Homeಮುಖಪುಟಸಲಿಂಗಾಸಕ್ತ ಸೌರಭ್‌ರನ್ನು ನ್ಯಾಯಾಧೀಶರನ್ನಾಗಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬೆಂಬಲ

ಸಲಿಂಗಾಸಕ್ತ ಸೌರಭ್‌ರನ್ನು ನ್ಯಾಯಾಧೀಶರನ್ನಾಗಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬೆಂಬಲ

- Advertisement -
- Advertisement -

ಲೈಂಗಿಕ ಅಲ್ಪಸಂಖ್ಯಾತ ಹೋರಾಟಗಾರ, ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬುಧವಾರ ಬೆಂಬಲ ನೀಡಿದೆ. ಸೌರಭ್ ಕಿರ್ಪಾಲ್ ಅವರು ಸಲಿಂಗಾಸಕ್ತರಾಗಿದ್ದಾರೆ.

ಕಿರ್ಪಾಲ್ ಅವರ ವಿರುದ್ಧದ ಆಕ್ಷೇಪಣೆಗಳನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ನಂತರ, ಇದೀಗ ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ನೇಮಕ ಮಾಡಲು ಕೇಂದ್ರ ಸರ್ಕಾರಕ್ಕೆ ಅವರ ಹೆಸರನ್ನು ಪುನರುಚ್ಚರಿಸಲು ಕೊಲಿಜಿಯಂ ನಿರ್ಧರಿಸಿದೆ.

ಹಿರಿಯ ವಕೀಲರು ಸಾಂವಿಧಾನಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಎಲ್ಲಾ ಅಂಶಗಳಲ್ಲಿ ಅರ್ಹರಾಗಿದ್ದಾರೆ ಎಂದು ಕೊಲಿಜಿಯಂ ಎಂದು ಹೇಳಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಧನಂಜಯ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಕೆಎಂ ಜೋಸೆಫ್ ಅವರನ್ನು ಒಳಗೊಂಡ ಕೊಲಿಜಿಯಂ ಬುಧವಾರ ಮಧ್ಯಾಹ್ನ ಸಭೆ ನಡೆಸಿತು. ಕಿರ್ಪಾಲ್ ಅವರ ಹೆಸರನ್ನು ಪುನಃ ಪ್ರತಿಪಾದಿಸುವುದರ ಜೊತೆಗೆ, ಮದ್ರಾಸ್, ಅಲಹಾಬಾದ್, ಕರ್ನಾಟಕ ಮತ್ತು ಪಂಜಾಬ್‌ನ ಉಚ್ಚ ನ್ಯಾಯಾಲಯಗಳಲ್ಲಿ ನೇಮಕಾತಿಗಾಗಿ ಕೆಲವು ಶಿಫಾರಸುಗಳನ್ನು ಸಹ ತೆಗೆದುಕೊಂಡಿತು. ಹೈಕೋರ್ಟ್ ನ್ಯಾಯಾಧೀಶರಿಗೆ ಕೊಲಿಜಿಯಂ ಸುಮಾರು ಎರಡು ಡಜನ್ ಹೊಸ ಶಿಫಾರಸುಗಳನ್ನು ಮಾಡಿದೆ.

ಇದನ್ನೂ ಓದಿ: ದೆಹಲಿ ಹೈಕೋರ್ಟ್‌ ಜಡ್ಜ್‌‌ ಆಗುವರೇ ಲೈಂಗಿಕ ಅಲ್ಪಸಂಖ್ಯಾತ ಹೋರಾಟಗಾರ ಸೌರಭ್‌ ಕಿರ್ಪಾಲ್?

ಈ ಹಿಂದೆ ಸೌರಭ್ ಅವರು ತಮ್ಮನ್ನು ನ್ಯಾಯಾಧೀಶರನ್ನಾಗಿ ನೇಮಿಸುತ್ತಿಲ್ಲ ಎನ್ನುವ ಕಾರಣಕ್ಕೆ ಅವರು, “ನಾನು ‘ಗೆ’ (ಸಲಿಂಗಾಸಕ್ತ) ಎಂಬ ಕಾರಣಕ್ಕೆ ಶಿಫಾರಸ್ಸು ಮಾಡಿದರೂ ಕೂಡ ನನ್ನನ್ನು ನ್ಯಾಯಾಧೀಶರಾಗಿ ನೇಮಿಸುತ್ತಿಲ್ಲ” ಎಂದು ಅಸಮಾಧಾನ ಹೊರಹಾಕಿದ್ದರು.

2017 ರ ಅಕ್ಟೋಬರ್‌ನಲ್ಲಿ ದೆಹಲಿ ಹೈಕೋರ್ಟ್ ಹಿರಿಯ ನ್ಯಾಯವಾದಿ ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ನ್ಯಾಯಾಲಯದ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವಂತೆ ದೆಹಲಿ ಹೈಕೋರ್ಟ್‌ನ 33 ನ್ಯಾಯಾಧೀಶರು ಶಿಫಾರಸ್ಸು ಮಾಡಿದ್ದರು. ಅಲ್ಲದೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಿಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರ ನೇತೃತ್ವದ ಕೊಲಿಜಿಯಂ ಸಹ ಶಿಫಾರಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಅನುಮತಿ ನೀಡದೆ ವಿಳಂಬ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ಕಿರ್ಪಾಲ್‌ ಅವರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಒಪ್ಪಿಕೊಂಡಿರಲಿಲ್ಲ. ಯಾಕೆಂದರೆ ಅವರು ಎಲ್‌ಜಿಬಿಟಿ ಸಮುದಾಯದ ಹೋರಾಟದ ಭಾಗವಾಗಿದ್ದರು. ಕಿರ್ಪಾಲ್ ಅವರನ್ನು ನ್ಯಾಯಾಧೀಶರನ್ನಾಗಿ ನೇಮಿಸಲು ವಿಳಂಬ ಮಾಡುತ್ತಿದೆ ಎಂದು ಹೇಳಲಾಗುತ್ತಿತ್ತು.

ಸೌರಭ್ ಕಿರ್ಪಾಲ್ ಅವರ ತಂದೆ, ನ್ಯಾಯಮೂರ್ತಿ ಬಿ.ಎನ್.ಕಿರ್ಪಾಲ್ ಅವರು ಮೇ 2002ರಿಂದ ನವೆಂಬರ್ 2002ರವರೆಗೆ ಸುಪ್ರೀಂಕೋರ್ಟ್‌ನ 31ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ದೆಹಲಿಯ ಸೇಂಟ್ ಸ್ಟೀಫನ್ಸ್‌ನಿಂದ ಭೌತಶಾಸ್ತ್ರದಲ್ಲಿ ಪದವೀಧರರಾಗಿರುವ ನ್ಯಾಯವಾದಿ ಕಿರ್ಪಾಲ್, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಭಾರತಕ್ಕೆ ಹಿಂದಿರುಗುವ ಮೊದಲು, ಸೌರಭ್ ಕಿರ್ಪಾಲ್ ಜಿನೀವಾದಲ್ಲಿ ವಿಶ್ವಸಂಸ್ಥೆಯೊಂದಿಗೆ ಕೆಲಸ ಮಾಡಿದ್ದರು. ಅವರು ಎರಡು ದಶಕಗಳಿಂದ ಭಾರತದಲ್ಲಿ ಕಾನೂನು ಅಭ್ಯಾಸ ಮಾಡುತ್ತಿದ್ದಾರೆ.

‘ಸೆಕ್ಸ್ ಮತ್ತು ಸುಪ್ರೀಂ ಕೋರ್ಟ್’ ಎಂಬ ಪುಸ್ತಕವನ್ನು ಬರೆದಿದ್ದಾರೆ. ಈ ಕೃತಿಯು ಕಾನೂನು, ಲಿಂಗ ಮತ್ತು ಲೈಂಗಿಕತೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...