ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ.
ಜಿಎಸ್‌ಟಿ ವಂಚನೆ ಆರೋಪದಲ್ಲಿ ಲಾಂಗಾ ಅವರನ್ನು ಮೊದಲು ಅಕ್ಟೋಬರ್ 7,2024 ರಂದು ಬಂಧಿಸಲಾಗಿತ್ತು. ಫೆಬ್ರವರಿ 20, 2025ರಂದು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲಾಯಿತು.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಪಾಂಚೋಲಿ ಅವರಿದ್ದ ಪೀಠವು ಲಾಂಗಾ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸುತ್ತಿತ್ತು.
ಜಾಮೀನು ನೀಡುವಾಗ ಸುಪ್ರೀಂ ಕೋರ್ಟ್ ಈ ಕೆಳಗಿನ ಷರತ್ತುಗಳನ್ನು ವಿಧಿಸಿದೆ ಅಥವಾ ನಿರ್ದೇಶನಗಳನ್ನು ನೀಡಿದೆ
1. ಹಣ ಅಕ್ರಮ ವರ್ಗಾವಣೆ (ತಡೆ) ಕಾಯ್ದೆ ಅಡಿಯಲ್ಲಿ ವಿಶೇಷ ನ್ಯಾಯಾಲಯದ ಸೂಚನೆಗಳ ಮೇರೆಗೆ ಜಾಮೀನು ಬಾಂಡ್‌ಗಳನ್ನು ಒದಗಿಸಬೇಕು.
2. 9 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲು ವಿಶೇಷ ನ್ಯಾಯಾಲಯವು ದಿನನಿತ್ಯದ ಆಧಾರದ ಮೇಲೆ ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕು.
3. ಅರ್ಜಿದಾರರು ಮತ್ತು ಅವರ ವಕೀಲರು ವಿಶೇಷ ನ್ಯಾಯಾಲಯಕ್ಕೆ ಸಂಪೂರ್ಣ ಸಹಕಾರ ನೀಡಬೇಕು.
4. ಪ್ರಕರಣ ರದ್ದುಗೊಳಿಸುವ ಅರ್ಜಿಯು ಹೈಕೋರ್ಟ್‌ನಲ್ಲಿ ಬಾಕಿ ಇದೆ ಎಂಬ ಕಾರಣಕ್ಕಾಗಿ ಯಾವುದೇ ಮುಂದೂಡಿಕೆಗೆ ಅವಕಾಶ ನೀಡಬಾರದು.
5. ಅರ್ಜಿದಾರರು ಅಹಮದಾಬಾದ್‌ನ ವಿಶೇಷ ನ್ಯಾಯಾಧೀಶರ ಮುಂದೆ ತಮ್ಮ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಪತ್ರಿಕೆಯ ಸಹಾಯಕ ಸಂಪಾದಕ ಹುದ್ದೆಯಲ್ಲಿ ಯಾವುದೇ ಲೇಖನವನ್ನು ಪ್ರಕಟಿಸಬಾರದು ಅಥವಾ ಬರೆಯಬಾರದು. ಅರ್ಜಿದಾರರು ತಮ್ಮ ಆಕ್ಷೇಪಣೆಗಳನ್ನು/ಯಾವುದೇ ಹೆಚ್ಚುವರಿ ವಿಷಯವನ್ನು ದಾಖಲಿಸಲು ಸ್ವಾತಂತ್ರ್ಯ ಹೊಂದಿದ್ದಾರೆ.
6. ಅರ್ಜಿದಾರರು ಷರತ್ತುಗಳ ಅನುಸರಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸ್ಥಿತಿ ವರದಿಯನ್ನು ಸಲ್ಲಿಸಬೇಕು.
ಅರ್ಜಿದಾರರು ಮೇಲಿನ ಷರತ್ತುಗಳನ್ನು ಪಾಲಿಸುತ್ತಿರುವ ಬಗ್ಗೆ ಸ್ಥಿತಿ ವರದಿಯನ್ನು ಸಲ್ಲಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಪೀಠವು ನಿರ್ದೇಶನ ನೀಡಿದೆ. ಮಧ್ಯಂತರ ಜಾಮೀನು ದುರುಪಯೋಗಪಡಿಸಿಕೊಂಡರೆ, ಆದೇಶವನ್ನು ಹಿಂಪಡೆಯಲಾಗುವುದು ಎಂದು ಎಚ್ಚರಿಸಿದೆ.


