Homeಮುಖಪುಟಯುಜಿಸಿ-ನೆಟ್ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಯುಜಿಸಿ-ನೆಟ್ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಪ್ರಶ್ನೆ ಪತ್ರಿಕೆ ಸೋರಿಕೆ ಸಾಧ್ಯತೆಯ ಕಾರಣ ನೀಡಿ ವಿಶ್ವವಿದ್ಯಾನಿಲಯ ಯುಜಿಸಿ-ನೆಟ್ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಪರೀಕ್ಷೆಯನ್ನು ಈಗಾಗಲೇ ಆಗಸ್ಟ್ 21ಕ್ಕೆ ಮರು ನಿಗದಿ ಮಾಡಿರುವುದರಿಂದ, ಈಗ ಹಸ್ತಕ್ಷೇಪ ಮಾಡಿದರೆ ಅನಿಶ್ಚಿತತೆ ಮತ್ತು ಅವ್ಯವಸ್ಥೆ ಹೆಚ್ಚಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ಪೀಠ ತಿಳಿಸಿದೆ.

ಜೂನ್ 18ರ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಈಗ ಆಗಸ್ಟ್ 21ರಂದು ಪರೀಕ್ಷೆ ನಿಗದಿಯಾಗಿದ್ದು, ಇದೀಗ ಪರೀಕ್ಷೆ ರದ್ದತಿಗೆ ಮನವಿ ಸಲ್ಲಿಸಲಾಗಿದೆ. ಪರೀಕ್ಷೆ ರದ್ದಾಗಿ 2 ತಿಂಗಳು ಕಳೆದಿವೆ. ಅರ್ಜಿ ಪುರಸ್ಕರಿಸಿದರೆ ಅನಿಶ್ಚಿತತೆ ಹೆಚ್ಚುತ್ತದೆ. 9 ಲಕ್ಷ ಮಂದಿ ಆಗಸ್ಟ್ 21ರಂದು ಪರೀಕ್ಷೆಗೆ ಹಾಜರಾಗುತ್ತಿದ್ದು ತಡವಾಗಿರುವ ಈ ಹಂತದಲ್ಲಿ ಪರೀಕ್ಷೆ ರದ್ದತಿ ಪ್ರಶ್ನಿಸುವಂತಿಲ್ಲ ಎಂಬುವುದಾಗಿ ನ್ಯಾಯಾಲಯ ತಿಳಿಸಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಜೂನ್‌ನಲ್ಲಿ ನಡೆಸಲು ಉದ್ದೇಶಿಸಿದ್ದ ಯುಜಿಸಿ-ನೆಟ್ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ವಕೀಲರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಜುಲೈನಲ್ಲಿ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.

ಈ ಬಾರಿಯ ಯುಜಿಸಿ-ನೆಟ್ ಪರೀಕ್ಷೆಯನ್ನು ಈ ಹಿಂದೆ ಜೂನ್‌ನಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಈ ನಡುವೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಕೆಲವು ಗುಪ್ತಚರ ಮಾಹಿತಿ ದೊರೆತಿದೆ ಎಂಬ ಕಾರಣ ನೀಡಿ, ಪರೀಕ್ಷೆ ಆರಂಭಕ್ಕೂ ಕೆಲ ಸಮಯದ ಮೊದಲು ರದ್ದುಗೊಳಿಸಲಾಗಿತ್ತು.

ಇದನ್ನೂ ಓದಿ : ವೈದ್ಯೆ ಮೇಲಿನ ಅತ್ಯಾಚಾರ-ಹತ್ಯೆ ಪ್ರಕರಣ; ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆಕೊಟ್ಟ ‘ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...