Homeಮುಖಪುಟಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

ಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ರೋಹಿಂಗ್ಯಾ ನಿರಾಶ್ರಿತರನ್ನು ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಭಾರತ ಸರ್ಕಾರ ಸಮುದ್ರಕ್ಕೆ ತಳ್ಳಿದೆ ಎಂಬ ಗಂಭೀರ ಆರೋಪವನ್ನು ನಂಬಲು ಸುಪ್ರೀಂ ಕೋರ್ಟ್‌ ಶುಕ್ರವಾರ (ಮೇ.16) ಹಿಂದೇಟು ಹಾಕಿದ್ದು, ಸಾಕ್ಷಿ ಕೇಳಿದೆ ಎಂದು ವರದಿಯಾಗಿದೆ.

ಮಹಿಳೆಯರು, ಮಕ್ಕಳು, ವೃದ್ಧರು, ಕ್ಯಾನ್ಸರ್‌ನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿದ್ದ ಸುಮಾರು 43 ರೋಹಿಂಗ್ಯಾ ನಿರಾಶ್ರಿತರನ್ನು ಭಾರತ-ಮ್ಯಾನ್ಮಾರ್ ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಭಾರತೀಯ ನೌಕಾಪಡೆ ಹಡಗಿನಿಂದ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಕೋರಿ ಇಬ್ಬರು ರೋಹಿಂಗ್ಯಾ ನಿರಾಶ್ರಿತರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್.ಕೆ ಸಿಂಗ್ ಅವರ ಪೀಠವು, ದೃಢವಾದ ಪುರಾವೆಗಳಿಲ್ಲದೆ ಮಧ್ಯಪ್ರವೇಶಿಸಲು ಒಲವು ತೋರಿಲ್ಲ ಎಂದು ವರದಿಯಾಗಿದೆ.

“ಪ್ರತಿ ಬಾರಿಯೂ ನಿಮ್ಮದೊಂದು ಹೊಸ ಕಥೆ ಸಿದ್ದವಾಗುತ್ತದೆ. ಈ ಬಾರಿ ಈ ಸುಂದರವಾದ ರಚಿಸಿದ್ದೀರಿ. ಸಮುದ್ರಕ್ಕೆ ತಳ್ಳಿದ್ದರ ಫೋಟೋ, ವಿಡಿಯೋ ತೆಗೆದವರು ಯಾರು? ಅವರು ವಾಪಸ್ ಬಂದಿದ್ದು ಹೇಗೆ? ಏನು ದಾಖಲೆ ಇದೆ?” ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಕೇಳಿದ್ದಾರೆ ಎಂದು barandbench.com ವರದಿ ಮಾಡಿದೆ.

“ದೇಶ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ, ನೀವು ಈ ಕಾಲ್ಪನಿಕ ಅರ್ಜಿ ಸಲ್ಲಿಸಿದ್ದೀರಿ” ನ್ಯಾಯಾಧೀಶರು ಹೇಳಿದ್ದಾರೆ. ಈ ಮೂಲಕ ಅವರು ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಅದರ ನಂತರದ ಘಟನೆಗಳನ್ನು ಉಲ್ಲೇಖಿಸಿರಬಹುದು ಎಂದು barandbench.com ವರದಿ ತಿಳಿಸಿದೆ.

ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಅವರು, ಅರ್ಜಿದಾರರಿಗೆ ಆಪಾದಿತ ಘಟನೆಗಳ ಬಗ್ಗೆ ಮಾಹಿತಿ ನೀಡುವ ಫೋನ್ ಕರೆಗಳು ಬಂದಿವೆ. ವಿಶ್ವಾಸಾರ್ಹ ಸುದ್ದಿ ವರದಿಗಳೂ ಇವೆ ಎಂದು ಹೇಳಿದ್ದಾರೆ.

“ಅವರನ್ನು (ರೋಹಿಂಗ್ಯಾ ನಿರಾಶ್ರಿತರನ್ನು) ಅಂಡಮಾನ್‌ಗೆ ಕರೆದೊಯ್ದು. ಲೈಫ್ ಜಾಕೆಟ್‌ ತೊಡಿಸಿ ಸಮುದ್ರಕ್ಕೆ ತಳ್ಳಲಾಗಿದೆ. ಈ ಬಗ್ಗೆ ಮ್ಯಾನ್ಮಾರ್‌ನಿಂದ ಕರೆ ಬಂದಿದೆ. ಅವರು (ಅರ್ಜಿದಾರರು) ದೆಹಲಿಯಲ್ಲಿದ್ದಾರೆ, ಅವರಿಗೆ ಫೋನ್‌ನಲ್ಲಿ ವಿಷಯ ತಿಳಿಸಲಾಗಿದೆ. ನಮ್ಮ ಬಳಿ ಫೋನ್ ಕರೆಯ ಅನುವಾದವೂ ಇದೆ. ದಯವಿಟ್ಟು ವಿದೇಶಿ ಮಾಧ್ಯಮ ವರದಿಗಳನ್ನು ನೋಡಿ… ಅದು ವಿಶ್ವಾಸಾರ್ಹ ವರದಿಗಳೆಂದು ಹೇಳುತ್ತದೆ” ಎಂದು ವಕೀಲ ಗೊನ್ಸಾಲ್ವೆಸ್ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ಈ ಬಗ್ಗೆ ತನಿಖೆಗೆ ನಿರ್ದೇಶಿಸುವಂತೆ ಗೊನ್ಸಾಲ್ವೆಸ್ ನ್ಯಾಯಾಲಯವನ್ನು ಕೋರಿದ್ದಾರೆ. ಆದರೆ, ನ್ಯಾಯಾಲಯ ಈ ಬಗ್ಗೆ ಯಾವುದೇ ಆದೇಶ ನೀಡಲು ಒಲವು ತೋರಿಲ್ಲ.

“ಆ ಕರೆಗಳನ್ನು ಯಾರು ಪರಿಶೀಲಿಸಿದ್ದಾರೆ ಮತ್ತು ಯಾರಿಗೆ ಇದೆಲ್ಲದರ ಬಗ್ಗೆ ವೈಯಕ್ತಿಕ ಜ್ಞಾನವಿದೆ ಎಂಬುದನ್ನು ನಮಗೆ ತೋರಿಸಿ. ಯಾರಾದರೂ ನಿಂತು ಇದನ್ನು ವೀಕ್ಷಿಸದ, ಅರ್ಜಿದಾರರು ಅದನ್ನು ನೈಜ ಸಮಯದಲ್ಲಿ ನೋಡದ ಹೊರತು ನೀವು ಇದನ್ನು ಹೇಗೆ ದೃಢೀಕರಿಸುತ್ತೀರಿ? ಈ ವರದಿಗಳನ್ನು ದಾಖಲೆಯಲ್ಲಿ ಇರಿಸಿ… ನಾವು ನೋಡುತ್ತೇವೆ. ಹೊರಗೆ ಕುಳಿತಿರುವ ಈ ಎಲ್ಲಾ ಜನರು ನಮ್ಮ ಸಾರ್ವಭೌಮತ್ವ ಮತ್ತು ನಮ್ಮ ಅಧಿಕಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಈ ನಡುವೆ ರೋಹಿಂಗ್ಯಾ ನಿರಾಶ್ರಿತರನ್ನು ರಕ್ಷಿಸಬೇಕು ಎಂಬುದನ್ನು ಪರಿಗಣಿಸುವಂತೆ ಗೊನ್ಸಾಲ್ವೆಸ್ ನ್ಯಾಯಾಲಯವನ್ನು ಕೋರಿದ್ದಾರೆ.

“ದಯವಿಟ್ಟು ಅಂತಾರಾಷ್ಟ್ರೀಯ ನ್ಯಾಯಾಲಯವು ರೋಹಿಂಗ್ಯಾಗಳ ಬಗ್ಗೆ ಏನು ಹೇಳಿದೆ ಮತ್ತು ರೋಹಿಂಗ್ಯಾಗಳನ್ನು ಏಕೆ ವಾಪಸ್ ಕಳಿಸಬಾರದು ಎಂಬುದನ್ನು ನೋಡಿ… ವಲಸಿಗರನ್ನು ವಾಪಸ್ ಕಳಿಸಬಹುದು. ಆದರೆ, ರೋಹಿಂಗ್ಯಾಗಳನ್ನು ಕಳುಹಿಸುವಂತಿಲ್ಲ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಅರ್ಜಿದಾರರು ಮಾಡಿರುವ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳಿದ್ದರೆ ಮಾತ್ರ ಮಧ್ಯಪ್ರವೇಶಿಸಬಹುದು ಎಂದಿದೆ.

ಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...