Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ : ಬಿಆರ್‌ಎಸ್‌ ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

ದೆಹಲಿ ಅಬಕಾರಿ ನೀತಿ ಪ್ರಕರಣ : ಬಿಆರ್‌ಎಸ್‌ ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

- Advertisement -
- Advertisement -

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಆ.27) ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ವಿಚಾರಣೆಯ ಸಂದರ್ಭದಲ್ಲಿ, ಪ್ರಾಸಿಕ್ಯೂಷನ್ ಏಜೆನ್ಸಿಯ (ಸಿಬಿಐ/ಇಡಿ) ನ್ಯಾಯಸಮ್ಮತತೆಯನ್ನು ಪ್ರಶ್ನಿಸಿದೆ. ಆಯ್ದ ಆರೋಪಿಗಳ ಪ್ರಕರಣಗಳಲ್ಲಿ ಮಾತ್ರ ಸಕಾರಾತ್ಮಕವಾಗಿ ಸ್ಪಂದಿಸುವ ಅವುಗಳ ಪಕ್ಷಪಾತ ನಡೆಯನ್ನು ಟೀಕಿಸಿದೆ.

ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿರುವುದನ್ನು ಪ್ರಶ್ನಿಸಿ ಕವಿತಾ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿಬಿಐ ಮತ್ತು ಇಡಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿತ್ತು.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಎಎಪಿ ನಾಯಕಿ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡಲಾಗಿದೆ ಎಂಬ ಅಂಶವನ್ನು ಕವಿತಾ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಕವಿತಾ ಅವರು ತಮ್ಮ ಮೊಬೈಲ್ ನಾಶಪಡಿಸಿದ್ದಾರೆ. ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ ಅವರಿಗೆ ಜಾಮೀನು ನೀಡಬಾರದು ಎಂದು ತನಿಖಾ ಸಂಸ್ಥೆಗಳ ಪರ ನ್ಯಾಯಾಲಯಕ್ಕೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ ರಾಜು ಪ್ರತಿಪಾದಿಸಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಎರಡೂ ಪ್ರಕರಣಗಳಲ್ಲಿ ತಲಾ 10 ಲಕ್ಷ ರೂ.ಗಳ ಬಾಂಡ್‌ಗಳನ್ನು ಒದಗಿಸುವ ಮೂಲಕ ಕವಿತಾ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಅನುಮತಿ ನೀಡಿದೆ. ನ್ಯಾಯಾಲಯವು ಪಾಸ್‌ಪೋರ್ಟ್ ಅನ್ನು ವಶಕ್ಕೆ ನೀಡುವಂತೆ ಕವಿತಾ ಅವರಿಗೆ ನಿರ್ದೇಶಿಸಿದ್ದು, ಆಕೆ ಶ್ಯೂರಿಟಿಗಳ ಮೇಲೆ ಪ್ರಭಾವ ಬೀರಲು ಅಥವಾ ಬೆದರಿಸಲು ಪ್ರಯತ್ನಿಸಬಾರದು ಎಂದಿದೆ.

ಕವಿತಾ ಅವರನ್ನು ಮಾರ್ಚ್ 15 ರಂದು ಸಂಜೆ ಇಡಿ ಬಂಧಿಸಿತ್ತು. ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಅಲ್ಲಿಂದಲೇ ಅವರನ್ನು ಸಿಬಿಐ ಬಂಧಿಸಿತ್ತು.

ಇದನ್ನೂ ಓದಿ : ಹೈದರಾಬಾದ್ | ರಾಜಕೀಯ ಕಿತ್ತಾಟಕ್ಕೆ ಕಾರಣವಾದ ‘HYDRA’ ಒತ್ತುವರಿ ತೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...