Homeಮುಖಪುಟನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಆದೇಶಿಸಿದ ರಾಷ್ಟ್ರಪತಿ

ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಆದೇಶಿಸಿದ ರಾಷ್ಟ್ರಪತಿ

- Advertisement -
- Advertisement -

ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಹೆಸರಿಸಿದ್ದರು. ಸುಪ್ರೀಂಕೋರ್ಟ್‌ನ ಮುಂದಿನ

ನ್ಯಾಯಮೂರ್ತಿ ಚಂದ್ರಚೂಡ್ ಅವರು ನಿವೃತ್ತರಾದ ಒಂದು ದಿನದ ನಂತರ, ನವೆಂಬರ್ 11ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಗುರುವಾರ ಸಂಜೆ X ನಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು, ಭಾರತದ ಗೌರವಾನ್ವಿತ ಮುಖ್ಯ ನ್ಯಾಯಾಧೀಶರೊಂದಿಗೆ ಸಮಾಲೋಚಿಸಿದ ನಂತರ, ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಜಸ್ಟೀಸ್ ಸಂಜೀವ್ ಖನ್ನಾ ಅವರನ್ನು ನವೆಂಬರ್ 11, 2024 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ” ಎಂದು ಅವರ ಪೋಸ್ಟ್ ಹೇಳಿದೆ.

ನ್ಯಾಯಮೂರ್ತಿ ಖನ್ನಾ ಅವರನ್ನು 2019 ರಲ್ಲಿ ದೆಹಲಿ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ಗೆ ನೇಮಿಸಲಾಗಿತ್ತು. ಅವರು 2025ರ ಮೇ 13ರಂದು ನಿವೃತ್ತರಾಗಲಿದ್ದಾರೆ. ಅವರು ಕಳೆದ ವರ್ಷ ಭಾರತದ ಸಂವಿಧಾನದ 370 ನೇ ವಿಧಿಯ ರದ್ದತಿಯನ್ನು ಎತ್ತಿಹಿಡಿದ ಸಂವಿಧಾನ ಪೀಠದ ಭಾಗವಾಗಿದ್ದರು. ಸುಪ್ರೀಂಕೋರ್ಟ್‌ನ ಮುಂದಿನ

ಸುಪ್ರೀಂ ಕೋರ್ಟ್‌ನ ಭಾಗವಾಗಿ, ನ್ಯಾಯಮೂರ್ತಿ ಖನ್ನಾ ಅವರು ಹಲವಾರು ಪ್ರಮುಖ ತೀರ್ಪುಗಳನ್ನು ನೀಡಿದ್ದಾರೆ. ಅವರು ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆಗಳನ್ನು ಅನುಮತಿಸುವ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿದ ಸಂವಿಧಾನ ಪೀಠದ ಭಾಗವಾಗಿದ್ದರು.

ಜುಲೈನಲ್ಲಿ ಅವರ ನೇತೃತ್ವದ ಪೀಠವು ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.

ನ್ಯಾಯಮೂರ್ತಿ ಸಂಜೀವ್ ಖನ್ನಾ ವೃತ್ತಿ ಜೀವನದ ಪರಿಚಯ

ಮೇ 1960ರಲ್ಲಿ ಜನಿಸಿದ ಜಸ್ಟಿಸ್ ಖನ್ನಾ ಅವರು, 1983ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ಗೆ ವಕೀಲರಾಗಿ ಸೇರಿಕೊಂಡರು. ದೆಹಲಿಯ ತೀಸ್ ಹಜಾರಿ ಸಂಕೀರ್ಣದಲ್ಲಿ ಜಿಲ್ಲಾ ನ್ಯಾಯಾಲಯಗಳ ಮೂಲಕ ವೃತ್ತಿ ಜೀವನ ಪ್ರಾರಂಭಿಸಿದ ಅವರು, ದೆಹಲಿ ಹೈಕೋರ್ಟ್‌ವರೆಗೂ ಕೆಲಸ ಮಾಡಿದ್ದಾರೆ.

ಖನ್ನಾ ಅವರು ಸಾಂವಿಧಾನಿಕ ಕಾನೂನು, ನೇರ ತೆರಿಗೆ, ಮಧ್ಯಸ್ಥಿಕೆ, ವಾಣಿಜ್ಯ ಕಾನೂನು, ಕಂಪನಿ ಕಾನೂನು, ಭೂ ಕಾನೂನು, ಪರಿಸರ ಕಾನೂನು ಮತ್ತು ವೈದ್ಯಕೀಯ ನಿರ್ಲಕ್ಷ್ಯವನ್ನು ಒಳಗೊಂಡ ವಿವಿಧ ನ್ಯಾಯಮಂಡಳಿಗಳ ಭಾಗವಾಗಿದ್ದರು. ಹೆಚ್ಚುವರಿಯಾಗಿ, ಅವರು ದೀರ್ಘಾವಧಿಯವರೆಗೆ ಆದಾಯ ತೆರಿಗೆ ಇಲಾಖೆಯ ಹಿರಿಯ ಸ್ಥಾಯಿ ವಕೀಲರ ಹುದ್ದೆಯನ್ನು ಹೊಂದಿದ್ದರು.

2004 ರಲ್ಲಿ, ನ್ಯಾಯಮೂರ್ತಿ ಖನ್ನಾ ಅವರನ್ನು ದೆಹಲಿಯ ಸ್ಥಾಯಿ ವಕೀಲರಾಗಿ (ಸಿವಿಲ್) ನೇಮಿಸಲಾಯಿತು. ಅಲ್ಲಿ ಅವರ ಅಧಿಕಾರಾವಧಿಯಲ್ಲಿ, ಅವರು ದೆಹಲಿ ಹೈಕೋರ್ಟ್‌ನಲ್ಲಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಮತ್ತು ಅಮಿಕಸ್ ಕ್ಯೂರಿಯಾಗಿ ಹಲವಾರು ಕ್ರಿಮಿನಲ್ ಮೊಕದ್ದಮೆಗಳನ್ನು ವಿಚಾರಣೆ ನಡೆಸಿದ್ದಾರೆ.

2005 ರಲ್ಲಿ, ಖನ್ನಾ ಅವರು ದೆಹಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು ಮತ್ತು 2006 ರಲ್ಲಿ ಖಾಯಂ ನ್ಯಾಯಾಧೀಶರಾದರು. ಹೈಕೋರ್ಟ್ ನ್ಯಾಯಾಧೀಶರಾಗಿದ್ದ ಅವಧಿಯಲ್ಲಿ ಖನ್ನಾ ಅವರು ದೆಹಲಿ ನ್ಯಾಯಾಂಗ ಅಕಾಡೆಮಿ, ದೆಹಲಿ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ ಮತ್ತು ಜಿಲ್ಲಾ ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರಗಳ ಅಧ್ಯಕ್ಷ/ಪ್ರಭಾರ ನ್ಯಾಯಾಧೀಶರೂ ಆಗಿದ್ದರು.

ಜನವರಿ 18,2019 ರಂದು, ನ್ಯಾಯಮೂರ್ತಿ ಖನ್ನಾ ಅವರನ್ನು ಸುಪ್ರೀಂ ಕೋರ್ಟ್‌ಗೆ ನೇಮಿಸಲಾಯಿತು. ಅಲ್ಲಿ ಅವರು ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್‌ನ ಅಧಿಕಾರಾವಧಿಯಲ್ಲಿ, ಅವರು ಜೂನ್ 2023 ರಿಂದ ಡಿಸೆಂಬರ್ 2023 ರವರೆಗೆ ಸುಪ್ರೀಂ ಕೋರ್ಟ್ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಹುದ್ದೆಯನ್ನು ನಿಭಾಯಿಸಿದ್ದರು.

ಪ್ರಸ್ತುತ, ಅವರು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿದ್ದಾರೆ ಮತ್ತು ಭೋಪಾಲ್‌ನ ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯ ಆಡಳಿತ ಸಲಹೆಗಾರರ ​​​​ಸದಸ್ಯರಾಗಿದ್ದಾರೆ.

ನ್ಯಾಯಮೂರ್ತಿ ಖನ್ನಾ ಅವರು ಮೇ 2025ರಲ್ಲಿ ನಿವೃತ್ತರಾಗಲಿದ್ದಾರೆ. ನವೆಂಬರ್‌ನಲ್ಲಿ ಸಿಜೆಐ ಹುದ್ದೆಗೇರಲಿರುವ ಅವರು, ಆರು ತಿಂಗಳ ಕಾಲ ಆ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ.

ಇದನ್ನೂ ಓದಿ: ಸಲಿಂಗ ವಿವಾಹ ಮರುಪರಿಶೀಲನಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸಂಜೀವ್‌ ಖನ್ನಾ

ಸಲಿಂಗ ವಿವಾಹ ಮರುಪರಿಶೀಲನಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸಂಜೀವ್‌ ಖನ್ನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...