Homeಮುಖಪುಟಸಿಎಎ ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ

ಸಿಎಎ ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಮಂಗಳವಾರ  ನಿರಾಕರಿಸಿದ್ದು, ಈ ಕುರಿತು ಪ್ರತಿಕ್ರಿಯಿಸಲು ಮೂರು ವಾರಗಳ ಕಾಲಾವಕಾಶವನ್ನು ನೀಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ 237 ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿತ್ತು. ಲೋಕಸಭೆ ಚುನಾವಣೆಗೆ ಇನ್ನೇನು ಕೆಲವು ದಿನಗಳ ಬಾಕಿ ಇರುವಾಗ ಈ ಕುರಿತು ಅಧಿಸೂಚನೆ ಹೊರಡಿಸಲಾಗಿತ್ತು. ಅರ್ಜಿಗಳ ವಿಚಾರಣೆಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲ ಮತ್ತು ಮನೋಜ್‌ ಮಿಶ್ರಾ ಅವರ ಪೀಠ ನಡೆಸಿದೆ.

ಸಿಎಎ ಪ್ರಶ್ನಿಸಿ ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್‌, ಡೆಮಾಕ್ರೆಟಿಕ್‌ ಯುತ್‌ ಫೆಡರೇಷನ್‌ ಆಫ್‌ ಇಂಡಿಯಾ, ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌, ತೃಣಮೂಲ ನಾಯಕಿ ಮಹುವಾ ಮೊಯಿತ್ರಾ ಮತ್ತು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್‌ ಉವೈಸಿ ಸೇರಿ 237 ಅರ್ಜಿಗಳು ಸಲ್ಲಿಕೆಯಾಗಿತ್ತು. ಅರ್ಜಿದಾರರು ಸಿಎಎ ಅನುಷ್ಠಾನಕ್ಕೆ ತಡೆ ಕೋರಿದ್ದರು, ಇದು ತಾರತಮ್ಯ ಮತ್ತು ಮುಸ್ಲಿಂ ಸಮುದಾಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದರು. ಈ ಕುರಿತು ಅಧ್ಯಯನ ಮಾಡಲು ಹೆಚ್ಚಿನ ಕಾಲಾವಕಾಶ ನೀಡುವಂತೆ ಸರ್ಕಾರದ ಮನವಿಯನ್ನು ವಿರೋಧಿಸುವುದಿಲ್ಲ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದರು, ಆದರೆ ಅನುಷ್ಠಾನಕ್ಕೆ ತಡೆಯಾಜ್ಞೆ ನೀಡುವಂತೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠವನ್ನು ಒತ್ತಾಯಿಸಿದ್ದರು.

 

2019ರಲ್ಲಿ ಸಂಸತ್ತಿನಲ್ಲಿ ಪೌರತ್ವ ಮಸೂದೆಯ ವಿರುದ್ಧ ಅನೇಕ ಅರ್ಜಿಗಳನ್ನು ಸಲ್ಲಿಸಲಾಗಿದೆ ಆದರೆ ನ್ಯಾಯಾಲಯವು ನಿಯಮಗಳನ್ನು ತಿಳಿಸದ ಕಾರಣ ಅನುಷ್ಠಾನಕ್ಕೆ ವಿರಾಮ ನೀಡಿರಲಿಲ್ಲ. ಇದೀಗ ಕಾನೂನಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು ಏಪ್ರಿಲ್ 9 ರಂದು ಮುಂದಿನ ವಿಚಾರಣೆ ನಡೆಸುವುದಾಗಿ ಹೇಳಿದೆ.

ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಮಾರ್ಚ್ 11ರಂದು ಕೇಂದ್ರ ಗೃಹ ಸಚಿವಾಲಯವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನದ ನಿಯಮಗಳನ್ನು ಪ್ರಕಟಿಸಿದೆ. 2019ರಲ್ಲಿ ಸಂಸತ್ತು ಅಂಗೀಕರಿಸಿದ CAA ನಿಯಮಗಳು, ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುವ ಗುರಿಯನ್ನು ಹೊಂದಿವೆ.

ಇದನ್ನು ಓದಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಎನ್‌ಡಿಎ ಮೈತ್ರಿಯಲ್ಲಿ ಬಿರುಕು: ಕೇಂದ್ರ ಸಚಿವ ಪಶುಪತಿ ಕುಮಾರ್ ರಾಜೀನಾಮೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...