Homeಮುಖಪುಟಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಅಟಾರ್ನಿ ಜನರಲ್ ಹೆಸರನ್ನೇ ಕೈಬಿಟ್ಟ ಸುಪ್ರೀಂಕೋರ್ಟ್: ಭಿನ್ನ ಅಭಿಪ್ರಾಯಕ್ಕೆ ಕತ್ತರಿಯೇ?

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

- Advertisement -
- Advertisement -

ಖ್ಯಾತ ನ್ಯಾಯವಾದಿ ಪ್ರಶಾಂತ್ ಭೂಷಣ್‌ರವರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ‘ಭೂಷಣ್ ತಮ್ಮ ಹೇಳಿಕೆಯ ಕುರಿತು ಮರುಪರಿಶೀಲಿಸಲು’ ಮೂರು ದಿನಗಳ ಸಮಯ ನೀಡಿದೆ.

ಆಶ್ಚರ್ಯವೆಂದರೆ ಸುಪ್ರೀಂ ಕೋರ್ಟಿನ ಆರ್ಡರ್‌ ಶೀಟ್‌ಅನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ಹಾಜರಿದ್ದ, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರನ್ನು ಅದರಲ್ಲಿ ಹೆಸರಿಸಲಾಗಿಲ್ಲ.

ಎರಡೂವರೆ ಗಂಟೆಗೂ ಹೆಚ್ಚು ವೇಳೆ ನಡೆದ ವಾದ-ವಿವಾದದಲ್ಲಿ ಅಟಾರ್ನಿ ಜನರಲ್ ಹಾಜರಿದ್ದರು ಮಾತ್ರವಲ್ಲ ಕೋರ್ಟಿಗೆ ಭೂಷಣ್ ಪರವಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು.

ಪ್ರಶಾಂತ್ ಭೂಷಣ್‌ರವರ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಆಗಸ್ಟ್ 5 ರಂದು ನಡೆದ ಮೊದಲ ವಿಚಾರಣೆಯಲ್ಲಿ ಸಂದರ್ಭದಲ್ಲಿ ಅವರು ಹಾಜರಿದ್ದುದ್ದನ್ನು ಅಂದಿನ ನಡಾವಳಿಗಳಲ್ಲಿ ದಾಖಲಿಸಲಾಗಿತ್ತು. ಆದರೆ ನಿನ್ನೆಯ ತೀರ್ಪು ನೀಡುವ ವಿಚಾರಣೆಯಲ್ಲಿ ಅವರನ್ನು ಕೈಬಿಟ್ಟಿರುವುದು ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ.

ವಿಚಾರಣೆಯ ಸಂದರ್ಭದಲ್ಲಿ ಪ್ರಶಾಂತ್ ಭೂಷಣ್‌ರವರು ತಮ್ಮ ಹೇಳಿಕೆಯನ್ನು ದಾಖಲಿಸಿದ ನಂತರ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠವೇ ‘ಭೂಷಣ್ ಅವರಿಗೆ ತಮ್ಮ ಹೇಳಿಕೆಯನ್ನು ಮರುಪರಿಶೀಲಿಸಲು ಸಮಯ ನೀಡಬಹುದೇ’ ಎಂದು ಅಟಾರ್ನಿ ಜನರಲ್‌ರವರ ಸಲಹೆ ಕೇಳಿತ್ತು. ಆಗ ಅವರು ಸಮಯ ನೀಡಬಹುದು ಎಂದು ಅಭಿಪ್ರಾಯಪಟ್ಟಿದ್ದರು.

ಆದರೆ ಅಟಾರ್ನಿ ಜನರಲ್‌ರವರು ಪ್ರಶಾಂತ್ ಭೂಷಣ್‌ರವರಿಗೆ ಶಿಕ್ಷೆ ನೀಡಬೇಡಿ, ಅವರು ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೀಠದ ಮುಂದೆ ಮನವಿ ಮಾಡಿದ್ದರು. ಆದರೆ ಪೀಠ ಅದನ್ನು ನಿರಾಕರಿಸಿತ್ತು.

ಆಗಸ್ಟ್ 5 ರಂದು ನಡೆದ ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಹೆಸರು ನಮೂದಿಸಿರುವುದು..

ವಿಚಾರಣೆಯ ಕೊನೆಯಲ್ಲಿ ಅಟಾರ್ನಿ ಜನರಲ್‌ರವರು “”ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ” ಎಂದು  ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು “ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಮಿ.ಅಟಾರ್ನಿ” ಎಂದು ಹೇಳುವ ಮೂಲಕ ತಡೆದರು.

ವಿಚಾರಣೆಯ ಆರಂಭದಲ್ಲಿ ಭೂಷಣ್ ಪರ ವಕೀಲರಾದ ರಾಜೀವ್ ಧವನ್ ಮತ್ತು ದುಷ್ಯಂತ್ ದವೆಯವರು ಅಟಾರ್ನಿ ಜನರಲ್‌ರವರು ಸಹ ವಿಡಿಯೋ ಕಾನ್ಫರೆನ್ಸ್‌ನಲ್ಲಿದ್ದು, ತಮ್ಮ ಹೇಳಿಕೆಯನ್ನು ದಾಖಲಿಸಲು ಕಾಯುತ್ತಿದ್ದಾರೆ ಎಂದು ನೆನಪಿಸಿದ್ದರು. ಆದರೆ ನ್ಯಾಯಮೂರ್ತಿ ಮಿಶ್ರಾರವರು ಅದು ನಮಗೂ ಗೊತ್ತಿದೆ, ನೀವು ನೆನಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಒಟ್ಟಿನಲ್ಲಿ ಅಟಾರ್ನಿ ಜನರಲ್ ವಿಚಾರಣೆಯ ವೇಳೆ ಸಕ್ರಿಯರಾಗಿ ಭಾಗವಹಿಸಿದ್ದರು. ಅವರು ಪ್ರಶಾಂತ್ ಭೂಷಣ್ ಪರ ವಾದ ಮಂಡಿಸಿದರು. ನ್ಯಾಯಪೀಠ ಅವರ ಸಲಹೆಯನ್ನು ಸಹ ಪಡೆದುಕೊಂಡಿತು. ಆದರೆ ಸಂಜೆ ಪ್ರಕಟವಾದ ತೀರ್ಪು ಬರಹದಲ್ಲಿ ಮಾತ್ರ ಅವರ ಹೆಸರನ್ನು ನಮೂದಿಸಿಲ್ಲ.

ಒಂದು ವೇಳೆ ಅಟಾರ್ನಿಯವರ ಹೆಸರು ಹಾಕುವುದೇ ಇಲ್ಲ ಎಂದಾದಲ್ಲಿ, ಇದೇ ಕೇಸಿನಲ್ಲಿ ಹಿಂದೆ ಏಕೆ ಹಾಕಿದರು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ದಿನದ ವಿಚಾರಣೆಯ ಸಂದರ್ಭದಲ್ಲಿ ಅವರ ಅಗತ್ಯವಿರಲಿಲ್ಲ ಎನ್ನುವುದಾದರೆ, ಸುಪ್ರೀಂಕೋರ್ಟಿನ ಪೀಠ ಅವರನ್ನು ಕರೆಸಿದ್ದೇಕೆ? ವಿಚಾರಣೆಯ ನಡುವೆ ಅವರ ಅನಿಸಿಕೆಯನ್ನು ಕೇಳಿದ್ದೇಕೆ ಎಂಬುದು ಸಹಜ ಪ್ರಶ್ನೆ.

ಅಂದರೆ ಸರ್ಕಾರದ ಪರವಾಗಿರುವ ವಕೀಲರೂ ಸಹಾ ಪ್ರಶಾಂತ್ ಭೂಷಣ್ ಹೇಳಿದ್ದನ್ನಾಗಲೀ, ಪ್ರಶಾಂತ್ ಭೂಷಣ್ ಅವರ ಕೊಡುಗೆಯನ್ನಾಗಲೀ ನಿರಾಕರಿಸುವ ಸ್ಥಿತಿಯಲ್ಲಿಲ್ಲ; ಬದಲಿಗೆ ಪೂರಕವಾದ ಮಾತುಗಳನ್ನಾಡಬೇಕಾದ ಅನಿವಾರ್ಯತೆ ಇದ್ದಂತಿದೆ. ಇದನ್ನು ನಿರೀಕ್ಷಿಸಿರದ ಪೀಠ ಎಡವಿಬಿಟ್ಟು, ಇದೀಗ ಆ ರೀತಿಯ ಭಿನ್ನ ಅಭಿಪ್ರಾಯವನ್ನು ದಾಖಲಿಸಿದ ಅಟಾರ್ನಿಯವರ ಹೆಸರನ್ನೇ ಆರ್ಡರ್ ಶೀಟ್‌ನಲ್ಲಿ ಕೈಬಿಟ್ಟಿದೆ.

ಈ ಕುರಿತು ನಾನುಗೌರಿ.ಕಾಂ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಸಂಜಯ್ ಹೆಗಡೆ ಮತ್ತು ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಇದು ಸುಪ್ರೀಂ ಕೋರ್ಟ್ ಬೇಕಂತಲೇ ಮಾಡಿದ್ದಲ್ಲ, ಅಪ್ಪಿ ತಪ್ಪಿ ಆದ ತಪ್ಪಾಗಿದೆ. ಅದನ್ನು ಅವರು ಸರಿಪಡಿಸಿಕೊಳ್ಳಬಹುದು. ಆದರೆ ಉಳಿದ ವಿಷಯಗಳು ಚರ್ಚಾರ್ಹ ಎಂದಿದ್ದಾರೆ.


ಇದನ್ನೂ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...