Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಪ್ರಕರಣ : ಆರೋಪಿ ಮೋಹನ್ ನಾಯಕ್ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರ

ಗೌರಿ ಲಂಕೇಶ್ ಹತ್ಯೆ ಪ್ರಕರಣ : ಆರೋಪಿ ಮೋಹನ್ ನಾಯಕ್ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರ

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೋಹನ್ ನಾಯಕ್ ಎನ್ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ವಿಶೇಷ ರಜಾ ಅವಧಿಯ ಅರ್ಜಿಯನ್ನು ಇಂದು (ಆ.21) ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಸೆಪ್ಟೆಂಬರ್ 5, 2017ರಂದು ಗೌರಿ ಲಂಕೇಶ್ ಅವರನ್ನು ದಕ್ಷಿಣ ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ನಿವಾಸದ ಮುಂದೆ ಗುಂಡಿಕ್ಕಿ ಕೊಲ್ಲಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 18 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಮೋಹನ್ ನಾಯಕ್ ಅನ್ನು ಜುಲೈ 18, 2018 ರಂದು ಬಂಧಿಸಲಾಗಿತ್ತು.

ಪ್ರಕರಣದ 11ನೇ ಆರೋಪಿಯಾಗಿದ್ದ ಮೋಹನ್‌ ನಾಯಕ್‌ಗೆ ಡಿಸೆಂಬರ್ 7,2023 ರಂದು ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. “ಕಳೆದ ಐದು ವರ್ಷಗಳಿಂದ ನಾಯಕ್ ಜೈಲಿನಲ್ಲಿದ್ದಾರೆ ಮತ್ತು 527 ಆರೋಪಪಟ್ಟಿ ಸಾಕ್ಷಿಗಳ ಪೈಕಿ 90 ಮಂದಿಯನ್ನು ಇದುವರೆಗೆ ವಿಚಾರಣೆಗೆ ಒಳಪಡಿಸಲಾಗಿದೆ” ಎಂದು ಜಾಮೀನು ನೀಡುವ ವೇಳೆ ಹೈಕೋರ್ಟ್ ಹೇಳಿತ್ತು. ಹೈಕೋರ್ಟ್‌ನ ಜಾಮೀನು ಆದೇಶವನ್ನು ಪ್ರಶ್ನಿಸಿ ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಕವಿತಾ ಅವರ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಸುಪ್ರೀಂ ಕೋರ್ಟ್ ಪೀಠದ ಮುಂದೆ ಹಾಜರಾದ ಕರ್ನಾಟಕ ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂಥ್ರಾ “ಇದುವರೆಗೆ 137 ಸಾಕ್ಷಿಗಳನ್ನು ಪ್ರಾಸಿಕ್ಯೂಷನ್‌ನಿಂದ ವಿಚಾರಣೆ ಮಾಡಲಾಗಿದೆ. ಆದರೆ, ಅವುಗಳನ್ನು ಕೈಬಿಡಲಾಗಿದೆ. ಪ್ರಾಸಿಕ್ಯೂಷನ್ 150 ಸಾಕ್ಷಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಇನ್ನು 100 ಸಾಕ್ಷಿಗಳು ಮಾತ್ರ ವಿಚಾರಣೆಗೆ ಬಾಕಿ ಎಂದು ಹೇಳಿದ್ದಾಗಿ ಲೈವ್‌ ಲಾ ವರದಿ ಮಾಡಿದೆ.

ನಾಯಕ್ ಅವರು ವಿಚಾರಣೆಗೆ ಸಹಕರಿಸಿದ್ದಾರೆ ಮತ್ತು ಇದುವರೆಗೆ ಯಾವುದೇ ಮುಂದೂಡಿಕೆಯನ್ನು ಕೋರಿಲ್ಲ ಎಂಬ ಅಂಶವನ್ನು ನ್ಯಾಯಾಲಯ ಗಮನಿಸಿದೆ ಎಂದು ವರದಿ ಹೇಳಿದೆ.

ವಿಚಾರಣಾ ನ್ಯಾಯಾಲಯವು ತ್ವರಿತವಾಗಿ ವಿಚಾರಣೆಯನ್ನು ನಡೆಸಬೇಕು ಮತ್ತು ಎಲ್ಲಾ ಕಕ್ಷಿದಾರರು ವಿಚಾರಣೆಯನ್ನು ಮುಕ್ತಾಯಗೊಳಿಸುವಲ್ಲಿ ವಿಚಾರಣಾ ನ್ಯಾಯಾಲಯದೊಂದಿಗೆ ಸಹಕರಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ ವರದಿ ತಿಳಿಸಿದೆ.

ಸುಪ್ರೀಂ ಕೋರ್ಟ್ ಅರ್ಜಿ ವಜಾಗೊಳಿಸಿರುವುದರ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯೆ ನೀಡಿರುವ ಚಿಂತಕ ಶಿವಸುಂದರ್ ಅವರು, “ಮೋಹನ್‌ ನಾಯಕ್‌ಗೆ ಜಾಮೀನು ನೀಡಿದ ವಿಚಾರದಲ್ಲಿ’ಆತ ಸುದೀರ್ಘ ಐದು ವರ್ಷಗಳಿಂದ ಜೈಲಿನದ್ದರು. ಪ್ರಕರಣದ ವಿಚಾರಣೆ ಮುಗಿಯಲು ಇನ್ನೂ ಹೆಚ್ಚಿನ ಸಮಯ ಬೇಕಿದೆ. ಅಲ್ಲಿಯವರೆಗೆ ಆತನನ್ನು ಜೈಲಿನಲ್ಲಿರಿಸುವುದು ಮಾನವ ಹಕ್ಕುಗಳ ಉಲ್ಲಂಘಣೆಯಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಈ ವಿಚಾರವನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ, ಈ ನ್ಯಾಯ ಕೆಲವು ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಸಿಗುತ್ತಿದೆ?. ಹಲವು ವರ್ಷಗಳಿಂದ ಜೈಲಿನಲ್ಲಿರುವ ಉಮರ್ ಖಾಲಿದ್, ಭೀಮ ಕೊರೆಂಗಾವ್ ಪ್ರಕರಣದಲ್ಲಿ ಬಂಧಿತರಿಗೆ ಏಕೆ ಸಿಗುತ್ತಿಲ್ಲ? ಅವರ ಹಕ್ಕುಗಳು ಏಕೆ ಪರಿಗಣೆಯಾಗುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ | ಮೂವರು ಆರೋಪಿಗಳ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಕುಟುಂಬ   

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...