Homeಕರ್ನಾಟಕರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬ: ಕೇಂದ್ರದಿಂದ ಪ್ರತಿಕ್ರಿಯೆ ಕೋರಿದ ಸುಪ್ರೀಂಕೋರ್ಟ್‌

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬ: ಕೇಂದ್ರದಿಂದ ಪ್ರತಿಕ್ರಿಯೆ ಕೋರಿದ ಸುಪ್ರೀಂಕೋರ್ಟ್‌

- Advertisement -
- Advertisement -

ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರಕ್ಕೆ ನೋಟಿಸ್‌ ನೀಡಿದ್ದು, ಎರಡು ವಾರಗಳಲ್ಲಿ ಈ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಮತ್ತು ಸಂದೀಪ್‌ ಮೆಹ್ತಾ ಅವರ ಪೀಠ ಈ ಕುರಿತು ಅರ್ಜಿಯನ್ನು ವಿಚಾರಣೆ ನಡೆಸಿದೆ. ಈ ಬಗ್ಗೆ ಕೇಂದ್ರಕ್ಕೆ ಸಮಯಾವಕಾಶ ನೀಡಬೇಕೆಂದು ಕೇಂದ್ರ ಪರ ಹಾಜರಿದ್ದ ಅಟಾರ್ನಿ ಜನರಲ್‌ ಆರ್‌ ವೆಂಕಟರಮಣಿ ಮತ್ತು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಕೋರಿದ್ದಾರೆ. ಅನುದಾನ ಬಿಡುಗಡೆ ವಿಚಾರದ ನಿರ್ಧಾರ ಒಂದು ತಿಂಗಳೊಳಗೆ ಅಂದರೆ ಡಿಸೆಂಬರ್‌ ಒಳಗೆ ತೆಗೆದುಕೊಳ್ಳಬೇಕಾಗಿತ್ತು ಆದರೆ ಕೋರ್ಟ್‌ ಹಸ್ತಕ್ಷೇಪದಿಂದ ಸಮಸ್ಯೆ ಪರಿಹಾರವಾಗಬಹುದೆಂಬ ನಿರೀಕ್ಷೆಯಿದೆ ಎಂದು ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಿದ ಕಪಿಲ್‌ ಸಿಬಲ್‌ ಹೇಳಿದ್ದಾರೆ.

ಈ ಕುರಿತ ಸಚಿವ ಕೃಷ್ಣಬೈರೇಗೌಡ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಗೌರವಾನ್ವಿತ ಸುಪ್ರೀಂಕೋರ್ಟ್‌ ಈ ಕುರಿತು ನಿರ್ಧಾರ ತೆಗೆದುಕೊಂಡು 2 ವಾರಗಳಲ್ಲಿ ಪ್ರತಿಕ್ರಿಯಿಸಬೇಕು ಎಂದು ಸೂಚಿಸಿದೆ. ರಾಜ್ಯ ಸರಕಾರಗಳು ಎಷ್ಟು ಬಾರಿ ನ್ಯಾಯಾಲಯಕ್ಕೆ ಬರಬೇಕು? ಎಂದು ಸುಪ್ರೀಂ ಕೋರ್ಟ್ ಕೇಳಿದೆ. ಈ ವೇಳೆ ಭಾರತ ಸರ್ಕಾರದ ಪರ ವಕೀಲರು ಸಮಸ್ಯೆಯನ್ನು ಪರಿಹರಿಸಿ ಮತ್ತೆ ನ್ಯಾಯಾಲಯಕ್ಕೆ ಬರುತ್ತೇವೆ ಎಂದು ಹೇಳಿದರು ಎಂದು ಬರೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.  ಈ ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಐದು ತಿಂಗಳು ಕಾದರೂ ಕೇಂದ್ರ ಸರ್ಕಾರ ಬರ ಪರಿಹಾರ ಕೊಟ್ಟಿಲ್ಲ. ಹಾಗಾಗಿ, ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಸರ್ಕಾರದ ವಿರುದ್ದ ಸಂವಿಧಾನದ ವಿಧಿ 32ರ ಅಡಿ ಕೇಂದ್ರ ನಾವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇವೆ. ಇಂದು ಬೆಳಿಗ್ಗೆ ಅರ್ಜಿ ಹಾಕಿದ್ದೇವೆ. ನಮಗೆ ಸಿಗಬೇಕಾದ ಪರಿಹಾರ ಸಿಗಬೇಕು ಎಂದು ಹೇಳಿದ್ದರು.

ಅಕ್ಟೋಬರ್‌ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು‌ ಬರ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ನೀಡಿದೆ. ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ ಪರಿಹಾರವನ್ನು ಬಿಡಿಗಡೆ ಮಾಡಿರಲಿಲ್ಲ.

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದರು. ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯನ್ನು  ಸಿಎಂ ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದರು. ಆದರೆ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಇದಲ್ಲದೆ ಸಿಎಂ ಸಿದ್ದರಾಮಯ್ಯ ಅವರು, ಸಚಿವರು, ಶಾಸಕರ ದಂಡಿನೊಂದಿಗೆ ದೆಹಲಿಯ ಜಂತರ್‌ ಮಂತರ್‌ನಲ್ಲಿ ಧರಣಿಯನ್ನೂ ನಡೆಸಿ ದೇಶದ ಗಮನ ಸೆಳೆದಿದ್ದರು.

ಇದನ್ನು ಓದಿ: ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಸಿಡಿದೆದ್ದ ದಿಂಗಾಲೇಶ್ವರ ಸ್ವಾಮೀಜಿ; ಸ್ವತಂತ್ರವಾಗಿ ಸ್ಪರ್ಧೆ ಘೋಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...