Homeಮುಖಪುಟದೆಹಲಿ ಸಿಎಂ ಸ್ಥಾನದಿಂದ ಅರವಿಂದ್ ಕೇಜ್ರಿವಾಲ್ ಕೆಳಗಿಳಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ದೆಹಲಿ ಸಿಎಂ ಸ್ಥಾನದಿಂದ ಅರವಿಂದ್ ಕೇಜ್ರಿವಾಲ್ ಕೆಳಗಿಳಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಆಪಾದಿತ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮೇ 13) ವಜಾಗೊಳಿಸಿದೆ.

ಕೇಜ್ರಿವಾಲ್ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ ಹೇಳಿದೆ. ಅಲ್ಲದೆ, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಅರ್ಜಿದಾರ ಕಾಂತ್ ಭಾಟಿ ಅವರು ಹೈಕೋರ್ಟ್‌ನ ಅರ್ಜಿದಾರರಲ್ಲ ಎಂದು ಪೀಠ ತಿಳಿಸಿದೆ.

ದೆಹಲಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದ ಸಂದೀಪ್ ಕುಮಾರ್ ಎಂಬವರು, “ಯಾವ ಅಧಿಕಾರ, ಅರ್ಹತೆ ಮತ್ತು ಶೀರ್ಷಿಕೆಯ ಮೂಲಕ ಕೇಜ್ರಿವಾಲ್ ಅವರು ಸಂವಿಧಾನದ 239ಎಎ ಅಡಿಯಲ್ಲಿ ದೆಹಲಿಯ ಮುಖ್ಯಮಂತ್ರಿ ಹುದ್ದೆಯನ್ನು ಮುಂದುವರೆಸಿದ್ದಾರೆ ಎಂಬುವುದನ್ನು ತೋರಿಸಲು ಮತ್ತು ವಿಚಾರಣೆಯ ನಂತರ ಕೇಜ್ರಿವಾಲ್ ಅವರನ್ನು ಸಿಎಂ ಕಚೇರಿಯಿಂದ ಹೊರ ಹಾಕುವಂತೆ ಕೋರಿದ್ದರು.

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೇಜ್ರಿವಾಲ್ ಅವರು ಸಂವಿಧಾನದ 239ಎಎ (4), 167 (ಬಿ) ಮತ್ತು (ಸಿ) ವಿಧಿಗಳ ಅಡಿಯಲ್ಲಿ ತಮ್ಮ ಸಾಂವಿಧಾನಿಕ ಬಾಧ್ಯತೆಗಳು ಮತ್ತು ಕಾರ್ಯಗಳನ್ನು ನಿರ್ವಹಿಸಲು ಅಸಮರ್ಥರಾಗಿದ್ದಾರೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು. ಹೀಗಾಗಿ, ಅವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದಿದ್ದರು.

ಮುಖ್ಯಮಂತ್ರಿಯ ಗೈರು ಹಾಜರಿಯ ಹಿನ್ನೆಲೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರು ಸಂವಿಧಾನದ 167 (ಸಿ) ವಿಧಿಯಡಿಯಲ್ಲಿ ಅವರ ಸಾಂವಿಧಾನಿಕ ಜವಾಬ್ದಾರಿಗಳನ್ನು ನಿರ್ವಹಿಸದಂತೆ ತಡೆಯಲಾಗುತ್ತಿದೆ ಎಂದು ಅರ್ಜಿದಾರ ಹೇಳಿದ್ದರು.

ಏಪ್ರಿಲ್ 10 ರಂದು ಪಿಐಎಲ್ ವಜಾಗೊಳಿಸಿದ್ದ ಹೈಕೋರ್ಟ್, ಅರ್ಜಿದಾರನಿಗೆ 50 ಸಾವಿರ ರೂ. ದಂಡ ವಿಧಿಸಿತ್ತು. ಈ ಪಿಐಎಲ್‌ ಪ್ರಚಾರವನ್ನು ಗಳಿಸುವ ಉದ್ದೇಶ ಹೊಂದಿದೆ ಎಂದು ಅಭಿಪ್ರಾಯಪಟ್ಟಿತ್ತು. ಈ ರೀತಿಯ ಪಿಐಎಲ್ ನಿರಾಕರಿಸಿ ನ್ಯಾಯಾಲಯ ಮೂರು ಆದೇಶಗಳನ್ನು ನೀಡಿದ್ದರೂ, ಮತ್ತೆ ಅರ್ಜಿ ಸಲ್ಲಿಸಲಾಗಿದೆ ಎಂದು ನ್ಯಾಯಾಲಯ ಹೇಳಿತ್ತು.

ಮೇ 10ರಂದು ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್‌ ಅವರಿಗೆ ಜೂನ್ 1ರವರೆಗೆ 20 ದಿನಗಳ ಮಧ್ಯಂತರ ಜಾಮೀನು ನೀಡಿದೆ.

ಇದನ್ನೂ ಓದಿ : ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...