Homeಮುಖಪುಟಶಾಹೀನ್‌ ಬಾಗ್‌ ಪ್ರತಿಭಟನಾಕಾರರನ್ನು ಹೊರಕಳಿಸಲು ಸಾಧ್ಯವಿಲ್ಲ, ಆದರೆ... : ಸುಪ್ರೀಂ ಕೋರ್ಟ್‌

ಶಾಹೀನ್‌ ಬಾಗ್‌ ಪ್ರತಿಭಟನಾಕಾರರನ್ನು ಹೊರಕಳಿಸಲು ಸಾಧ್ಯವಿಲ್ಲ, ಆದರೆ… : ಸುಪ್ರೀಂ ಕೋರ್ಟ್‌

- Advertisement -
- Advertisement -

ದೆಹಲಿಯ ಶಾಹೀನ್ ಬಾಗ್ ಪ್ರದೇಶದಲ್ಲಿ ಒಂದೂವರೆ ತಿಂಗಳಿನಿಂದ ನಡೆಯುತ್ತಿರುವ ಸಿಎಎ, ಎನ್‌ಆರ್‌ಸಿ ವಿರುದ್ಧದ ಹೋರಾಟದಲ್ಲಿ ಬೀಡುಬಿಟ್ಟಿರುವ ಸಾವಿರಾರು ಪ್ರತಿಭಟನಾಕಾರರನ್ನು ಅಲ್ಲಿಂದ ಹೊರಕಳಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಆದರೆ ಅದೇ ಸಂದರ್ಭದಲ್ಲಿ “ಸಾಮಾನ್ಯ ಪ್ರದೇಶದಲ್ಲಿ ಅನಿರ್ದಿಷ್ಟ ಪ್ರತಿಭಟನೆಗಳು ನಡೆಯಲು ಸಾಧ್ಯವಿಲ್ಲ. ಎಲ್ಲರೂ ಎಲ್ಲೆಡೆ ಪ್ರತಿಭಟನೆ ಆರಂಭಿಸಿದರೆ ಏನಾಗಬಹುದು” ಎಂದು ಸುಪ್ರೀಂ ಕೋರ್ಟ್‌ ಪ್ರತಿಭಟನಾಕಾರರಿಗೆ ಪ್ರಶ್ನಿಸಿದೆ.

ಈ ಕುರಿತು ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದ್ದು, ಮುಂದಿನ ವಿಚಾರಣೆಯನ್ನು ಫೆಬ್ರವರಿ 17ಕ್ಕೆ ನಿಗಧಿಪಡಿಸಿದೆ.

ಶಹೀನ್ ಬಾಗ್‌ನಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧದ ಪ್ರತಿಭಟನೆಗಳ ವಿರುದ್ಧ ಹಲವರು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ..

ಪೌರತ್ವ ತಿದ್ದುಪಡಿ ಕಾಯ್ದೆ, ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ವಿರುದ್ಧ ಪ್ರತಿಭಟನಾಕಾರರು, ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳು ದಕ್ಷಿಣ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಸುಮಾರು ಎರಡು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...