Homeಮುಖಪುಟ'ಓರ್ವ ಮನುಷ್ಯ ಮತ್ತೊಬ್ಬರನ್ನು ಬಂಡಿಯಲ್ಲಿ ಎಳೆಯುವ ಪದ್ಧತಿ ಅಮಾನವೀಯ': ಸುಪ್ರೀಂ ಕೋರ್ಟ್‌

‘ಓರ್ವ ಮನುಷ್ಯ ಮತ್ತೊಬ್ಬರನ್ನು ಬಂಡಿಯಲ್ಲಿ ಎಳೆಯುವ ಪದ್ಧತಿ ಅಮಾನವೀಯ’: ಸುಪ್ರೀಂ ಕೋರ್ಟ್‌

ಇದು ವ್ಯಕ್ತಿಗಳ ಘನತೆಯ ಹಕ್ಕಿನ ಉಲ್ಲಂಘನೆ ಎಂದ ಕೋರ್ಟ್, ಮಥೆರಾನ್‌ನಲ್ಲಿ ಕೈಯಿಂದ ಎಳೆಯುವ ರಿಕ್ಷಾಗಳು ನಿಷೇಧ

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದರೂ, ಕೈಯಿಂದ ಎಳೆಯುವ ಬಂಡಿಗಳು/ರಿಕ್ಷಾಗಳ ಪದ್ಧತಿ ಮುಂದುವರೆದಿರುವುದನ್ನು ಖಂಡಿಸಿದ ಸುಪ್ರೀಂ ಕೋರ್ಟ್, “ಇದು ಅಮಾನವೀಯ, ರದ್ದುಗೊಳಿಸುವ ಅಗತ್ಯವಿದೆ” ಎಂದು ಬುಧವಾರ (ಆ.6) ಅಭಿಪ್ರಾಯಪಟ್ಟಿದೆ.

ಮಹಾರಾಷ್ಟ್ರದ ಮಥೆರಾನ್ ಬೆಟ್ಟದ ಪಟ್ಟಣದಲ್ಲಿ ಪ್ರಾಯೋಗಿಕ ಇ-ರಿಕ್ಷಾ ಯೋಜನೆಯ ಕುರಿತಾದ ಸಮಸ್ಯೆಗಳನ್ನು ಸಿಜೆಐ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಆಲಿಸಿತು.

ಸ್ವಾತಂತ್ರ್ಯ ಬಂದು 78 ವರ್ಷಗಳ ನಂತರವೂ ಕೈಯಿಂದ ಎಳೆಯುವ ಬಂಡಿಗಳ ಪದ್ಧತಿ ಮುಂದುವರೆದಿರುವುದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದ್ದು, ಇದು ವ್ಯಕ್ತಿಗಳ ಘನತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಜೀವನೋಪಾಯಕ್ಕಾಗಿ ಜನರು ಇಂತಹ ಅಮಾನವೀಯ ವಿಧಾನವನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ ಎಂದು ನ್ಯಾಯಾಲಯ ತಿಳಿಸಿದೆ.

ಭಾರತದಂತಹ ಅಭಿವೃದ್ಧಿ ಹೊಂದುತ್ತಿರುವ ದೇಶದಲ್ಲಿ ಮಾನವ ಘನತೆಯ ಮೂಲ ಪರಿಕಲ್ಪನೆಗೆ ವಿರುದ್ಧವಾದ ಇಂತಹ ಪದ್ಧತಿಗೆ ಅವಕಾಶ ನೀಡುವುದು, ಸಾಮಾಜಿಕ ಮತ್ತು ಆರ್ಥಿಕ ನ್ಯಾಯದ ಸಾಂವಿಧಾನಿಕ ಭರವಸೆಗಳನ್ನು ಕುಂದಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಆಝಾದ್ ರಿಕ್ಷಾ ಪುಲ್ಲರ್ಸ್ ಯೂನಿಯನ್ (ನೋಂದಣಿ) ವರ್ಸಸ್ ಪಂಜಾಬ್ ರಾಜ್ಯ ಮತ್ತು ಇತರೆ ಪ್ರಕರಣದ ತೀರ್ಪನ್ನು ಪೀಠವು ಉಲ್ಲೇಖಿಸಿದ್ದು, ಕೈಯಿಂದ ಎಳೆಯುವ ರಿಕ್ಷಾಗೆ ಅನುಮತಿಸುವುದು ಸಾಮಾಜಿಕ ನ್ಯಾಯದ ಆಶಯಕ್ಕೆ ಹೊಂದಾಣಿಕೆಯಾಗುವುದಿಲ್ಲ ಎಂದಿದೆ.

“ಆಝಾದ್ ರಿಕ್ಷಾ ಪುಲ್ಲರ್ಸ್ ಯೂನಿಯನ್ ಪ್ರಕರಣದಲ್ಲಿ ಈ ನ್ಯಾಯಾಲಯವು ಅಭಿಪ್ರಾಯಗಳನ್ನು ತಿಳಿಸಿದ 45 ವರ್ಷಗಳ ನಂತರವೂ, ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಎಳೆಯುವ ಪದ್ಧತಿ ಮಥೆರಾನ್ ಪಟ್ಟಣದಲ್ಲಿ ಇನ್ನೂ ಪ್ರಚಲಿತದಲ್ಲಿದೆ ಎಂಬುದು ನಿಜಕ್ಕೂ ದುರದೃಷ್ಟಕರ” ಎಂದು ನ್ಯಾಯಾಲಯ ಹೇಳಿದೆ.

ಇಂದಿನ ಕಾಲದಲ್ಲೂ ಹಸ್ತಚಾಲಿತ ರಿಕ್ಷಾಗಳಿಗೆ ಅವಕಾಶ ನೀಡುವುದು ಭಾರತದ ಜನರು ತಮಗೆ ತಾವೆ ಅಳವಡಿಸಿಕೊಂಡಿರುವ ಸಾಮಾಜಿಕ ಮತ್ತು ಆರ್ಥಿಕ ನ್ಯಾಯದ ಭರವಸೆಗೆ ದ್ರೋಹ ಬಗೆದಂತೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಸಂವಿಧಾನದ ವಿಧಿ 23ಕ್ಕೆ ವಿಸ್ತೃತ ವ್ಯಾಖ್ಯಾನ ಹೇಳಿದ ಪೀಪಲ್ ಆಫ್ ಇಂಡಿಯಾ ಫಾರ್ ಡೆಮಾಕ್ರಟಿಕ್ ರೈಟ್ಸ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪನ್ನೂ ಕೂಡ ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ. ಈ ಪ್ರಕರಣವು 1982ರ ಏಷ್ಯನ್ ಕ್ರೀಡಾಕೂಟದ ನಿರ್ಮಾಣ ಯೋಜನೆಗಳ ಸಮಯದಲ್ಲಿ ಕಾರ್ಮಿಕ ಹಕ್ಕುಗಳ ಉಲ್ಲಂಘನೆಯ ವಿಷಯಕ್ಕೆ ಸಂಬಂಧಿಸಿದೆ. ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನ ಪಾವತಿಸದಿರುವುದು ಬಲವಂತದ ದುಡಿಮೆಗೆ ಸಮಾನವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಕೈಯಿಂದ ಎಳೆಯುವ ರಿಕ್ಷಾ ಪದ್ದತಿಯನ್ನು ನಿಷೇಧ ಮಾಡಿದರೆ ಜನರು ಜೀವನೋಪಾಯಕ್ಕೆ ಏನು ಮಾಡುವುದು ಎಂಬ ಪ್ರಶ್ನೆಗೂ ಸುಪ್ರೀಂ ಕೋರ್ಟ್ ಉತ್ತರ ಕೊಟ್ಟಿದ್ದು, ಇ-ರಿಕ್ಷಾ ಇದಕ್ಕೆ ಪರ್ಯಾಯ ವ್ಯವಸ್ಥೆಯಾಗಿದ್ದು, ಈ ಸಂಬಂಧ ಯೋಜನೆ ಜಾರಿಗೊಳಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದೆ.

ಮಥೆರಾನ್ ಪಟ್ಟಣದಲ್ಲಿರುವ ಕೈ ರಿಕ್ಷಾ ಎಳೆಯುವವರಿಗೆ ಪುನರ್ವಸತಿ ಕಲ್ಪಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ ಸುಪ್ರೀಂ ಕೋರ್ಟ್, ಗುಜರಾತ್‌ನ ಕೆವಾಡಿಯಾದಲ್ಲಿ ಇರುವಂತೆ ಇ-ರಿಕ್ಷಾ ನೀತಿಯನ್ನು ಅಳವಡಿಸಿಕೊಳ್ಳುಲು ಸೂಚಿಸಿದೆ. ಈ ಯೋಜನೆಯನ್ನು ಕಾರ್ಯಗತಗೊಳಿಸುವಲ್ಲಿ ಹಣದ ಕೊರತೆಯು ಅಡ್ಡಿಯಾಗಬಾರದು ಎಂದು ನ್ಯಾಯಾಲಯ ಎಚ್ಚರಿಸಿದೆ.

ಪರಿಸರದ ಕಾಳಜಿಯಿಂದಾಗಿ ಮಥೆರಾನ್‌ನಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ತುರ್ತು ಸಂದರ್ಭಗಳಲ್ಲಿ ಅಗ್ನಿಶಾಮಕ ವಾಹನ ಮತ್ತು ಆಂಬ್ಯುಲೆನ್ಸ್‌ಗಳು ಮಾತ್ರ ಪಟ್ಟಣಕ್ಕೆ ಪ್ರವೇಶಿಸಬಹುದಾಗಿದೆ.

ಗಮನಾರ್ಹವಾಗಿ, ಫೆಬ್ರವರಿಯಲ್ಲಿ, ಪಾದಚಾರಿ ಬೆಟ್ಟದ ಪಟ್ಟಣವಾದ ಮಥೆರಾನ್‌ನಲ್ಲಿ ಮೂಲ ಕೈಗಾಡಿ ಎಳೆಯುವವರಿಗೆ 20 ಇ-ರಿಕ್ಷಾ ಪರವಾನಗಿಗಳನ್ನು ನೀಡುವ ಪ್ರಕ್ರಿಯೆಯನ್ನು ಮರುಪರಿಶೀಲಿಸುವ ಪ್ರಸ್ತಾವನೆಯನ್ನು ಸಲ್ಲಿಸಲು ನ್ಯಾಯಾಲಯವು ಮಹಾರಾಷ್ಟ್ರ ರಾಜ್ಯಕ್ಕೆ 2 ವಾರಗಳ ಕಾಲಾವಕಾಶ ನೀಡಿತ್ತು.

ನ್ಯಾಯಾಲಯವು ಈ ಕೆಳಗಿನ ನಿರ್ದೇಶನಗಳನ್ನು ಸಹ ನೀಡಿದೆ:

(1) ದಸ್ತೂರಿ ನಾಕಾ (ಬಸ್ ನಿಲ್ದಾಣ) ದಿಂದ ಮಥೆರಾನ್‌ನಲ್ಲಿರುವ ಶಿವಾಜಿ ಪ್ರತಿಮೆಯವರೆಗೆ ರಾಜ್ಯ ಸರ್ಕಾರ ಪೇವರ್ ಬ್ಲಾಕ್‌ಗಳನ್ನು ಹಾಕಬಹುದು.

(2) ಆಂತರಿಕ ರಸ್ತೆ ಮತ್ತು ವ್ಯಾಪಾರ ಮಾರ್ಗಗಳಲ್ಲಿ ಯಾವುದೇ ಪೇವರ್ ಬ್ಲಾಕ್‌ಗಳನ್ನು ಹಾಕಬಾರದು.

(3) ಇಂದಿನಿಂದ (ಆ.6) 6 ತಿಂಗಳ ಅವಧಿಯಲ್ಲಿ ಕೈಯಿಂದ ಎಳೆಯುವ ರಿಕ್ಷಾಗಳ ಪದ್ದತಿಯನ್ನು ಹಂತ ಹಂತವಾಗಿ ನಿಲ್ಲಿಸಬೇಕು.

(4) ಮಹಾರಾಷ್ಟ್ರ ಸರ್ಕಾರ ಗುಜರಾತ್‌ನ ಕೆವಾಡಿಯಾದಲ್ಲಿರುವಂತೆ ಇ-ರಿಕ್ಷಾಗಳನ್ನು ಖರೀದಿಸಿ ನಿಜವಾದ ರಿಕ್ಷಾ ಎಳೆಯುವವರಿಗೆ ಬಾಡಿಗೆ ಆಧಾರದ ಮೇಲೆ ನೀಡುವ ಯೋಜನೆಯಂತೆ ಒಂದು ಯೋಜನೆಯನ್ನು ರೂಪಿಸಬೇಕು.

(5) ನಿಜವಾದ ರಿಕ್ಷಾ ಚಾಲಕರನ್ನು ಗುರುತಿಸಲು ಪರಿಸರ ಸೂಕ್ಷ್ಮ ವಲಯದ ಅಡಿಯಲ್ಲಿ ರಚಿಸಲಾದ ಮಥೆರಾನ್ ಕಲೆಕ್ಟರ್ ಅಧ್ಯಕ್ಷತೆಯ ಮಥೆರಾನ್ ಮೇಲ್ವಿಚಾರಣಾ ಸಮಿತಿ ಮೂಲಭೂತ ವಾಸ್ತವಗಳನ್ನು ಪರಿಗಣಿಸಿದ ನಂತರ ಅಗತ್ಯವಿರುವ ಇ-ರಿಕ್ಷಾಗಳ ಸಂಖ್ಯೆಯನ್ನು ನಿರ್ಧರಿಸಬೇಕು. 

(6) ಉಳಿದ ಇ-ರಿಕ್ಷಾಗಳನ್ನು ಬುಡಕಟ್ಟು ಮಹಿಳೆಯರು ಮತ್ತು ಮಥೆರಾನ್‌ನ ಇತರ ವ್ಯಕ್ತಿಗಳಿಗೆ ಹಂಚಿಕೆ ಮಾಡುವುದರಿಂದ ಅವರ ಜೀವನೋಪಾಯ ಸ್ಥಿರವಾಗಿರುತ್ತದೆ. 

(7) ಈಗಾಗಲೇ ಹಾಕಿರುವ ಕಾಂಕ್ರೀಟ್ ಬ್ಲಾಕ್‌ಗಳನ್ನು ಪೇವರ್ ಬ್ಲಾಕ್‌ಗಳಿಗೆ ಬದಲಾಯಿಸಬೇಕು. 

ಬಿಹಾರ| ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರು ಕೈಬಿಟ್ಟ ಪ್ರಕರಣ: ವಿವರ ಬಹಿರಂಗಕ್ಕೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...