ಮಹಿಳೆಯರ ಅಕ್ರಮ ಬಂಧನ ಆರೋಪ : ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ

ಜಗ್ಗಿ ವಾಸುದೇವ್ (ಸದ್ಗುರು) ನಡೆಸುತ್ತಿರುವ ಕೊಯಮತ್ತೂರಿನ ಇಶಾ ಫೌಂಡೇಶನ್‌ನಲ್ಲಿ ತನ್ನ ಇಬ್ಬರು ಪುತ್ರಿಯರನ್ನು ಬಂಧಿಯಾಗಿಸಿ, ಬ್ರೈನ್‌ವಾಶ್ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಅ.18) ವಜಾಗೊಳಿಸಿದೆ ಅಥವಾ ಪ್ರಕರಣವನ್ನೇ ಮುಕ್ತಾಯಗೊಳಿಸಿದೆ. ಇಬ್ಬರು ಮಹಿಳೆಯರು ವಯಸ್ಕರಾಗಿದ್ದಾರೆ. ಹೇಬಿಯಸ್ ಕಾರ್ಪಸ್‌ನ ಉದ್ದೇಶ ಈಡೇರಿದೆ. ಆದ್ದರಿಂದ ಈ ವಿಚಾರದಲ್ಲಿ ಹೆಚ್ಚಿನ ತನಿಖೆಯ ಅಗತ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಆದೇಶದಲ್ಲಿ ತಿಳಿಸಿದೆ. … Continue reading ಮಹಿಳೆಯರ ಅಕ್ರಮ ಬಂಧನ ಆರೋಪ : ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ