Homeಮುಖಪುಟಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

- Advertisement -
- Advertisement -

‘ಆಪರೇಷನ್ ಸಿಂಧೂರ’ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದ ಪೋಸ್ಟ್ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮೂದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ (ಮೇ 21) ಮಧ್ಯಂತರ ಜಾಮೀನು ನೀಡಿದೆ ಎಂದು ವರದಿಯಾಗಿದೆ.

ಅಲಿ ಖಾನ್ ಅವರನ್ನು ಮೇ 18 ರಂದು ಬಂಧಿಸಲಾಗಿತ್ತು. ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ಅವರನ್ನು ಮೇ 20ರಂದು ಸೋನೆಪತ್ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಈ ನಡುವೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಖಾನ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಆದರೆ, ಅವರ ವಿರುದ್ದ ಹರಿಯಾಣ ಪೊಲೀಸರು ದಾಖಲಿಸಿರುವ ಎರಡು ಎಫ್‌ಐಆರ್‌ಗಳಿಗೆ ತಡೆ ನೀಡಲು ನಿರಾಕರಿಸಿದೆ.

ಅಲಿ ಖಾನ್ ಅವರ ಪೋಸ್ಟ್‌ನ ನಿಜವಾದ ಅರ್ಥವನ್ನು ಅರ್ಥಮಾಡಿಕೊಳ್ಳಲು ಮತ್ತು ತನಿಖೆ ಮಾಡಲು ಹರಿಯಾಣ ಅಥವಾ ದೆಹಲಿಗೆ ಸಂಬಂಧಿಸದ ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) 24 ಗಂಟೆಗಳ ಒಳಗೆ ರಚಿಸುವಂತೆ ಇದೇ ವೇಳೆ ಸುಪ್ರೀಂ ಕೋರ್ಟ್ ಹರಿಯಾಣ ಡಿಜಿಪಿಗೆ ನಿರ್ದೇಶನ ನೀಡಿದೆ.

ಎಸ್‌ಐಟಿಯ ಒಬ್ಬ ಅಧಿಕಾರಿ ಮಹಿಳೆಯಾಗಿರಬೇಕು. ಎಸ್‌ಐಟಿಗೆ ಐಜಿ ಶ್ರೇಣಿಯ ಅಧಿಕಾರಿ ನೇತೃತ್ವ ವಹಿಸಬೇಕು ಮತ್ತು ಉಳಿದ ಇಬ್ಬರು ಸದಸ್ಯರು ಎಸ್‌ಪಿ ಶ್ರೇಣಿಯವರಾಗಿರಬೇಕು ಎಂದು ಸೂಚಿಸಿದೆ.

ಜಾಮೀನು ನೀಡುವ ವೇಳೆ, ಪ್ರಕರಣ ದಾಖಲಾಗಲು ಕಾರಣವಾಗಿರುವ ಪೋಸ್ಟ್‌ಗೆ ಸಂಬಂಧಿಸಿದ ಯಾವುದೇ ಹೊಸ ಪೋಸ್ಟ್‌ಗಳನ್ನು ಹಾಕುವುದು ಅಥವಾ ಲೇಖನಗಳನ್ನು ಬರೆಯುವುದಕ್ಕೆ ಮತ್ತು ಭಾರತೀಯ ನೆಲದಲ್ಲಿ ನಡೆದ ಭಯೋತ್ಪಾದಕ ದಾಳಿ ಅಥವಾ ಭಾರತ ಅವುಗಳಿಗೆ ನೀಡಿದ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸದಂತೆ ಸುಪ್ರೀಂ ಕೋರ್ಟ್ ಅಲಿ ಖಾನ್ ಅವರಿಗೆ ನಿರ್ಬಂಧ ವಿಧಿಸಿದೆ.

ತನಿಖೆಗೆ ಸಂಪೂರ್ಣವಾಗಿ ಸಹಕರಿಸುವಂತೆ ಮತ್ತು ಪಾಸ್‌ಪೋರ್ಟ್ ಒಪ್ಪಿಸುವಂತೆ ನ್ಯಾಯಾಲಯ ಸೂಚಿಸಿದೆ.

ನ್ಯಾಯಾಲಯ ಆದೇಶ ಹೊರಡಿಸಿದ ನಂತರ ಅರ್ಜಿದಾರರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಅಲಿ ಖಾನ್ ಅವರ ವಿರುದ್ದ ಪ್ರಸ್ತುತ ವಿಷಯದ ಕುರಿತು ಹೊಸ ಎಫ್‌ಐಆರ್‌ಗಳನ್ನು ದಾಖಲಿಸದಂತೆ ತಡೆಯಲು ನ್ಯಾಯಾಲಯವನ್ನು ಕೋರಿದರು. ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿ ಸೂರ್ಯ ಕಾಂತ್  ಅವರು,”ಏನೂ ಆಗುವುದಿಲ್ಲ” ಎಂದು ಮೌಖಿಕವಾಗಿ ಹೇಳಿದರು. ಈ ಬಗ್ಗೆ ಗಮನಿಸುವಂತೆ ಹರಿಯಾಣ ರಾಜ್ಯ ಸರ್ಕಾರಕ್ಕೂ ಸೂಚಿಸಿದರು. ತನಿಖೆಯ ಸಮಯದಲ್ಲಿ ಕಂಡುಕೊಳ್ಳುವ ಯಾವುದೇ ಹೆಚ್ಚಿನ ಅಪರಾಧದ ವಸ್ತುಗಳನ್ನು ದಾಖಲಿಸಲು ಕೋರ್ಟ್ ರಾಜ್ಯಕ್ಕೆ ಅವಕಾಶ ನೀಡಿದೆ ಎಂದು livelaw.in ವರದಿ ಮಾಡಿದೆ.

ವಿಚಾರಣೆಯ ಆರಂಭದಲ್ಲಿ, ವಕೀಲ ಕಪಿಲ್ ಸಿಬಲ್ ಅವರು ಅಲಿ ಖಾನ್ ಅವರು ತಮ್ಮ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಗಳಲ್ಲಿ ಆಪರೇಷನ್ ಸಿಂಧೂರ ಕುರಿತು ಹಾಕಿದ್ದ ಪೋಸ್ಟ್ ಬಗ್ಗೆ ಪೀಠದ ಗಮನ ಸೆಳೆದರು. ಅವರ ಪೋಸ್ಟ್ ಅನ್ನು ಪೀಠಕ್ಕೆ ಓದಿ ಹೇಳಿದರು. ಇದು ಅತ್ಯಂತ ದೇಶಭಕ್ತಿಯ ಪೋಸ್ಟ್ ಎಂದು ವಿವರಿಸಿದರು.

ಈ ವೇಳೆ “ಆಪರೇಷನ್ ಸಿಂಧೂರ ಕುರಿತ ಮಾಧ್ಯಮಗೋಷ್ಠಿಯ ನೇತೃತ್ವ ವಹಿಸಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಹೊಗಳುವ ಬಲಪಂಥೀಯರು ಗುಂಪು ಹಲ್ಲೆ ಮತ್ತು ಆಸ್ತಿಗಳ ಅನಿಯಂತ್ರಿತ ಧ್ವಂಸಕ್ಕೆ ಬಲಿಯಾದವರ ಪರವಾಗಿ ಮಾತನಾಡುವಂತೆ” ಅಲಿಖಾನ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, “ಯುದ್ಧದ ಬಗ್ಗೆ ಹೇಳಿಕೆ ನೀಡಿದ ನಂತರ ಅಲಿ ಖಾನ್ ರಾಜಕೀಯದತ್ತ ತಿರುಗಿದ್ದಾರೆ” ಎಂದು ಹೇಳಿದ್ದಾರೆ.

“ಪ್ರತಿಯೊಬ್ಬರಿಗೂ ಮುಕ್ತ ಅಭಿವ್ಯಕ್ತಿಯ ಹಕ್ಕು ಇದೆ. ಆದರೆ ಕೋಮುವಾದದ ಬಗ್ಗೆ ಇಷ್ಟೊಂದು ಮಾತನಾಡುವ ಸಮಯ ಇದುವಾ? ದೇಶ ದೊಡ್ಡ ಸವಾಲನ್ನು ಎದುರಿಸುತ್ತಿದೆ. ರಾಕ್ಷಸರು ಎಲ್ಲೆಡೆ ಬಂದು ನಮ್ಮ ಮುಗ್ಧ ಜನರ ಮೇಲೆ ದಾಳಿ ಮಾಡಿದ್ದಾರೆ. ನಾವು ಒಗ್ಗಟ್ಟಿನಿಂದ ಇದ್ದೇವೆ. ಈ ಸಮಯದಲ್ಲಿ ಈ ರೀತಿಯ ಅಗ್ಗದ ಜನಪ್ರಿಯತೆ ಬೇಕು?” ಎಂದು ನ್ಯಾಯಮೂರ್ತಿ ಕಾಂತ್ ಪ್ರಶ್ನಿಸಿದ್ದಾರೆ.

ಈ ವೇಳೆ ಅಲಿ ಖಾನ್ ಅವರ ಹೇಳಿಕೆಗಳನ್ನು ಸಮರ್ಥಿಸಿಕೊಂಡ ವಕೀಲ ಕಪಿಲ್ ಸಿಬಲ್, “ಅವರ ಪೋಸ್ಟ್‌ನಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿದ ನ್ಯಾ.ಕಾಂತ್, “ಕಳೆದ 75 ವರ್ಷಗಳಿಂದ ದೇಶ ಹಕ್ಕುಗಳನ್ನು ವಿತರಿಸುತ್ತಿದೆ ಎಂಬಂತೆ, ಎಲ್ಲರೂ ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಸೌಜನ್ಯ ; livelaw.in

ಎನ್‌ಇಪಿ ಜಾರಿಗೊಳಿಸದ್ದಕ್ಕೆ ಶೈಕ್ಷಣಿಕ ಯೋಜನೆಗಳ ಅನುದಾನ ತಡೆಹಿಡಿದ ಕೇಂದ್ರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...