟಿಸಲು ಬಿಟ್ಟರೆ, ಸಾರ್ವಜನಿಕರಲ್ಲಿ ನ್ಯಾಯಾಂಗದ ಮೇಲಿರುವ ಗೌರವ ಕಡಿಮೆಯಾಗುತ್ತದೆ. ವಿಶೇಷವಾಗಿ, ವಿಷಯಗಳನ್ನು ಬೇಗನೆ ಗ್ರಹಿಸುವ ಎಳೆಯ ಮನಸ್ಸುಗಳಲ್ಲಿ ನ್ಯಾಯಾಂಗದ ಬಗ್ಗೆ ತಪ್ಪು ಕಲ್ಪನೆ ಮೂಡಿಸಿ, ಸಾಂಸ್ಥಿಕ ಘನತೆಯನ್ನು ಕುಸಿಯುವಂತೆ ಮಾಡುತ್ತದೆ ಎಂದು ಪೀಠವು ಆತಂಕ ವ್ಯಕ್ತಪಡಿಸಿದೆ.

ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ನ್ಯಾಯಾಂಗವು ಕೈಗೊಂಡಿರುವ ಉದಾತ್ತ ಕ್ರಮಗಳು ಮತ್ತು ಅದರ ಕೊಡುಗೆಗಳ ಬಗ್ಗೆ ಪಠ್ಯದಲ್ಲಿ ಯಾವುದೇ ಉಲ್ಲೇಖವಿಲ್ಲದಿರುವುದನ್ನು ಕೋರ್ಟ್ ಪ್ರಶ್ನಿಸಿದೆ. ಭ್ರಷ್ಟಾಚಾರ ಮತ್ತು ಸಾರ್ವಜನಿಕ ಹಣದ ದುರುಪಯೋಗಕ್ಕಾಗಿ ಈ ನ್ಯಾಯಾಲಯವು ಅನೇಕ ಉನ್ನತ ಅಧಿಕಾರಿಗಳನ್ನು ಶಿಕ್ಷಿಸಿರುವಾಗ, ಆ ಬಗ್ಗೆ ಮೌನ ವಹಿಸಿರುವುದು ಅಕ್ಷಮ್ಯ ಎಂದು ಪೀಠ ಹೇಳಿದೆ.

ಪುಸ್ತಕದಲ್ಲಿ ಬಳಸಿರುವ ಪದಪ್ರಯೋಗಗಳು ಕೇವಲ ಅಚಾತುರ್ಯ ಅಥವಾ ಅಚಾನಕ್ ತಪ್ಪು ಆಗಿರಲಿಕ್ಕಿಲ್ಲ ಎಂದು ಕೋರ್ಟ್ ಶಂಕಿಸಿದೆ. ಆದಾಗ್ಯೂ, ನ್ಯಾಯಾಂಗ ಸೇರಿದಂತೆ ಸಾರ್ವಜನಿಕ ಸಂಸ್ಥೆಗಳ ಮೇಲಿನ ನ್ಯಾಯಸಮ್ಮತ ಟೀಕೆಗಳನ್ನು ಹತ್ತಿಕ್ಕಲು ನಾವು ಈ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ.

Courtesy : livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...