Homeಮುಖಪುಟಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಜ.5) ತಿರಸ್ಕರಿಸಿದೆ.

ಇದು ನ್ಯಾಯಾಲಯ ನಿರ್ಧರಿಸಬಹುದಾದ ಪ್ರಕರಣವಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಅವರಿದ್ದ ಸುಪ್ರೀಂ ಕೋರ್ಟ್‌ ಪೀಠ ಹೇಳಿದೆ.

“ಚಾದರ್ ಅರ್ಪಣೆ ಈಗಾಗಲೇ ನಡೆದಿರುವುದರಿಂದ ಅರ್ಜಿ ನಿರರ್ಥಕ ಎಂದಿರುವ ನ್ಯಾಯಾಲಯ, ಇದು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡುವ ವಿಷಯವೇ ಅಲ್ಲ. ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು ನ್ಯಾಯಾಲಯ ತಿಳಿಸಿದೆ.

ಈ ಬಾರಿಯ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ 814ನೇ ಉರೂಸ್ ಕಾರ್ಯಕ್ರಮ 2025ರ ಡಿಸೆಂಬರ್ 22ರಿಂದ 30ರವರೆಗೆ ನಡೆದಿದೆ. ಸಂಪ್ರದಾಯದಂತೆ ಕೇಂದ್ರ ಸರ್ಕಾರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಪರವಾಗಿ, ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ ಸಚಿವ ಕಿರಣ್ ರಿಜಿಜು ಅಜ್ಮೀರ್‌ಗೆ ತೆರಳಿ ಚಾದರ್ ಅರ್ಪಿಸಿದ್ದಾರೆ.

ಸುಪ್ರೀಂ ಕೋರ್ಟ್ ತಾನು ಈಗ ನೀಡಿರುವ ಆದೇಶ ಅಜ್ಮೀರ್ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ಮೊಕದ್ದಮೆ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಸ್ಪಷ್ಟಪಡಿಸಿದೆ.

ಉರೂಸ್‌ ವೇಳೆ ಅಜ್ಮೀರ್‌ಗೆ ದರ್ಗಾಗೆ ಕೇಂದ್ರ ಸರ್ಕಾರದ ವತಿಯಿಂದ ಚಾದರ್ ಅರ್ಪಿಸುವ ಪದ್ದತಿ 1947ರಲ್ಲಿ ಪ್ರಾರಂಭವಾಯಿತು ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಸೂರ್ಯ ಕಾಂತ್, ಈ ವಿಷಯವು ನ್ಯಾಯಸಮ್ಮತವಲ್ಲದ ಕಾರಣ ಪೀಠವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.

ಅಜ್ಮೀರ್ ದರ್ಗಾವನ್ನು ಶಿವನ ದೇಗುಲದ ಮೇಲೆ ನಿರ್ಮಿಸಲಾಗಿದೆ. ಹಾಗಾಗಿ, ಅದನ್ನು ಭಗವಾನ್ ಶ್ರೀ ಸಂಕಟಮೋಚನ್‌ ಮಹಾದೇವ್ ವಿರಾಜಮಾನ್‌ ದೇವಸ್ಥಾನ ಎಂದು ಘೋಷಿಸುವಂತೆ ಕೋರಿ ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ ಅವರು ಅಜ್ಮೀರ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಇದೇ ವಿಷ್ಣುಗುಪ್ತಾ ಈ ಹಿಂದೆಯೂ ದರ್ಗಾಗೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅಜ್ಮೀರ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನೂ ನ್ಯಾಯಾಲಯ ವಜಾಗೊಳಿಸಿತ್ತು.

ವಿವಾದ ನ್ಯಾಯಾಲಯದಲ್ಲಿರುವಾಗ ಕೇಂದ್ರ ಸರ್ಕಾರ ಚಾದರ್ ಅರ್ಪಿಸುವುದು ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ನ್ಯಾಯಸಮ್ಮತ ವಿಚಾರಣೆಯ ಹಕ್ಕನ್ನು ಹಾಳುಗೆಡವುತ್ತದೆ. ಈ ಬೆಳವಣಿಗೆಗಳಿಂದಾಗಿ ಇಡೀ ಪ್ರಕರಣ ನೆಲೆ ಕಳೆದುಕೊಳ್ಳುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಚಾದರ್ ನೀಡಬಾರದು ಎಂದು ವಿಷ್ಣಗುಪ್ತಾ ಪ್ರತಿಪಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...

ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೆತ್ತಿಕೊಂಡಾಗ ನಾಲ್ಕರಿಂದ ಐದು ಲಕ್ಷ 'ಮಿಯಾ ಮತದಾರರ' ಹೆಸರುಗಳನ್ನು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ...

ವಿಮಾನ ಪತನ : ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸೇರಿ ಐದು ಮಂದಿ ಸಾವು

ಪುಣೆ ಜಿಲ್ಲೆಯ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ...

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...