Homeಮುಖಪುಟಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

- Advertisement -
- Advertisement -

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಈ ಘಟನೆಯನ್ನು ಸುಪ್ರೀಂ ಕೋರ್ಟ್ ಗುರುವಾರ (ಏ.2) ಗಂಭೀರವಾಗಿ ಪರಿಗಣಿಸಿದೆ.

ಮಧ್ಯರಾತ್ರಿಯ ನಂತರ ಅಧಿಕಾರಿಗಳನ್ನು ಸ್ಥಳಾಂತರಿಸುವಾಗ ಅವರ ವಾಹನಗಳ ಮೇಲೆ ಕಲ್ಲು ಮತ್ತು ಕೋಲುಗಳಿಂದ ದಾಳಿ ನಡೆಸಲಾಗಿದೆ ಎಂಬ ಆರೋಪವೂ ಕೇಳಿ ಬಂದಿದ್ದು, ಈ ವಿಷಯವನ್ನೂ ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದೆ.

ಮಾಲ್ಡಾ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಘಟನೆಯ ಬಗ್ಗೆ ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಂದ ಬಂದ ಪತ್ರವನ್ನು ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ. ಅಧಿಕೃತ ಕರ್ತವ್ಯ ನಿರ್ವಹಿಸುತ್ತಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನೆಯ ಸಂದರ್ಭದಲ್ಲಿ ಸುತ್ತುವರಿದು, ಅವರು ಆ ಪ್ರದೇಶದಿಂದ ಹೊರಹೋಗದಂತೆ ತಡೆಯಲಾದ ಘಟನೆಯ ವಿವರಗಳು ಈ ಪತ್ರದಲ್ಲಿದ್ದವು ಎಂದು ಕಾನೂನು ಸುದ್ದಿ ಸಂಸ್ಥೆ livelaw.in ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಾಲ್ಯ ಬಾಗ್ಚಿ ಮತ್ತು ವಿಪುಲ್ ಪಾಂಚೋಲಿ ಅವರನ್ನೊಳಗೊಂಡ ಪೀಠವು, ಈ ಪ್ರಕರಣವನ್ನು ಇಂದು ವಿಚಾರಣೆಗೆ ಪಟ್ಟಿ ಮಾಡಿರದಿದ್ದರೂ, ವಿಷಯದ ಗಂಭೀರತೆಯನ್ನು ಪರಿಗಣಿಸಿ ಇಂದು ಬೆಳಿಗ್ಗೆ ವಿಚಾರಣೆಗೆ ಕೈಗೆತ್ತಿಕೊಂಡಿದೆ.

ಈ ತುರ್ತು ವಿಚಾರಣೆಯಲ್ಲಿ ಅರ್ಜಿದಾರರು ಮತ್ತು ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್, ಶ್ಯಾಮ್ ದಿವಾನ್, ಗೋಪಾಲ್ ಸಂಕರನಾರಾಯಣನ್ ಮತ್ತು ಮೇನಕಾ ಗುರುಸ್ವಾಮಿ ಅವರು ಹಾಜರಿದ್ದರು. ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಭಾರತೀಯ ಚುನಾವಣಾ ಆಯೋಗದ ಪರವಾಗಿ ಹಿರಿಯ ವಕೀಲ ದಮ ಶೇಷಾದ್ರಿ ನಾಯ್ಡು ಅವರು ಸಹ ಉಪಸ್ಥಿತರಿದ್ದರು.

ಈ ಘಟನೆಯನ್ನು ನ್ಯಾಯಾಂಗ ಅಧಿಕಾರಿಗಳ ಮೇಲೆ ನಡೆಸಿದ ‘ಪೂರ್ವ ಯೋಜಿತ’ ದಾಳಿ ಎಂದು ಬಣ್ಣಿಸಿದ ಪೀಠವು, ಇದು ನ್ಯಾಯಾಲಯದ ಅಧಿಕಾರಕ್ಕೆ ಸವಾಲು ಹಾಕುವಂತಿದೆ ಮತ್ತು ಕ್ರಿಮಿನಲ್ ನ್ಯಾಯಾಂಗ ನಿಂದನೆಯ ಅಡಿಯಲ್ಲಿ ಬರುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಪಶ್ಚಿಮ ಬಂಗಾಳದ ನಾಗರಿಕ ಮತ್ತು ಪೊಲೀಸ್ ಆಡಳಿತವು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದೆ. ನ್ಯಾಯಾಂಗ ಅಧಿಕಾರಿಗಳು ಮತ್ತು ಅವರ ಕುಟುಂಬದ ರಕ್ಷಣೆಗಾಗಿ ದೇಶದ ಯಾವುದೇ ಭಾಗದಿಂದಲಾದರೂ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಈ ಘಟನೆಯ ಬಗ್ಗೆ ಸಿಬಿಐ ಅಥವಾ ಎನ್‌ಐಎ ಮೂಲಕ ತನಿಖೆ ನಡೆಸಲು ಚುನಾವಣಾ ಆಯೋಗಕ್ಕೆ ಪೀಠವು ಅನುಮತಿ ನೀಡಿದೆ.

livelaw.in ವರದಿ ಪ್ರಕಾರ, ಕಳೆದ ತಡರಾತ್ರಿ ನ್ಯಾಯಾಂಗ ಅಧಿಕಾರಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಾವೇ ಖುದ್ದಾಗಿ ತುರ್ತು ಆದೇಶಗಳನ್ನು ಹೊರಡಿಸಬೇಕಾಯಿತು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಬಹಿರಂಗಪಡಿಸಿದ್ದಾರೆ. ಅಧಿಕಾರಿಗಳ ಪ್ರಾಣಕ್ಕೆ ಅಪಾಯವಿರುವಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ, ನ್ಯಾಯಾಲಯವು ಮಧ್ಯರಾತ್ರಿಯಲ್ಲೇ ಹಸ್ತಕ್ಷೇಪ ಮಾಡುವುದು ಅನಿವಾರ್ಯವಾಗಿತ್ತು ಎಂದು ಅವರು ತಿಳಿಸಿದ್ದಾರೆ.

“ರಾತ್ರಿ 11 ಗಂಟೆಯವರೆಗೂ ನಿಮ್ಮ ಕಲೆಕ್ಟರ್ (ಜಿಲ್ಲಾಧಿಕಾರಿ) ಅಲ್ಲಿ ಇರಲಿಲ್ಲ. ಅನಿವಾರ್ಯವಾಗಿ ನಾನು ಮಧ್ಯರಾತ್ರಿಯಲ್ಲಿ ಅತ್ಯಂತ ಕಠಿಣವಾದ ಮೌಖಿಕ ಆದೇಶಗಳನ್ನು ನೀಡಬೇಕಾಯಿತು. ಅಲ್ಲಿ ಒಂದು 5 ವರ್ಷದ ಮಗುವಿಗೆ ಆಹಾರ ಮತ್ತು ನೀರನ್ನು ಸಹ ನೀಡಲು ಬಿಟ್ಟಿರಲಿಲ್ಲ!” ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಈ ಘಟನೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಾ ರಾಜ್ಯ ಸರ್ಕಾರಕ್ಕೆ ಹೇಳಿದ್ದಾರೆ.

ವಿಚಾರಣೆ ವೇಳೆ ವಕೀಲೆ ಮೇನಕಾ ಗುರುಸ್ವಾಮಿ ಅವರು ಇದು “ರಾಜಕೀಯೇತರ ಪ್ರತಿಭಟನೆ” ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ಒಂದು ವೇಳೆ ಪ್ರತಿಭಟನೆ ರಾಜಕೀಯೇತರವಾಗಿದ್ದರೆ, ಅಲ್ಲಿ ರಾಜಕೀಯ ನಾಯಕರು ಏನು ಮಾಡುತ್ತಿದ್ದರು? ಅಲ್ಲಿ ಏನು ನಡೆಯುತ್ತಿದೆ ಎಂದು ಸ್ಥಳಕ್ಕೆ ಹೋಗಿ ನೋಡುವುದು ಅವರ ಕರ್ತವ್ಯವಾಗಿರಲಿಲ್ಲವೇ? ಯಾರೋ ಒಬ್ಬರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕೈಗೆತ್ತಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಅವರು ಸುಮ್ಮನಿದ್ದರೇ? ಸಂಜೆ 5 ಗಂಟೆಗೆ ಈ ಜನರು ಅಧಿಕಾರಿಗಳನ್ನು ಘೇರಾವ್ ಮಾಡಿದ್ದಾರೆ. ರಾತ್ರಿ 11 ಗಂಟೆಯವರೆಗೂ ನಿಮ್ಮ ಕಲೆಕ್ಟರ್ (ಜಿಲ್ಲಾಧಿಕಾರಿ) ಅಲ್ಲಿ ಇರಲಿಲ್ಲ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ವಕೀಲ ಗೋಪಾಲ್ ಸಂಕರನಾರಾಯಣನ್ ಅವರು ಪಶ್ಚಿಮ ಬಂಗಾಳದ ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಅಧಿಕಾರಿಗಳ ರಕ್ಷಣೆಗಾಗಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ರಾಜ್ಯದ ಪೊಲೀಸ್ ಮತ್ತು ನಾಗರಿಕ ಆಡಳಿತವು ವಿಫಲವಾಗಿರುವ ಹಿನ್ನೆಲೆಯಲ್ಲಿ, ಕೇಂದ್ರ ಪಡೆಗಳ ಹಸ್ತಕ್ಷೇಪ ಅತ್ಯಗತ್ಯ ಎಂದು ಅವರು ವಾದಿಸಿದ್ದಾರೆ.

ಚುನಾವಣಾ ಆಯೋಗದ ಪರ ವಕೀಲ ದಮ ಶೇಷಾದ್ರಿ ನಾಯ್ಡು ಅವರು ಇಂತಹ “ಗುಂಪುಶಾಹಿ” (mobocracy) ಅಥವಾ ಪುಂಡಾಟಿಕೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ವಾದಿಸಿದ್ದಾರೆ. ಇದೇ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೂಡ ತೀವ್ರವಾಗಿ ಪ್ರತಿಕ್ರಿಯಿಸಿ, “ಇದು ಕೇವಲ ಅಧಿಕಾರಿಗಳ ಮೇಲಿನ ದಾಳಿಯಲ್ಲ, ಬದಲಿಗೆ ಸುಪ್ರೀಂ ಕೋರ್ಟ್ ಮೇಲೆಯೇ ನಡೆದ ದಾಳಿ” ಎಂದು ಬಣ್ಣಿಸಿದ್ದಾರೆ.

ಸುಪ್ರೀಂ ಕೋರ್ಟ್ ವಹಿಸಿದ ಜವಾಬ್ದಾರಿಯನ್ನು ಈ ನ್ಯಾಯಾಂಗ ಅಧಿಕಾರಿಗಳು ನಿರ್ವಹಿಸುತ್ತಿದ್ದರಿಂದ, ಅವರ ಮೇಲೆ ನಡೆದ ಈ ಕೃತ್ಯವು “ಅಪರಾಧ ಸದೃಶ ಮತ್ತು ಅಕ್ಷಮ್ಯ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...