Homeಮುಖಪುಟಮುಚ್ಚಿದ ಕವರ್‌ಗಳಲ್ಲಿ ದಾಖಲೆ ಸಲ್ಲಿಸುವ ಕ್ರಮವನ್ನು ಟೀಕಿಸಿದ ಸುಪ್ರೀಂಕೋರ್ಟ್!

ಮುಚ್ಚಿದ ಕವರ್‌ಗಳಲ್ಲಿ ದಾಖಲೆ ಸಲ್ಲಿಸುವ ಕ್ರಮವನ್ನು ಟೀಕಿಸಿದ ಸುಪ್ರೀಂಕೋರ್ಟ್!

- Advertisement -
- Advertisement -

ಎರಡು ಪ್ರತ್ಯೇಕ ವಿಚಾರಣೆಗಳ ಸಂದರ್ಭದಲ್ಲಿ, ಸರ್ಕಾರಗಳ ‘ಮುಚ್ಚಿದ ಕವರ್‌ ನ್ಯಾಯಶಾಸ್ತ್ರ’ದ ಕ್ರಮವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಟೀಕಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಈ ಕ್ರಮದಂತೆ ಸರ್ಕಾರಗಳು ಮತ್ತು ಅದರ ಏಜೆನ್ಸಿಗಳು ಮೊಹರು ಮಾಡಿದ ಲಕೋಟೆಗಳಲ್ಲಿ ದಾಖಲೆಗಳನ್ನು ನ್ಯಾಯಾಧೀಶರಿಗೆ ಸಲ್ಲಿಸುತ್ತವೆ. ಈ ದಾಖಲೆಗಳಲ್ಲಿ ಇರುವ ವಿಷಯಗಳನ್ನು ಎದುರು ವಾದಿಸುತ್ತಿರುವ ಪಕ್ಷದವರೊಂದಿಗೆ ಹಂಚಿಕೊಳ್ಳುವುದಿಲ್ಲ.

ದಿ ಹಿಂದೂ ಪ್ರಕಾರ, ಪ್ರಕರಣವು ಹೆಚ್ಚು ಸೂಕ್ಷ್ಮವಾಗಿದ್ದು, ರಾಷ್ಟ್ರೀಯ ಭದ್ರತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಬಹುದು ಎಂಬ ಆಧಾರದ ಮೇಲೆ ನಡೆಯನ್ನು ಅನುಸರಿಸಲಾಗುತ್ತದೆ.

ಇದನ್ನೂ ಓದಿ: ಕೈಕೋಳದಲ್ಲಿ ಉಮರ್‌ ಖಾಲಿದ್‌ರನ್ನು ನ್ಯಾಯಾಲಯಕ್ಕೆ ಕರೆತಂದ ಪೊಲೀಸರು: ನೋಟಿಸ್‌ ನೀಡಿದ ಕೋರ್ಟ್ 

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಬಿಹಾರ ಸರ್ಕಾರದ ವಿರುದ್ಧ ವ್ಯಕ್ತಿಯೊಬ್ಬರು ಸಲ್ಲಿಸಿದ ಕ್ರಿಮಿನಲ್ ಮೇಲ್ಮನವಿಯ ವಿಚಾರಣೆ ನಡೆಸುವಾಗ, ಮುಚ್ಚಿದ ಕವರ್‌ನಲ್ಲಿ ದಾಖಲೆಗಳನ್ನು ಸ್ವೀಕರಿಸಲು ನಿರಾಕರಿಸಿದರು.

“ಯಾವುದೇ ಸೀಲ್ಡ್ ಕವರ್‌ಗಳನ್ನು ನೀಡಬೇಡಿ, ಅದನ್ನು ನಿಮ್ಮೊಂದಿಗೆ ಇಟ್ಟುಕೊಳ್ಳಿ, ನನಗೆ ಯಾವುದೇ ಸೀಲ್ಡ್ ಕವರ್ ಬೇಡ” ಎಂದು ನ್ಯಾಯಮೂರ್ತಿ ರಮಣ ಹೇಳಿದ್ದಾರೆ ಎಂದು ಲೈಲಾ ವೆಬ್‌ಸೈಟ್‌ ವರದಿ ಮಾಡಿದೆ.

ಮಲಯಾಳಂ ನ್ಯೂಸ್ ಚಾನೆಲ್ ಮೀಡಿಯಾ ಒನ್ ಟಿವಿಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ, ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ವಿಚಾರಣೆಯ ಸಮಯದಲ್ಲಿ ‘ಮುಚ್ಚಿದ ಕವರ್’ ಅನ್ನು ಅವಲಂಬಿಸುವುದು ಸರಿಯೆ ಎಂಬುವುದನ್ನು ಪರಿಶೀಲಿಸುವುದಾಗಿ ಹೇಳಿದೆ.

‘ಸೀಲ್ಡ್ ಕವರ್ ನ್ಯಾಯಶಾಸ್ತ್ರವನ್ನು ನಾನು ತುಂಬಾ ವಿರೋಧಿಸುತ್ತೇನೆ’ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಇದನ್ನೂ ಓದಿ:  ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ

ಮೀಡಿಯಾ ಒನ್ ಪ್ರಕರಣದಲ್ಲಿ, ರಾಷ್ಟ್ರೀಯ ಭದ್ರತೆಯನ್ನು ಉಲ್ಲೇಖಿಸಿ ಕೇರಳ ಹೈಕೋರ್ಟ್ ಮಾರ್ಚ್ 2 ರಂದು ಸುದ್ದಿ ವಾಹಿನಿಯ ಮೇಲಿನ ಒಕ್ಕೂಟ ಸರ್ಕಾರದ ನಿಷೇಧವನ್ನು ಎತ್ತಿ ಹಿಡಿದಿತ್ತು. ಒಕ್ಕೂಟ ಸರ್ಕಾರ ನೀಡಿರುವ ಕೆಲವು ಗೌಪ್ಯ ಕಡತಗಳು ಚಾನೆಲ್ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತಂದಿದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಹೇಳಿದ್ದರು.

ಇದರ ನಂತರ ಚಾನೆಲ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದು, ಮೀಡಿಯಾ ಒನ್ ಟಿವಿಯ ಪರವಾನಗಿಯನ್ನು ನವೀಕರಿಸಲು ನಿರಾಕರಿಸಿದ ಫೈಲ್‌ಗಳನ್ನು ಪ್ರಸ್ತುತಪಡಿಸುವಂತೆ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡಿತು. ಕಡತಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ ನಿಷೇಧಕ್ಕೆ ತಡೆಯಾಜ್ಞೆ ನೀಡಿದೆ.

ಒಕ್ಕೂಟ ಸರ್ಕಾರವು ತಮ್ಮ ನಿರ್ಧಾರವನ್ನು ರಕ್ಷಿಸಿಕೊಳ್ಳುವ ಕಾರಣಗಳನ್ನು ಚಾನೆಲ್‌ಗೆ ಬಹಿರಂಗಪಡಿಸಬೇಕು ಎಂದು ನ್ಯಾಯಾಲಯವು ಸರ್ಕಾರಕ್ಕೆ ತಿಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. “ಫೈಲ್‌ಗಳನ್ನು ಬಹಿರಂಗಪಡಿಸುವಲ್ಲಿ ತೊಂದರೆ ಏನಿದೆ?” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ವಕೀಲ ನ್ಯಾಯಾಲಯಕ್ಕೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...