Homeಮುಖಪುಟಮಹಿಳೆಯರ ಅಕ್ರಮ ಬಂಧನ ಆರೋಪ : ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ

ಮಹಿಳೆಯರ ಅಕ್ರಮ ಬಂಧನ ಆರೋಪ : ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ

- Advertisement -
- Advertisement -

ಜಗ್ಗಿ ವಾಸುದೇವ್ (ಸದ್ಗುರು) ನಡೆಸುತ್ತಿರುವ ಕೊಯಮತ್ತೂರಿನ ಇಶಾ ಫೌಂಡೇಶನ್‌ನಲ್ಲಿ ತನ್ನ ಇಬ್ಬರು ಪುತ್ರಿಯರನ್ನು ಬಂಧಿಯಾಗಿಸಿ, ಬ್ರೈನ್‌ವಾಶ್ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಅ.18) ವಜಾಗೊಳಿಸಿದೆ ಅಥವಾ ಪ್ರಕರಣವನ್ನೇ ಮುಕ್ತಾಯಗೊಳಿಸಿದೆ.

ಇಬ್ಬರು ಮಹಿಳೆಯರು ವಯಸ್ಕರಾಗಿದ್ದಾರೆ. ಹೇಬಿಯಸ್ ಕಾರ್ಪಸ್‌ನ ಉದ್ದೇಶ ಈಡೇರಿದೆ. ಆದ್ದರಿಂದ ಈ ವಿಚಾರದಲ್ಲಿ ಹೆಚ್ಚಿನ ತನಿಖೆಯ ಅಗತ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಆದೇಶದಲ್ಲಿ ತಿಳಿಸಿದೆ.

ಹೇಬಿಯಸ್ ಕಾರ್ಪಸ್‌ ಅರ್ಜಿಯಲ್ಲಿ ಮಾಡಿರುವ ಇತರ ಆರೋಪಗಳ ಕುರಿತು ತನಿಖೆ ನಡೆಸಲು ಮದ್ರಾಸ್ ಹೈಕೋರ್ಟ್ ನೀಡಿರುವ ನಿರ್ದೇಶನವನ್ನೂ ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದರಿಂದ ಜಗ್ಗಿವಾಸುದೇವ್‌ಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

ಮದ್ರಾಸ್ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ವರ್ಗಾಯಿಸಿಕೊಂಡಿತ್ತು. ಏಕೆಂದರೆ, ಮದ್ರಾಸ್ ಹೈಕೋರ್ಟ್‌ ಆದೇಶದ ವಿರುದ್ದ ಇಶಾ ಫೌಂಡೇಶನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಪ್ರಕರಣದ ವಿವರ : ತಮ್ಮ ಇಬ್ಬರು ಪುತ್ರಿಯರಾದ ಗೀತಾ ಕಾಮರಾಜ್ ಅಲಿಯಾಸ್ ಮಾ ಮತಿ (42) ಮತ್ತು ಲತಾ ಕಾಮರಾಜ್ ಅಲಿಯಾಸ್ ಮಾ ಮಾಯು(39) ಅವರು ಇಶಾ ಸಂಸ್ಥೆಯೊಳಗೆ ಬಂಧಿಯಾಗಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಎಸ್ ಕಾಮರಾಜ್ ಎಂಬವರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.

ಇಶಾ ಯೋಗ ಕೇಂದ್ರದಲ್ಲಿನ ಬೋಧನೆಗಳಿಂದ ಪ್ರಭಾವಿತರಾದ ನನ್ನ ಹೆಣ್ಣುಮಕ್ಕಳು ಬ್ರೈನ್ ವಾಶ್ ಆಗಿದ್ದು, ಸನ್ಯಾಸಿ ಮಾರ್ಗವನ್ನು ಅನುಸರಿಸಿದ್ದಾರೆ. ಅವರ ಹೆಸರನ್ನು ಬದಲಾಯಿಸಲಾಗಿದೆ. ಈಗ ಪೋಷಕರನ್ನೂ ಭೇಟಿ ಮಾಡಲು ಅವರು ನಿರಾಕರಿಸುತ್ತಿದ್ದಾರೆ ಎಂದು ಅರ್ಜಿದಾರ ಕಾಮರಾಜ್ ಆರೋಪಿಸಿದ್ದರು.

2016ರಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕಳೆದ ಸೆಪ್ಟೆಂಬರ್ 30ರಂದು ನಡೆಸಿದ್ದ ಹೈಕೋರ್ಟ್,ಇಶಾ ಫೌಂಡೇಶನ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳ ವಿವರಗಳನ್ನು ನೀಡುವಂತೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರಿಗೆ ನ್ಯಾಯಾಲಯ ಆದೇಶಿಸಿತ್ತು.

ಕಾಮರಾಜ್ ಅವರ ಇಬ್ಬರು ಪುತ್ರಿಯರು ಹೈಕೋರ್ಟ್ ಮುಂದೆ ಹಾಜರಾಗಿ, ನಮ್ಮನ್ನು ಬಂಧಿಸಿಟ್ಟಿಲ್ಲ, ಸ್ವಇಚ್ಚೆಯಿಂದ ಯೋಗ ಕೇಂದ್ರದಲ್ಲಿ ಇದ್ದೇವೆ ಎಂದು ಹೇಳಿದ್ದರು. ಆದರೂ, ಸತ್ಯ ತಿಳಿಯಲು ಈ ವಿಷಯದಲ್ಲಿ ಕೆಲ ಪರಿಶೀಲನೆಯ, ಚರ್ಚೆಯ ಅಗತ್ಯವಿದೆ ಎಂದಿದ್ದ ಹೈಕೋರ್ಟ್, ಇಶಾ ಯೋಗ ಕೇಂದ್ರದ ವಿರುದ್ಧ ದಾಖಲಾಗಿರುವ ಪ್ರಕರಣಗಳ ವಿವರಗಳನ್ನು ಸಲ್ಲಿಸುವಂತೆ ಅರ್ಜಿದಾರರಿಗೆ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗೆ ಸೂಚಿಸಿತ್ತು.

ಈ ಆದೇಶದ ಮರುದಿನವೇ ಇಶಾ ಯೋಗ ಕೇಂದ್ರಕ್ಕೆ ಪೊಲೀಸರು ಮತ್ತು ಅಧಿಕಾರಿಳು ತೆರಳಿ ಪರಿಶೀಲನೆ ನಡೆಸಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಇಶಾ ಫೌಂಡೇಶನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಇದನ್ನೂ ಓದಿ : ಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...