Homeಮುಖಪುಟನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕ ಹೇಳಿಕೆಗಳು ಮತ್ತು ಮಾಧ್ಯಮ ವರದಿಗಳನ್ನು ನಿರ್ಬಂಧಿಸುವಂತೆ ಕೋರಿ ಧರ್ಮಪ್ರಚಾರಕ ಡಾ. ಕೆ.ಎ. ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆಯ ವೇಳೆ, ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಕೇಂದ್ರ ಸರ್ಕಾರವು ಈ ಪ್ರಕರಣದ ಕುರಿತು ನಿಯಮಿತವಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದು, ನಿಮಿಷಾ ಪ್ರಿಯಾ ಅವರ ಶಿಕ್ಷೆಯ ಅಂತಿಮ ಇತ್ಯರ್ಥವಾಗುವವರೆಗೆ ಮಾಧ್ಯಮ ವರದಿಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ, ನಿಮಿಷಾ ಪ್ರಿಯಾಳನ್ನು ರಕ್ಷಿಸಲು ರಚನೆಯಾದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ (ಮಾಜಿ ನ್ಯಾಯಾಧೀಶರು, ಸಂಸದರು, ಶಾಸಕರು ಇತ್ಯಾದಿಗಳನ್ನು ಒಳಗೊಂಡಿದೆ) ಕೂಡ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದರಿಂದ ದೂರವಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿತು. ಈ ಹಿನ್ನೆಲೆಯಲ್ಲಿ, ಡಾ. ಪಾಲ್ ಅವರ ಅರ್ಜಿಯನ್ನು ವಜಾ ಮಾಡಲಾಯಿತು.

ರಕ್ತದ ಹಣದ ಕುರಿತ ವಿವಾದ

ಡಾ. ಪಾಲ್ ಅವರು, ಪ್ರಿಯಾಳನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಸಹಾಯ ಮಾಡುತ್ತಿದ್ದು, ಸಂತ್ರಸ್ತನ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ಸಂತ್ರಸ್ತನ ಕುಟುಂಬವು ಮೂರು ಷರತ್ತುಗಳಿಗೆ ಒಳಪಟ್ಟು ಪ್ರಿಯಾಳನ್ನು ಕ್ಷಮಿಸಲು ಸಿದ್ಧವಾಗಿದೆ. ಇದರಲ್ಲಿ ಎರಡು ಷರತ್ತುಗಳನ್ನು ಅವರು ಈಗಾಗಲೇ ಪೂರೈಸಿದ್ದಾರೆ ಎಂದು ಹೇಳಿಕೊಂಡರು. ರಕ್ತದ ಹಣ ಸಂಗ್ರಹಿಸಿ ಅವರಿಗೆ ಪಾವತಿಸಲಾಗಿದೆ ಎಂಬ ಮಾಧ್ಯಮ ವರದಿಗಳಿಂದ ಸಂತ್ರಸ್ತನ ಕುಟುಂಬ ಅಸಮಾಧಾನಗೊಂಡಿದೆ ಎಂದೂ ಅವರು ಸ್ಪಷ್ಟಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಪರ ವಕೀಲ ರಾಗೆಂತ್ ಬಸಂತ್, ಸಂತ್ರಸ್ತನ ಕುಟುಂಬವು ಪ್ರಿಯಾಳನ್ನು ಕ್ಷಮಿಸುವುದು ಮೊದಲ ಹಂತ. ಅದರ ನಂತರವಷ್ಟೇ ರಕ್ತದ ಹಣದ ಪ್ರಶ್ನೆ ಬರುತ್ತದೆ ಎಂದು ವಾದಿಸಿದರು.

ಪಕ್ಷಗಳ ವಾದಗಳನ್ನು ಆಲಿಸಿದ ಪೀಠವು, ಯೆಮನ್ ಮೇಲೆ ನಮಗೆ ಅಧಿಕಾರ ಇಲ್ಲ. ಹಾಗಿದ್ದ ಮೇಲೆ ಈ ಅರ್ಜಿಯನ್ನು ನಾವು ಏಕೆ ಪರಿಗಣಿಸಬೇಕು ಎಂದು ಪ್ರಶ್ನಿಸಿತು. ಕೇಂದ್ರದ ಭರವಸೆಯ ಹಿನ್ನೆಲೆಯಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವ ಆದೇಶ ನೀಡಲು ನ್ಯಾಯಾಲಯ ನಿರಾಕರಿಸಿತು, ಮತ್ತು ಅಂತಿಮವಾಗಿ ಅರ್ಜಿಯನ್ನು ವಜಾಗೊಳಿಸಲಾಯಿತು.

ಪ್ರಕರಣದ ಹಿನ್ನೆಲೆ

ಕೇರಳ ಮೂಲದ 36 ವರ್ಷದ ನರ್ಸ್ ನಿಮಿಷಾ ಪ್ರಿಯಾ, ಯೆಮನ್ ಪ್ರಜೆ ತಲಾಲ್ ಅಬ್ಡೋ ಮಹ್ದಿ ಹತ್ಯೆ ಪ್ರಕರಣದಲ್ಲಿ 2017 ರಿಂದ ಮರಣ ದಂಡನೆ ಎದುರಿಸುತ್ತಿದ್ದಾರೆ. ತನ್ನ ಪಾಸ್‌ಪೋರ್ಟ್ ಪಡೆಯಲು ತಲಾಲ್‌ನಿಗೆ ಕೆಟಮೈನ್‌ನಿಂದ ನಿದ್ರೆ ಮಾಡಲು ಪ್ರಯತ್ನಿಸಿದ್ದರು. ತಲಾಲ್ ಆಕೆಯ ಪಾಸ್‌ಪೋರ್ಟ್ ವಶಪಡಿಸಿಕೊಂಡಿದ್ದಲ್ಲದೆ, ಆಕೆಯೇ ತನ್ನ ಪತ್ನಿ ಎಂದು ನಕಲಿ ದಾಖಲೆ ಸೃಷ್ಟಿಸಿದ್ದ ಎಂದು ಆರೋಪಿಸಲಾಗಿದೆ. ಮಿತಿ ಮೀರಿದ ನಿದ್ರಾಜನಕದ ಡೋಸ್‌ನಿಂದ ತಲಾಲ್ ಸಾವನ್ನಪ್ಪಿದ್ದಾನೆ.

2018ರಲ್ಲಿ ಆಕೆಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಯಿತು, 2020ರಲ್ಲಿ ಪುನರ್ ವಿಚಾರಣೆ ನಡೆಸಿದರೂ ಅದೇ ಶಿಕ್ಷೆ ದೃಢವಾಯಿತು, ಮತ್ತು 2023ರಲ್ಲಿ ಯೆಮನ್‌ನ ಸುಪ್ರೀಂ ಜುಡಿಶಿಯಲ್ ಕೌನ್ಸಿಲ್‌ನಲ್ಲಿ ಮೇಲ್ಮನವಿ ತಿರಸ್ಕೃತಗೊಂಡಿತು. ನಂತರ ಯೆಮನ್ ಅಧ್ಯಕ್ಷರು ಮರಣ ದಂಡನೆಯನ್ನು ಅನುಮೋದಿಸಿದರು.

ಶರಿಯತ್ ಕಾನೂನಿನ ಪ್ರಕಾರ, ರಕ್ತದ ಹಣಕ್ಕೆ ಪ್ರತಿಯಾಗಿ ಸಂತ್ರಸ್ತನ ಕುಟುಂಬವು ಅಪರಾಧಿಯನ್ನು ಕ್ಷಮಿಸಿದರೆ ಮರಣ ದಂಡನೆಯನ್ನು ರದ್ದುಗೊಳಿಸಬಹುದು. ನಿಮಿಷಾ ಪ್ರಿಯಾ ಅವರ ಸಂಬಂಧಿಕರು ಮತ್ತು ಬೆಂಬಲಿಗರು ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಅನ್ನು ರಚಿಸಿದ್ದು, ರಕ್ತದ ಹಣ ಸಂಗ್ರಹಿಸಿ ಕ್ಷಮೆಗಾಗಿ ಪ್ರಯತ್ನಿಸುತ್ತಿದ್ದಾರೆ.

ಜುಲೈ 18ರಂದು, ಸುಪ್ರೀಂ ಕೋರ್ಟ್ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ಗೆ ಯೆಮನ್‌ಗೆ ತೆರಳಿ ತಲಾಲ್‌ನ ಕುಟುಂಬವನ್ನು ಭೇಟಿಯಾಗಲು ಸರ್ಕಾರದ ಅನುಮತಿ ಪಡೆಯಲು ಅನುಮತಿಸಿತು. ಇದರಲ್ಲಿ ಕೇರಳದ ಸುನ್ನಿ ಇಸ್ಲಾಮಿಕ್ ನಾಯಕ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಪ್ರತಿನಿಧಿಯೂ ಸೇರಿದ್ದಾರೆ. ಮುಸ್ಲಿಯಾರ್ ಅವರ ಹಿಂದಿನ ಮಧ್ಯಸ್ಥಿಕೆಯಿಂದಾಗಿ ಪ್ರಿಯಾಳ ಮರಣದಂಡನೆ ಜುಲೈ 16ರಿಂದ ಮುಂದೂಡಲ್ಪಟ್ಟಿತ್ತು ಎಂದು ಸಂಸ್ಥೆಯು ಹೇಳಿಕೊಂಡಿದೆ.

ಪ್ರಿಯಾಳ ಮರಣದಂಡನೆಯ ಒಂದು ದಿನ ಮುಂಚಿತವಾಗಿ, ಖಾಸಗಿ ಮಧ್ಯಸ್ಥಿಕೆಗಳಿಂದಾಗಿ ಶಿಕ್ಷೆಯನ್ನು ಮುಂದೂಡಲಾಗಿದೆ ಎಂಬ ವರದಿಗಳು ಬಂದವು. ಆದರೆ, ಸಂತ್ರಸ್ತ ತಲಾಲ್ ಅಬ್ಡೋ ಮಹ್ದಿ ಅವರ ಕುಟುಂಬ, ಪ್ರಿಯಾಳನ್ನು ಕ್ಷಮಿಸುವುದಿಲ್ಲ ಎಂದು ಹೇಳಿಕೆ ನೀಡಿ, ಈ ತಾತ್ಕಾಲಿಕ ನಿರಾಳತೆ ಹೆಚ್ಚು ಕಾಲ ಇರಲಿಲ್ಲ.

ಪ್ರಕರಣದ ಶೀರ್ಷಿಕೆ: ಡಾ. ಕೆ. ಎ. ಪಾಲ್ ಅಲಿಯಾಸ್ ಕಿಲಾರಿ ಆನಂದ್ ಪಾಲ್ v. ಯೂನಿಯನ್ ಆಫ್ ಇಂಡಿಯಾ, ಡಬ್ಲ್ಯೂ.ಪಿ.(ಸಿ) ನಂ. 803/2025.

ತ್ರಿಪುರಾ ಬುಡಕಟ್ಟು ಪ್ರದೇಶಗಳಲ್ಲಿ ಗ್ರಾಮ ಸಮಿತಿಗಳ ಚುನಾವಣೆ ವಿಳಂಬ; ಸುಪ್ರೀಂನಿಂದ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...