Homeಮುಖಪುಟಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ...

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

2002ರ ಗುಜರಾತ್ ಗಲಭೆ ವೇಳೆ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಸದಸ್ಯರ ಹತ್ಯೆ ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರಕಾರದ ಆದೇಶವನ್ನು ಸುಪ್ರೀಂಕೋರ್ಟ್ ಇಂದು ರದ್ದುಗೊಳಿಸಿದೆ.

ಗುಜರಾತ್ ಸರ್ಕಾರ ಅಪರಾಧಿಗಳನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿಗಳ ಶಿಕ್ಷೆ ಕಡಿತಗೊಳಿಸಿ ಅವರನ್ನು ಬಿಡುಗಡೆಗೊಳಿಸುವ ಹಕ್ಕು ಗುಜರಾತ್‌ ಸರ್ಕಾರಕ್ಕಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಇದರಿಂದಾಗಿ ಎಲ್ಲ 11 ಅಪರಾಧಿಗಳು ಮತ್ತೆ ಜೈಲಿಗೆ ಹೋಗಬೇಕಾಗಿದೆ.

2022ರ ಸ್ವಾತಂತ್ರ್ಯ ದಿನದಂದು ಗುಜರಾತ್ ಸರ್ಕಾರವು ಅಪರಾಧಿಗಳನ್ನು ಬಿಡುಗಡೆ ಮಾಡಿದೆ. ಅಪರಾಧಿಗಳಾದ ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧೇಶಾಮ್‌ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯ್ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್ ಚಂದನಾ ಅವರನ್ನು ಬಿಡುಗಡೆ ಮಾಡಲಾಗಿತ್ತು. ಇದು ಪ್ರತಿಪಕ್ಷಗಳು, ಮತ್ತು ನಾಗರಿಕ ಸಮಾಜದಿಂದ ಖಂಡನೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು.

ಜೈಲಿನಿಂದ ಬಿಡುಗಡೆಯಾದ ಅಪರಾಧಿಗಳಿಗೆ ಅದ್ದೂರಿ ಸ್ವಾಗತ ಮಾಡಲಾಗಿತ್ತು. ಆ ಬಳಿಕ ಅಪರಾಧಿಗಳು ಬಿಜೆಪಿ ಸಂಸದ ಮತ್ತು ಶಾಸಕರೊಂದಿಗೆ ವೇದಿಕೆ ಹಂಚಿಕೊಂಡಿರುವುದು ಕೂಡ ಕಂಡುಬಂದಿದೆ. ಅಪರಾಧಿಗಳಲ್ಲಿ ಒಬ್ಬರಾದ ರಾಧೇಶ್ಯಾಮ್ ಶಾ ಅವರು ವಕೀಲಿ ವೃತ್ತಿಯನ್ನು ಪ್ರಾರಂಭಿಸಿದ್ದರು. ಇದನ್ನು ಸುಪ್ರೀಂಕೋರ್ಟ್‌ನ ಗಮನಕ್ಕೆ ತರಲಾಗಿತ್ತು.

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬದ ಸದಸ್ಯರ ಹತ್ಯೆ ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್‌ ಬಾನು, ತೃಣಮೂಲ ಕಾಂಗ್ರೆಸ್‌ ಪಕ್ಷದ ಮಹುವಾ ಮೊಯಿತ್ರಾ, ಸಿಪಿಐ(ಎಂ) ಪಾಲಿಟ್‌ ಬ್ಯುರೋ ಸದಸ್ಯೆ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್‌ ಹಾಗೂ ಲಕ್ನೋ ವಿವಿಯ ಮಾಜಿ ಉಪಕುಲಪತಿ ರೂಪ್‌ ರೇಖಾ ವರ್ಮಾ ಸಹಿತ ಹಲವರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸುಪ್ರೀಂ ಕೋರ್ಟ್‌ 11 ದಿನಗಳ ಕಾಲ ಅರ್ಜಿ ವಿಚಾರಣೆ ನಡೆಸಿದ್ದು, ಅಕ್ಟೋಬರ್‌ನಲ್ಲಿ ತೀರ್ಪು ಕಾಯ್ದಿರಿಸಿತ್ತು.

1992ರ ಶಿಕ್ಷೆ ಕಡಿತ ನೀತಿಯಾನುಸಾರ ಗುಜರಾತ್‌ ಸರ್ಕಾರ ಅಪರಾಧಿಗಳನ್ನು ಬಿಡುಗಡೆಗೊಳಿಸಿತ್ತು. ಆದರೆ ಈ ಕಾನೂನಿನ ಸ್ಥಾನದಲ್ಲಿ 2014ರಲ್ಲಿ ಜಾರಿಗೊಳಿಸಲಾದ ಕಾನೂನಿನ ಪ್ರಕಾರ ದೊಡ್ಡ ಶಿಕ್ಷೆ ಎದುರಿಸುವ ಪ್ರಕರಣಗಳಲ್ಲಿ ಶಿಕ್ಷೆ ಕಡಿತಗೊಳಿಸುವುದನ್ನು ನಿಷೇಧಿಸಲಾಗಿದೆ.

1992ರ ನೀತಿಯ ಪ್ರಕಾರ ಕ್ಷಮಾಧಾನ ನಿರ್ಧರಿಸಲು ಗುಜರಾತ್ ಸರ್ಕಾರಕ್ಕೆ ನಿರ್ದೇಶಿಸಿದ ಮೇ 13, 2022ರ ಸುಪ್ರೀಂಕೋರ್ಟ್‌ ಆದೇಶವನ್ನು ಸತ್ಯಗಳನ್ನು ಮರೆಮಾಚುವ ಮೂಲಕ ಪಡೆಯಲಾಗಿದೆ ಎಂದು ಪೀಠವು ಹೇಳಿದೆ. ಬಿಲ್ಕಿಸ್ ಬಾನು ಪ್ರಕರಣವನ್ನು ಮುಕ್ತ ಮತ್ತು ನ್ಯಾಯಯುತ ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಯಿತು. ಆದ್ದರಿಂದ ಮಹಾರಾಷ್ಟ್ರ ಸರ್ಕಾರ ಮಾತ್ರವೇ ಹೊರತು ಗುಜರಾತ್ ಸರ್ಕಾರವು ಕ್ಷಮಾಧಾನ ನೀಡಲು ಅರ್ಹತೆ ಹೊಂದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. 2004ರಲ್ಲಿ ಪ್ರಕರಣದ ವಿಚಾರಣೆಯನ್ನು ಗುಜರಾತ್‌ನಿಂದ ಮುಂಬೈಗೆ ವರ್ಗಾಯಿಸಲಾಗಿತ್ತು.

ಜೈಲಿನಲ್ಲಿ 14 ವರ್ಷಗಳನ್ನು ಪೂರ್ಣಗೊಳಿಸಿದ ಕಾರಣ ಮತ್ತು ವಯಸ್ಸು, ಅಪರಾಧದ ಸ್ವರೂಪ, ಜೈಲಿನಲ್ಲಿನ ನಡವಳಿಕೆ ಮುಂತಾದ ಅಂಶಗಳಿಂದಾಗಿ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಗುಜರಾತ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜ್ ಕುಮಾರ್ ಹೇಳಿದ್ದರು.

ಇದನ್ನು ಓದಿ; ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...